ನಲಪಾಡ್ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಶಾಸಕ ಹ್ಯಾರಿಸ್‌ ಪುತ್ರ ಮೊಹಮ್ಮದ್ ನಲಪಾಡ್‌ ಜಾಮೀನು ಅರ್ಜಿಯನ್ನು ಇಂದು ಹೈಕೋರ್ಟ್ ವಜಾಗೊಳಿಸಿದೆ.   

Last Updated : Mar 14, 2018, 07:18 PM IST
ನಲಪಾಡ್ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್ title=

ಬೆಂಗಳೂರು : ಶಾಸಕ ಹ್ಯಾರಿಸ್‌ ಪುತ್ರ ಮೊಹಮ್ಮದ್ ನಲಪಾಡ್‌ ಜಾಮೀನು ಅರ್ಜಿಯನ್ನು ಇಂದು ಹೈಕೋರ್ಟ್ ವಜಾಗೊಳಿಸಿದೆ. 

ಹೈಕೋರ್ಟ್ ನ್ಯಾಯಮೂರ್ತಿ ಶ್ರೀನಿವಾಸ್ ಕುಮಾರ್ ಅವರಿದ್ದ ಏಕಸದಸ್ಯ ಪೀಠ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ನಲಪಾಡ್ ಪರ ಖ್ಯಾತ ವಕೀಲ ಸಿ.ವಿ.ನಾಗೇಶ್ ಕುಮಾರ್ ವಾದ ಮಂಡಿಸಿದ್ದರೆ, ಸರ್ಕಾರಿ ಅಭಿಯೋಜಕ ಶ್ಯಾಮ್ ಸುಂದರ್ ವಿದ್ವತ್ ಪರ ವದ ಮಂಡಿಸಿದ್ದರು. ವಾದ ಆಲಿಸಿದ್ದ ನ್ಯಾ.ಶ್ರೀನಿವಾಸ್ ಕುಮಾರ್‌ ಅವರು ಎರಡು ದಿನಗಳ ಹಿಂದೆ ತೀರ್ಪು ಕಾಯ್ದಿರಿಸಿದ್ದರು.

ಫೆ.17ರಂದು ಯುಬಿ ಸಿಟಿಯ ಫರ್ಜಿ ಕಫೆಯಲ್ಲಿ ವಿದ್ವತ್ ಮೇಲೆ ಹಲ್ಲೆ ನಡೆಸಿದ್ದ ಮೊಹಮ್ಮದ್ ನಲಪಾಡ್ ಹಾಗೂ ಸಹಚರರನ್ನು ಫೆ.21ರಂದು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿತ್ತು. ಕಳೆದ 22 ದಿನಗಳಿಂದ ಶಾಸಕರ ಪುತ್ರ ನಲಪಾಡ್ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. 

Trending News