ಅಧಿಕ ಪವನ ಶಕ್ತಿ ಸಾಮರ್ಥ್ಯ: ಕರ್ನಾಟಕಕ್ಕೆ 2ನೇ ಸ್ಥಾನ

High wind power: 2023-24ನೇ ಸಾಲಿನಲ್ಲಿ ನಿಯೋಜಿಸಲಾದ ಅತ್ಯಧಿಕ ಪವನ ವಿದ್ಯುತ್‌ ಸಾಮರ್ಥ್ಯಕ್ಕಾಗಿ ಕರ್ನಾಟಕ 2ನೇ ಸ್ಥಾನವನ್ನು ಪಡೆದುಕೊಂಡಿದೆ. 

Written by - Prashobh Devanahalli | Last Updated : Jun 18, 2024, 04:26 PM IST
  • ಅತ್ಯಧಿಕ ಪವನ ವಿದ್ಯುತ್‌ ಸಾಮರ್ಥ್ಯ
  • ಕರ್ನಾಟಕಕ್ಕೆ 2ನೇ ಸ್ಥಾನ
  • ಪವನ ವಿದ್ಯುತ್‌ ವಲಯದಲ್ಲಿ ಸಾಧನೆ
ಅಧಿಕ ಪವನ ಶಕ್ತಿ ಸಾಮರ್ಥ್ಯ: ಕರ್ನಾಟಕಕ್ಕೆ 2ನೇ ಸ್ಥಾನ  title=

ಬೆಂಗಳೂರು: 2023-24ನೇ ಸಾಲಿನಲ್ಲಿ ನಿಯೋಜಿಸಲಾದ ಅತ್ಯಧಿಕ ಪವನ ವಿದ್ಯುತ್‌ ಸಾಮರ್ಥ್ಯಕ್ಕಾಗಿ ಕರ್ನಾಟಕ 2ನೇ ಸ್ಥಾನವನ್ನು ಪಡೆದುಕೊಂಡಿದೆ. ಹೊಸದಿಲ್ಲಿಯಲ್ಲಿ ಶನಿವಾರ ನಡೆದ 'ಗ್ಲೋಬಲ್ ವಿಂಡ್ ಡೇ' 2024 "ಪವನ್-ಉರ್ಜಾ: ಪವರ್ನಿಂಗ್ ದಿ ಫ್ಯೂಚರ್ ಆಫ್ ಇಂಡಿಯಾ" ಸಮಾರಂಭದಲ್ಲಿ ಹೊಸ ಮತ್ತು ನವೀಕರಿಸಬಹುದಾದ ಇಂಧನ ಇಲಾಖೆಯ ರಾಜ್ಯ ಸಚಿವರಾದ  ಶ್ರೀಪಾದ್ ಯೆಸ್ಸೋ ನಾಯಕ್ ಅವರಿಂದ ಕ್ರೆಡಲ್‌ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ. ರುದ್ರಪಯ್ಯ ಪ್ರಶಸ್ತಿ ಸ್ವೀಕರಿಸಿದರು.  

ಪವನ ವಿದ್ಯುತ್‌ ವಲಯದಲ್ಲಿನ ಸಾಧನೆಯನ್ನು ಗುರುತಿಸಿ ರಾಜ್ಯಕ್ಕೆ ಪ್ರಶಸ್ತಿ ನೀಡಲಾಗಿದೆ. ಗುಜರಾತ್ ಅಗ್ರಸ್ಥಾನ ಪಡೆದರೆ, ತಮಿಳುನಾಡು 3ನೇ ಸ್ಥಾನ ಪಡೆದುಕೊಂಡಿದೆ. ಅತ್ಯಧಿಕ ಪವನ ವಿದ್ಯುತ್‌ ಸಾಮರ್ಥ್ಯಕ್ಕಾಗಿ ಕರ್ನಾಟಕಕ್ಕೆ ಸಂದಿರುವ ಪ್ರಶಸ್ತಿ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಇಂಧನ ಸಚಿವ ಕೆ.ಜೆ. ಜಾರ್ಜ್‌, "ಈ ಪ್ರಶಸ್ತಿಯು ನವೀಕರಿಸಬಹುದಾದದ ಇಂಧನ ವಲಯದಲ್ಲಿನ ನಮ್ಮ ಬದ್ಧತೆಯನ್ನು ಹೆಚ್ಚಿಸಿದೆ. ಈ ಸಾಧನೆ  ಹಿಂದೆ ಕ್ರೆಡಲ್‌ ಅಧಿಕಾರಗಳ ಶ್ರಮವಿದ್ದು, ಅವರಿಗೆ ಹೃತ್ಪೂರ್ವಕ ಅಭಿನಂದನೆ ಸಲ್ಲಿಸುತ್ತೇನೆ," ಎಂದಿದ್ದಾರೆ.

ಇದನ್ನೂ ಓದಿ: ಮೋದಿ ಅವಧಿಯಲ್ಲೇ‌ ಅತಿ‌ ಹೆಚ್ವು ತೈಲ ಬೆಲೆ ಏರಿಕೆ: ಸಚಿವ ಎಂ‌ ಬಿ ಪಾಟೀಲ 

"ವಿದ್ಯುತ್‌ ಉತ್ಪಾದನಾ ವಲಯದಲ್ಲಿ ನವೀಕರಿಸಬಹುದಾದ ಇಂಧನದ ಪಾಲನ್ನು ಹೆಚ್ಚಿಸುವತ್ತ ರಾಜ್ಯ ಸರ್ಕಾರ ಗಮನಹರಿಸಿದೆ. ಹವಾಮಾನ ಬದಲಾವಣೆ ಮತ್ತು ಜಾಗತಿಕ ತಾಪಮಾನದ ಸವಾಲುಗಳನ್ನು ಎದುರಿಸುವಲ್ಲಿ ಇಂಧನ ಸಂರಕ್ಷಣೆ ನಿರ್ಣಾಯಕ ಪಾತ್ರ ವಹಿಸುತ್ತದೆ. ನಮ್ಮ ಇಲಾಖೆಯು ಇಂಧನ ಸಂರಕ್ಷಣೆ, ಸ್ವಚ್ಛ ಮತ್ತು ಹಸಿರು ಇಂಧನ ಉಪಕ್ರಮಗಳಿಗೆ ಒತ್ತು ನೀಡುತ್ತದೆ," ಎಂದು ಸಚಿವರು ತಿಳಿಸಿದ್ದಾರೆ.   

ಪ್ರಶಸ್ತಿ ಬಗ್ಗೆ ಹರ್ಷ ವ್ಯಕ್ತಪಡಿಸಿರುವ ಇಂಧನ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ಗೌರವ್‌ ಗುಪ್ತಾ, "ಒಳ್ಳೆಯ ಕೆಲಸ ಮಾಡಿದಾಗ ಅದನ್ನು ಗುರುತಿಸಿ ನೀಡುವ ಪ್ರಶಸ್ತಿ ಮತ್ತಷ್ಟು ಕೆಲಸ ಮಾಡುವ ಪ್ರೇರಣೆ ತುಂಬುತ್ತದೆ. ಇಂಗಾಲದ ಹೊರಸೂಸುವಿಕೆಯ ಪ್ರಮಾಣ ಕಡಿಮೆ ಮಾಡುವುದರ ಜತೆಗೆ ಗಾಳಿಯ ಗುಣಮಟ್ಟ ಸುಧಾರಿಸುವ ಪರಿಸರ ಸ್ನೇಹಿ ಕ್ರಮಗಳ ಹೊರತಾಗಿಯೂ ಪವನ ವಿದ್ಯುತ್‌ ಸುಸ್ಥಿರ ಆರ್ಥಿಕತೆ ಸಾಧಿಸಲು ನೆರವಾಗುತ್ತದೆ. ಇಂಧನ ಕ್ಷೇತ್ರಕ್ಕೆ ಪೂರಕವಾದ  ನೀತಿ ಹಾಗೂ ಹೂಡಿಕೆಗಳು ಕರ್ನಾಟಕವನ್ನು ನವೀಕರಿಸಬಹುದಾದ ಇಂದನ ವಲಯದ ಶಕ್ತಿ ಕೇಂದ್ರವಾಗಿ ರೂಪಿಸುತ್ತಿವೆ,"ಎಂದರು.

ಇದನ್ನೂ ಓದಿ: ರೇಣುಕಾಸ್ವಾಮಿ ಕೊಲೆ ಪ್ರಕರಣ: ಬೆಂಗಳೂರು ಟು ಮೈಸೂರು.. ಕೊಲೆಯಾದ ನಂತರ ನಡೆದಿದ್ದೇನು?   

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News