ಹಿಜಾಬ್ ವಿವಾದ ಪ್ರಕರಣ ವಿಸ್ತೃತ ಪೀಠಕ್ಕೆ ವರ್ಗಾವಣೆ

ಹಿಜಾಬ್ ವಿವಾದದ ಕುರಿತ ಪ್ರಕರಣವನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸಿದೆ.  ಕರ್ನಾಟಕ ಹೈಕೋರ್ಟ್‌ನಲ್ಲಿ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರ ಏಕ ಸದಸ್ಯ ಪೀಠವು  ಪ್ರಕರಣವನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸಿದೆ.

Written by - Zee Kannada News Desk | Last Updated : Feb 9, 2022, 05:00 PM IST
  • ಹೆಚ್ಚುತ್ತಲೇ ಇದೆ ಹಿಜಾಬ್ ಕಾವು
  • ಪ್ರಕರಣ ವಿಸ್ತೃತ ಪೀಠಕ್ಕೆ ವರ್ಗಾವಣೆ
  • ಅತಂತ್ರ ಸ್ಥಿತಿಯಲ್ಲಿ ವಿದ್ಯಾರ್ಥಿಗಳು
ಹಿಜಾಬ್ ವಿವಾದ ಪ್ರಕರಣ ವಿಸ್ತೃತ ಪೀಠಕ್ಕೆ  ವರ್ಗಾವಣೆ  title=
ಪ್ರಕರಣ ವಿಸ್ತೃತ ಪೀಠಕ್ಕೆ ವರ್ಗಾವಣೆ

ಬೆಂಗಳೂರು : ಕರ್ನಾಟಕದಲ್ಲಿ ಹಿಜಾಬ್ ವಿವಾದ (Hijab Contraversy) ತಣ್ಣಗಾಗುವಂತೆ ಕಾಣುತ್ತಿಲ್ಲ.ಈ ಬಗ್ಗೆ ಪ್ರತಿಭಟನೆಗಳು (Hijab Protest) ನಡೆಯುತ್ತಲೇ ಇವೆ. ಈ ಮಧ್ಯೆ, ಈ ಕುರಿತು ವಿಚಾರಣೆ ನಡೆಸುತ್ತಿರುವ ಕರ್ನಾಟಕ ಹೈಕೋರ್ಟ್ (Karnataka high court) ಇಂದು ಮಹತ್ವದ ಹೆಜ್ಜೆ ಇಟ್ಟಿದೆ. ಹಿಜಾಬ್ ವಿವಾದದ ಕುರಿತ ಪ್ರಕರಣವನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸಿದೆ.  ಕರ್ನಾಟಕ ಹೈಕೋರ್ಟ್‌ನಲ್ಲಿ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರ ಏಕ ಸದಸ್ಯ ಪೀಠವು  ಪ್ರಕರಣವನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸಿದೆ. ಇನ್ನು ಈ ಪ್ರಕರಣದ ವಿಚಾರಣೆ ವಿಸ್ತೃತ ಪೀಠದಲ್ಲಿಯೇ ನಡೆಯಲಿದೆ. 

ಪ್ರಕರಣಕ್ಕೆ ಸಂಬಂಧಿಸಿದಂತೆ  ಹಲವಾರು ಜನ ಅರ್ಜಿದಾರರು ಅರ್ಜಿ ಸಲ್ಲಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಏಕ ಸದಸ್ಯ ಪೀಠದಲ್ಲಿ ವಿಚಾರಣೆ ಸಾಧ್ಯವಿಲ್ಲ ಎಂದು ಕೋರ್ಟ್ (Karnataka high court) ಅಭಿಪ್ರಾಯಪಟ್ಟಿದೆ. ಈ ಕಾರಣದಿಂದಾಗಿ, ಪ್ರಕರಣದ ವಿಚಾರಣೆಯನ್ನ ವಿಸ್ತೃತ ಪೀಠಕ್ಕೆ ವರ್ಗಾವಣೆ ಮಾಡುತ್ತಿರುವುದಾಗಿ ಕೋರ್ಟ್ ಹೇಳಿದೆ.  ಅಲ್ಲದೆ, ಅರ್ಜಿಗೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನ ಶೀಘ್ರವೇ ಮುಖ್ಯನ್ಯಾಯಮೂರ್ತಿಗಳ ಮುಂದೆ ಸಲ್ಲಿಸುವಂತೆ, ಹೈಕೋರ್ಟ್ ರಿಜಿಸ್ಟರ್ ಗೆ ನ್ಯಾ. ಕೃಷ್ಣ ಎಸ್ ದೀಕ್ಷಿತ್ ನಿರ್ದೇಶನ ನೀಡಿದ್ದಾರೆ. 

ಇದನ್ನೂ ಓದಿ : R Ashok : 'ಹಿಜಾಬ್ ಮತ್ತು ಕೇಸರಿ ಎರಡೂ ಕಾಲೇಜು ಕ್ಯಾಂಪಸ್ ನಲ್ಲಿ ಬರಬಾರದು' 

ಹಿಜಾಬ್ ವಿವಾದದ ಕುರಿತು ಅನೇಕ ಸ್ಥಳಗಳಲ್ಲಿ  ಪ್ರತಿಭಟನೆ :
ಮಂಗಳವಾರ, ಹಿಜಾಬ್ ವಿವಾದಕ್ಕೆ (Hijab Contraversy)  ಸಂಬಂಧಿಸಿದಂತೆ ಅನೇಕ ಸ್ಥಳಗಳಲ್ಲಿ ಹಿಂಸಾತ್ಮಕ ಪ್ರತಿಭಟನೆಗಳು ಮತ್ತು ಹಿಂಸಾಚಾರದ ಘಟನೆಗಳು ವರದಿಯಾಗಿವೆ. ಶಿವಮೊಗ್ಗದ ಸರ್ಕಾರಿ ಪದವಿ ಕಾಲೇಜಿನಲ್ಲಿ ಎರಡು ಗುಂಪುಗಳ ನಡುವೆ ಕಲ್ಲು ತೂರಾಟ ನಡೆದಿರುವ ಘಟನೆ ಬೆಳಕಿಗೆ ಬಂದಿದೆ (Hijab protest). ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕದಲ್ಲಿ ಮಾತ್ರವಲ್ಲದೆ ಇತರ ರಾಜ್ಯಗಳಲ್ಲಿಯೂ ಪ್ರತಿಭಟನೆಗಳು ನಡೆಯುತ್ತಿವೆ. 

ಇದನ್ನೂ ಓದಿ : 'ಹಿಜಾಬ್-ಕೇಸರಿ ಶಾಲು ವಿವಾದದ ಹಿಂದೆ ಯಾರಿದ್ದಾರೆಂದು ಬಿಜೆಪಿ ಸರ್ಕಾರ ತನಿಖೆ ನಡೆಸಿ ಪತ್ತೆಹಚ್ಚಿ ಜನರಿಗೆ ತಿಳಿಸಲಿ'

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News