ಹಿಜಾಬ್ ಧರಿಸಿ ಬಂದ್ರೆ ದ್ವಿತೀಯ ಪಿಯುಸಿ ಪರೀಕ್ಷೆಗೆ ನೋ ಎಂಟ್ರಿ

Written by - Zee Kannada News Desk | Last Updated : Apr 10, 2022, 07:27 PM IST
  • ಕಾಲೇಜು ಅಭಿವೃದ್ಧಿ ಸಮಿತಿ (CDC) ಅಥವಾ ಆಡಳಿತ ಮಂಡಳಿಯ ಮೇಲ್ವಿಚಾರಣ ಸಮಿತಿ ನಿರ್ಧರಿಸಿರುವ ಸಮವಸ್ತ್ರ ಪಾಲಿಸುವಂತೆ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ
 ಹಿಜಾಬ್ ಧರಿಸಿ ಬಂದ್ರೆ ದ್ವಿತೀಯ ಪಿಯುಸಿ ಪರೀಕ್ಷೆಗೆ ನೋ ಎಂಟ್ರಿ title=

ಬೆಂಗಳೂರು:  ಏಪ್ರಿಲ್ 22 ರಿಂದ ಮೇ 18 ರವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆಗೆ ಹಿಜಾಬ್ ಧರಿಸಿ ಬಂದರೆ ಪರೀಕ್ಷೆಗೆ ಅವಕಾಶ ನೀಡುವುದಿಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

10 ನೇ ತರಗತಿ ಮಾದರಿಯಲ್ಲೇ ದ್ವಿತೀಯ ಪಿಯು ಪರೀಕ್ಷೆಯನ್ನು ನಡೆಸಲು ಸರ್ಕಾರ ನಿರ್ಧರಿಸಿದೆ. ಹಾಗಾಗಿ ಪರೀಕ್ಷೆ ವೇಳೆ ಸಮವಸ್ತ್ರ ಇರುವ ಕಾಲೇಜುಗಳಲ್ಲಿ ಸಮವಸ್ತ್ರ ಪಾಲನೆ ಮಾಡುವುದು ಕಡ್ಡಾಯವಾಗಿದೆ.

ಇದನ್ನೂ ಓದಿ: ನುಗ್ಗೆಕೇರಿಯಲ್ಲಿ ಮುಸ್ಲಿಂ ವ್ಯಾಪಾರಿಗಳ ತಳ್ಳುಗಾಡಿ ಧ್ವಂಸ: ಎಚ್‌ಡಿಕೆ ಆಕ್ರೋಶ

ಕಾಲೇಜು ಅಭಿವೃದ್ಧಿ ಸಮಿತಿ (CDC) ಅಥವಾ ಆಡಳಿತ ಮಂಡಳಿಯ ಮೇಲ್ವಿಚಾರಣ ಸಮಿತಿ ನಿರ್ಧರಿಸಿರುವ ಸಮವಸ್ತ್ರ ಪಾಲಿಸುವಂತೆ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.ನಿಯಮ 1995ರ ನಿಯಮ 11ರಲ್ಲಿ ಪ್ರದತ್ತವಾಗಿರುವ ಅಧಿಕಾರದನ್ವಯ ಸಮವಸ್ತ್ರ ಧರಿಸುವುದನ್ನು ಜಾರಿಗೊಳಿಸಲಾಗುತ್ತಿದೆ.

ಇದನ್ನೂ ಓದಿ: ಅತೀಹೆಚ್ಚು ಸುಳ್ಳು ಹೇಳಿದ ಬಿಜೆಪಿ ಹಾಲಿ ಶಾಸಕರಿಗೆಲ್ಲರಿಗೂ ಟಿಕೆಟ್ ಖಚಿತ: ಸಿದ್ದರಾಮಯ್ಯ

ಒಂದು ವೇಳೆ ಆಡಳಿತ ಮಂಡಳಿ ಸಮವಸ್ತ್ರ ನಿಗದಿಪಡಿಸದೇ ಇದ್ದಲ್ಲಿ ಸಮಾನತೆ, ಐಕ್ಯತೆ ಮತ್ತು ಸಾರ್ವಜನಿಕ ಸುವ್ಯವಸ್ಥಿತ ಭಂಗ ಬರದಂತೆ ಉಡುಪುಗಳನ್ನ ಧರಿಸಿ ಪರೀಕ್ಷೆಗೆ ಹಾಜರಾಗಲು ಶಿಕ್ಷಣ ಇಲಾಖೆ ಸೂಚಿಸಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News