ಸುಳ್ಳುಸುದ್ದಿ, ಸಾಮಾಜಿಕ ಜಾಲತಾಣಗಳ ಮೇಲೆ ನಿಗಾವಹಿಸಲು ಗೃಹಸಚಿವ ಪರಮೇಶ್ವರ್ ಸೂಚನೆ

ಸಮಾಜದಲ್ಲಿ ಅಶಾಂತಿ ಮೂಡಿಸುವಂತಹ ಸುಳ್ಳುಸುದ್ದಿಗಳು, ಪ್ರಚೋದನಾಕಾರಿ ಹೇಳಿಕೆ ಅಥವಾ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಆಗಿರುವುದು ಕಂಡುಬಂದರೆ ತಕ್ಷಣವೇ ಕಾರ್ಯಪ್ರವೃತ್ತರಾಗಿ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಗೃಹಸಚಿವ ಜಿ.ಪರಮೇಶ್ವರ್ ಕಟ್ಟುನಿಟ್ಟಿನ ಸೂಚನೆ ನೀಡಿದರು.

Written by - Manjunath N | Last Updated : Nov 20, 2023, 06:36 PM IST
  • ಸಂಚಾರ ನಿಯಮ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಂಡ ಕಟ್ಟಲು ಏಳು ದಿನಗಳ ಕಾಲಾವಕಾಶ ನೀಡಬೇಕು.
  • ಇದಾದ ಬಳಿಕ ನ್ಯಾಯಾಲಯದಿಂದ ಸಮನ್ಸ್ ಹೋಗಬೇಕು
  • ದಂಡ ಕಟ್ಟದಿದ್ದರೆ ಅಥವಾ ನ್ಯಾಯಾಲಯಕ್ಕೆ ಹಾಜರಾಗದಿದ್ದರೆ ವಾಹನ ಸೀಜ್ ಮಾಡಬೇಕು ಎಂದು ಗೃಹ ಸಚಿವ ಪರಮೇಶ್ವರ್ ನಿರ್ದೇಶನ ನೀಡಿದರು.
ಸುಳ್ಳುಸುದ್ದಿ, ಸಾಮಾಜಿಕ ಜಾಲತಾಣಗಳ ಮೇಲೆ ನಿಗಾವಹಿಸಲು ಗೃಹಸಚಿವ ಪರಮೇಶ್ವರ್ ಸೂಚನೆ title=

ಬೆಳಗಾವಿ: ಸಮಾಜದಲ್ಲಿ ಅಶಾಂತಿ ಮೂಡಿಸುವಂತಹ ಸುಳ್ಳುಸುದ್ದಿಗಳು, ಪ್ರಚೋದನಾಕಾರಿ ಹೇಳಿಕೆ ಅಥವಾ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಆಗಿರುವುದು ಕಂಡುಬಂದರೆ ತಕ್ಷಣವೇ ಕಾರ್ಯಪ್ರವೃತ್ತರಾಗಿ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಗೃಹಸಚಿವ ಜಿ.ಪರಮೇಶ್ವರ್ ಕಟ್ಟುನಿಟ್ಟಿನ ಸೂಚನೆ ನೀಡಿದರು.

ನಗರದ ಪೊಲೀಸ್ ಆಯುಕ್ತಾಲಯಕ್ಕೆ ಸೋಮವಾರ(ನ.20) ಭೇಟಿ ನೀಡಿದ ಅವರು, ಸಾಮಾಜಿಕ ಜಾಲತಾಣ ನಿಗಾ ಘಟಕ, ನಿಯಂತ್ರಣ ಕೊಠಡಿಗಳನ್ನು ಖುದ್ದಾಗಿ ವೀಕ್ಷಿಸಿ ಸಲಹೆ-ಸೂಚನೆಗಳನ್ನು ನೀಡಿದರು.

ಸಾಮಾಜಿಕ ಜಾಲತಾಣಗಳ ನಿಗಾ ಘಟಕಕ್ಕೆ ಭೇಟಿ ನೀಡಿದ ಅವರು, ಆಕ್ಷೇಪಾರ್ಹ ಮಾಹಿತಿ, ಸುಳ್ಳುಸುದ್ದಿಗಳು ಬಂದಾಗ ಯಾವ ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ ಎಂಬುದರ ಬಗ್ಗೆ ಮಾಹಿತಿಯನ್ನು ಪಡೆದುಕೊಂಡರು.

ಸೂಕ್ತ ತಾಂತ್ರಿಕ ತರಬೇತಿ ಹೊಂದಿದ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ನಿಯೋಜಿಸಲು ಸೂಚನೆ ನೀಡಿದರು.

ಇದನ್ನೂ ಓದಿ: “ನನ್ನನ್ನು ಕರೆದಿಲ್ಲ… ವಿಶ್ವಕಪ್ ಫೈನಲ್ ಪಂದ್ಯ ನಾನು ನೋಡಲ್ಲ”- ಕ್ರಿಕೆಟ್ ದಿಗ್ಗಜ ಕಪಿಲ್ ದೇವ್

ಇದಾದ ಬಳಿಕ ನಗರ ನಿಯಂತ್ರಣ ಕೊಠಡಿಯನ್ನು ಹಾಗೂ ವೈರ್ ಲೆಸ್ ವಿಭಾಗದ ಕಾರ್ಯಚಟುವಟಿಕೆಗಳನ್ನು ಹಾಗೂ ದಾಖಲೆ ಕೊಠಡಿಯನ್ನು ಖುದ್ದಾಗಿ ವೀಕ್ಷಿಸಿದರು.

ನಿಯಂತ್ರಣ ಕೊಠಡಿಗೆ ಬರುವ ಕರೆಗಳು ಹಾಗೂ ಮಾಹಿತಿಯ ಲಾಗ್ ಪುಸ್ತಕವನ್ನು ಪರಿಶೀಲಿಸಿದರಲ್ಲದೇ ಪ್ರತಿಯೊಂದು ದಾಖಲೆಯನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ತಿಳಿಸಿದರು.

ಸಂಚಾರ ನಿಯಮ ಉಲ್ಲಂಘನೆ ಕ್ರಮಕ್ಕೆ ನಿರ್ದೇಶನ:

ಸಂಚಾರ ನಿಯಮ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಂಡ ಕಟ್ಟಲು ಏಳು ದಿನಗಳ ಕಾಲಾವಕಾಶ ನೀಡಬೇಕು. ಇದಾದ ಬಳಿಕ ನ್ಯಾಯಾಲಯದಿಂದ ಸಮನ್ಸ್ ಹೋಗಬೇಕು; ದಂಡ ಕಟ್ಟದಿದ್ದರೆ ಅಥವಾ ನ್ಯಾಯಾಲಯಕ್ಕೆ ಹಾಜರಾಗದಿದ್ದರೆ ವಾಹನ ಸೀಜ್ ಮಾಡಬೇಕು ಎಂದು ಗೃಹ ಸಚಿವ ಪರಮೇಶ್ವರ್ ನಿರ್ದೇಶನ ನೀಡಿದರು.

ಸಂಚಾರ ನಿಯಮ ಉಲ್ಲಂಘನೆ ದಂಡ ವಿಧಿಸುವ ವಿಧಾನ, ಚಲನ್ ಜನರೇಟ್ ಮಾಡುವ ವಿಧಾನವನ್ನು ಪರಿಶೀಲಿಸಿದರು.

ಸಿಸಿಟಿವಿ ದೃಶ್ಯಾವಳಿ ವೀಕ್ಷಣೆ:

ಬೆಳಗಾವಿ ನಗರದ ವಿವಿಧ ವೃತ್ತಗಳು ಹಾಗೂ ರಸ್ತೆಗಳಲ್ಲಿ ಅಳವಡಿಸಿರುವ ಸಿಸಿಟಿವಿ ಕ್ಯಾಮೆರಾ ದೃಶ್ಯಗಳನ್ನು ಗೃಹಸಚಿವ ಜಿ.ಪರಮೇಶ್ಚರ ವೀಕ್ಷಿಸಿದರು.

ಸಿಸಿಟಿವಿ ಮೇಲೆ ನಿಗಾವಹಿಸಿರುವ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಪ್ರತಿಯೊಂದು ಕ್ಯಾಮೆರಾ ಅಳವಡಿಸಿರುವ ವೃತ್ತ ಮತ್ತು ರಸ್ತೆ ಕುರಿತು ಸಂಪೂರ್ಣ ಮಾಹಿತಿ ಇರಬೇಕು.

ಇದಲ್ಲದೇ ಸ್ಮಾರ್ಟ್ ಸಿಟಿ ಯೋಜನೆಯಡಿ ಅಳವಡಿಸಿರುವ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳ ಮೇಲೆ ಕೂಡ ನಿಗಾವಹಿಸಬೇಕು ಎಂದು ಸೂಚನೆ ನೀಡಿದರು.

ಪೊಲಿಸ್ ಆಯುಕ್ತರಾದ ಎಸ್.ಎನ್.ಸಿದ್ದರಾಮಪ್ಪ ಅವರು, ವಿವಿಧ ಘಟಕಗಳ ಕಾರ್ಯನಿರ್ವಹಣೆ ಕುರಿತು ವಿವರಿಸಿದರು.

ಸಾಮಾಜಿಕ ಜಾಲತಾಣ ನಿಗಾ ಘಟಕವು ಕ್ರಿಯಾಶೀಲವಾಗಿದ್ದು, ಪ್ರತಿಯೊಂದು ಚಟುವಟಿಕೆಗಳ ಮೇಲೆ ನಿಗಾವಹಿಸಲಾಗಿದೆ. ಇತ್ತೀಚೆಗೆ ಪ್ರಕರಣಗಳನ್ನು ಕೂಡ ದಾಖಲಿಸಲಾಗಿದೆ ಎಂದರು.

ಇದನ್ನೂ ಓದಿ: ಮೈದಾನಕ್ಕೆ ನುಗ್ಗಿ ವಿರಾಟ್ ಕೊಹ್ಲಿಯನ್ನು ಅಪ್ಪಿಕೊಂಡ ಪ್ಯಾಲಿಸ್ತೀನ್ ಬೆಂಬಲಿಗ

ಇದಲ್ಲದೇ ಅಧಿವೇಶನ ಸಂದರ್ಭದಲ್ಲೂ ಯಾವುದೇ ರೀತಿಯ ಅಹಿತಕರ ಘಟನೆ ತಡೆಯಲು ಮುಂಜಾಗ್ರತಾ ಕ್ರಮವಾಗಿ ತೀವ್ರ ನಿಗಾ ವಹಿಸಲಾಗುತ್ತಿದೆ ಎಂದು ಪೊಲೀಸ್ ಆಯುಕ್ತರಾದ ಸಿದ್ದರಾಮಪ್ಪ ತಿಳಿಸಿದರು.

ನಗರದಲ್ಲಿ ಯಾವುದೇ ರೀತಿಯ ಆಕ್ಷೇಪಾರ್ಹ ಪೋಸ್ಟ್ ಗಳು, ಕೋಮುಭಾವನೆ ಕೆರಳಿಸುವ ಪೋಸ್ಟ್, ಪ್ರಚೋದಾತ್ಮಕ ಹೇಳಿಕೆ, ಘಟನೆಗಳು ಕಂಡುಬಂದರೆ ಕೂಡಲೇ ಐಟಿ ಕಾಯ್ದೆ ಪ್ರಕಾರ ಪ್ರಕರಣ ದಾಖಲಿಸಲಾಗುತ್ತಿದೆ ಎಂದು ಡಿಸಿಪಿ ರೋಹನ್ ಜಗದೀಶ್ ವಿವರಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ್ ಗುಳೇದ, ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ ಅಧೀಕ್ಷಕ ಡಾ.ರವೀಂದ್ರ ಗಡಾದಿ, ಬೆಳಗಾವಿ ನಗರ ಅಪರಾಧ ಹಾಗೂ ಸಂಚಾರ ವಿಭಾಗದ ಡಿಸಿಪಿ ಸ್ನೇಹಾ ಸೇರಿದಂತೆ ಪೊಲೀಸ್ ಆಯುಕ್ತಾಲಯದ ಹಿರಿಯ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

Trending News