ವೃಕ್ಷಮಾತೆಗೆ ʼಗೌರವ ಡಾಕ್ಟರೇಟ್ʼ ಪದವಿ ಘೋಷಣೆ !

Dharwad Agricultural University: ವೃಕ್ಷಮಾತೆ ಪದ್ಮಶ್ರೀ ಪುರಸ್ಕೃತ ತುಳಸಿ ಗೌಡ ಅವರಿಗೆ ಕೃಷಿ ಕ್ಷೇತ್ರದಲ್ಲಿ ಇವರ ಅಪಾರ ಸೇವೆಯನ್ನು ಪರಿಗಣಿಸಿ ಗೌರವ ಡಾಕ್ಟರೇಟ್ ಪದವಿ ಘೋಷಣೆ ಮಾಡಿದೆ.  

Written by - Zee Kannada News Desk | Last Updated : Jun 10, 2023, 05:29 PM IST
  • ವೃಕ್ಷಮಾತೆಗೆ ಡಾಕ್ಟರೇಟ್ ಗೌರವ ಪದವಿ ಘೋಷಣೆ
  • 36 ನೇ ಘಟಿಕೋತ್ಸವದ ಸಂದರ್ಭದಲ್ಲಿ‌ ಪ್ರಶಸ್ತಿ ಪ್ರದಾನ
  • ವೃಕ್ಷಮಾತೆ ಪದ್ಮಶ್ರೀ ಪುರಸ್ಕೃತ ತುಳಸಿ ಗೌಡ
ವೃಕ್ಷಮಾತೆಗೆ ʼಗೌರವ ಡಾಕ್ಟರೇಟ್ʼ ಪದವಿ ಘೋಷಣೆ ! title=

ಧಾರವಾಡ: ವೃಕ್ಷಮಾತೆ ಪದ್ಮಶ್ರೀ ಪುರಸ್ಕೃತ ತುಳಸಿ ಗೌಡ ಅವರಿಗೆ ಕೃಷಿ ಕ್ಷೇತ್ರದಲ್ಲಿ ಇವರ ಅಪಾರ ಸೇವೆಯನ್ನು ಪರಿಗಣಿಸಿ ಗೌರವ ಡಾಕ್ಟರೇಟ್ ಪದವಿ ಘೋಷಣೆ ಮಾಡಿದೆ. ತುಳಸಿ ಗೌಡ ಅವರಿಗೆ ಧಾರವಾಡದ ಕೃಷಿ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಪದವಿ ನೀಡಲಿದೆ. ಹೊನ್ನಳ್ಳಿ ತಾಲೂಕಿನ ಹಾಲಕ್ಕಿ ಸಮುದಾಯದ ಪದ್ಮಶ್ರೀ ತುಳಸಿ ಗೌಡ ಅವರ ಕೃಷಿ ಕ್ಷೇತ್ರದಲ್ಲಿ ಇವರ ಸೇವೆ ಅಪಾರ.

ಈ ನಿಟ್ಟಿನಲ್ಲಿ ಗೌರವ ಡಾಕ್ಟರೇಟ್ ಪದವಿ ಘೋಷಣೆ ಮಾಡಿದೆ. ಜೂನ್ 16 ರಂದು  ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ರೈತ ಜ್ಞಾನಾಭಿವೃದ್ದಿಕೇಂದ್ರದಲ್ಲಿ ನಡೆಯಲಿರುವ 36 ನೇ ಘಟಿಕೋತ್ಸವದ ಸಂದರ್ಭದಲ್ಲಿ ತುಳಸಿ ಗೌಡ ಅವರಿಗೆ  ಗೌರವ ಡಾಕ್ಟರೇಟ್ ಪದವಿ ನೀಡಲಾಗುವುದು.

ಇದನ್ನೂ ಓದಿ: ಡಿಸಿಎಂ ಡಿಕೆಶಿಯನ್ನು ಭೇಟಿಯಾದ ಅಶ್ವಿನಿ ಪುನೀತ್ ರಾಜ್‌ಕುಮಾರ್& ರಾಘಣ್ಣ

ಈ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್​ ಗೆಹ್ಲೋಟ್ ಅಧ್ಯಕ್ಷತೆ, ಭಾರತ ಸರ್ಕಾರದ ಕೃಷಿ ಸಂಶೋಧನಾ ಹಾಗೂ ಶಿಕ್ಷಣ ವಿಭಾಗದ ಮಹಾನಿರ್ದೇಶಕ ಡಾ.ಹಾಮಾಂಶು ಪಾಠಕ್, ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ, ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡದ ಕುಲಪತಿ ಡಾ.ಪಿ.ಎಲ್. ಪಾಟೀಲ್ ಮೊದಲಾದವರು ಪಾಲ್ಗೊಳ್ಳಲಿದ್ದಾರೆ ಎಂದು ಕೃಷಿ ವಿಶ್ವವಿದ್ಯಾಲಯದ ಕುಲ ಸಚಿವರ ತಿಳಿಸಿದ್ದಾರೆ. 

ವೃಕ್ಷಮಾತೆ ತುಳಸಿ ಗೌಡ ಹಿನ್ನಲೆ:
ಹಾಲಕ್ಕಿ ಸಮುದಾಯದವರಾದ ತುಳಸಿ ಗೌಡ ಮೂಲತಃ ಅಂಕೋಲಾ ತಾಲೂಕಿನ ಅಗಸೂರಿನ ಹೊನ್ನಳ್ಳಿ ಗ್ರಾಮದ ನಿವಾಸಿ. ತನ್ನ ಬಾಲ್ಯದಿಂದಲೂ ಬಡತನ ಬೇಗೆಯಲ್ಲಿ ಬೆಂದಿರುವ ಇವರು  ಅಂದಿನಿಂದಲೇ ಕೃಷಿಯತ್ತ ಒಲವು ತೋರಿದ್ದರು.  ವೃಕ್ಷಮಾತೆ  ಕೈಯಾರೆ ಲಕ್ಷಾಂತರ ಮರಗಳನ್ನು ಬೆಳೆದು ಪರಿಸರ ಸಂಭ್ರಕ್ಷಿಸುವಲ್ಲಿ ಅಪಾರ ಕೊಡುಗೆ ನೀಡಿದ್ದಾರೆ. ಅವರ ಪರಿಸರ ಸೇವೆಗೆ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿಯು ದೊರಕಿತ್ತು. ಇದೀಗ ವೃಕ್ಷಮಾತೆಗೆ ಗೌರವ ಡಾಕ್ಟರೇಟ್ ಪದವಿ ಸಹ ದೊರಕಲಿದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News