ಏರ್ಪೋರ್ಟ್ ರಸ್ತೆಯಲ್ಲಿ ಭೀಕರ‌ ಅಪಘಾತ- ಕಾರು ಚಾಲಕ ಸಾವು

ಇಂದು ಮುಂಜಾನೆ  3:15ಕ್ಕೆ  ಯಲಹಂಕ ‌ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿ ದೇವನಹಳ್ಳಿ ಏರ್ಪೋರ್ಟ್ ರಸ್ತೆ ಬಿಎಸ್ಎಫ್ ಆರ್ಮಿ ಕ್ಯಾಂಪಸ್ ಬಳಿ ಈ ಭೀಕರ ದುರಂತ ಸಂಭವಿಸಿದೆ. 

Written by - Yashaswini V | Last Updated : Jul 21, 2022, 10:54 AM IST
  • ಕಾರು ರಸ್ತೆ ವಿಭಜಕ ದಾಟಿ ಎದುರಿಗೆ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿಗೆ ಡಿಕ್ಕಿ ಹೊಡೆದಿದೆ.
  • ಮಂತ್ರಾಲಯಕ್ಕೆ ಹೋಗಿ ಬೆಂಗಳೂರಿಗೆ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿಗೆ ಡಿಕ್ಕಿ ಹೊಡೆದಿರುವ ಕಾರು
  • ಘಟನೆಯಲ್ಲಿ ಕಾರು ಸಂಪೂರ್ಣ ನಜ್ಜು ಗುಜ್ಜಾಗಿದ್ದು, ಕಾರು ಚಾಲಕನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಏರ್ಪೋರ್ಟ್ ರಸ್ತೆಯಲ್ಲಿ ಭೀಕರ‌ ಅಪಘಾತ- ಕಾರು ಚಾಲಕ ಸಾವು title=
Horrific accident in bengaluru airport road

ಬೆಂಗಳೂರು: ಕಾರು ಚಾಲಕನ ಅತಿವೇಗ ಹಾಗೂ ಅಜಾಗರೂಕ ಚಾಲನೆಯಿಂದ ಕಾರಿನ ಚಾಲಕ ಸಾವನ್ನಪ್ಪಿದ ಘಟನೆ ಯಲಹಂಕ ‌ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿ ದೇವನಹಳ್ಳಿ ಏರ್ಪೋರ್ಟ್ ರಸ್ತೆ ಬಿಎಸ್ಎಫ್ ಆರ್ಮಿ ಕ್ಯಾಂಪಸ್ ಬಳಿ ಸಂಭವಿಸಿದೆ.

Ka 27C 0471 ನಂಬರಿನ ಕಾರು ರಸ್ತೆ ವಿಭಜಕ ದಾಟಿ ಎದುರಿಗೆ ಬರುತ್ತಿದ್ದ Ka 40 F 1316 ನಂಬರಿನ ಕೆಎಸ್ಆರ್ಟಿಸಿ ಬಸ್ಸಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರು ಸಂಪೂರ್ಣ ನಜ್ಜುಗುಜ್ಜಾಗಿ ಡ್ರೈವರ್ ಲೋಹಿತ್ ಪ್ರಸಾದ್ ಸ್ಥಳದಲ್ಲೆ ಮೃತಪಟ್ಟಿದ್ದಾರೆ.

ಇದನ್ನೂ ಓದಿ- ಕೂಲಿ ಕಾರ್ಮಿಕರು ತಂಗಿದ್ದ ಶೆಡ್ ಕುಸಿದು ನಾಲ್ವರ ದುರ್ಮರಣ

ಇಂದು ಮುಂಜಾನೆ  3:15ಕ್ಕೆ  ಯಲಹಂಕ ‌ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿ ದೇವನಹಳ್ಳಿ ಏರ್ಪೋರ್ಟ್ ರಸ್ತೆ ಬಿಎಸ್ಎಫ್ ಆರ್ಮಿ ಕ್ಯಾಂಪಸ್ ಬಳಿ ಈ ಭೀಕರ ದುರಂತ ಸಂಭವಿಸಿದೆ. 

ಮಂತ್ರಾಲಯಕ್ಕೆ ಹೋಗಿ ಬೆಂಗಳೂರಿಗೆ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿಗೆ ಬೆಂಗಳೂರಿನಿಂದ ಏರ್ಪೋರ್ಟ್ ಕಡೆಗೆ ತೆರಳುತ್ತಿದ್ದ ಕಾರು ರಸ್ತೆ ವಿಭಜಕ ದಾಟಿ ಗುದ್ದಿರುವುದೇ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದೆ. 

ಇದನ್ನೂ ಓದಿ- ಪ್ರಯಾಣಿಕರೇ ಗಮನಿಸಿ ..! ಇಂದು ಆಟೋ ಮತ್ತು ಟ್ಯಾಕ್ಸಿ ಇರಲ್ಲ .!

ಘಟನೆಯಲ್ಲಿ ಕಾರು ಸಂಪೂರ್ಣ ನಜ್ಜು ಗುಜ್ಜಾಗಿದ್ದು, ಕಾರು ಚಾಲಕನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸದ್ಯ ಕಾರು ಚಾಲಕನ‌ ಮೃತದೇಹವನ್ನು ಯಲಹಂಕ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಯಲಹಂಕ ಸಂಚಾರಿ ಪೊಲೀಸರು ಘಟನಾ ಸ್ಥಳಕ್ಕೆ ಬಂದು ಪರಿಶೀಲನೆ ‌ನಡೆಸಿದ್ದಾರೆ. 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News