ಯಾದಗಿರಿಯಲ್ಲಿ ಭೀಕರ ಅಪಘಾತ: ಒಂದೇ ಕುಟುಂಬದ ಆರು ಸಾವು

ಮೃತರೆಲ್ಲರೂ ತೆಲಂಗಾಣದ ಕೊಡಂಗಲ್ ಸಮೀಪದ ದರ್ಗಾಕ್ಕೆ ತೆರಳಿದ್ದರು. ದರ್ಗಾದಲ್ಲಿ ಜವಳ ಕಾರ್ಯಕ್ರಮ ಹಾಗೂ ಪೂಜೆ ಸಲ್ಲಿಸಿ ಹಟ್ಟಿ ಗ್ರಾಮಕ್ಕೆ ವಾಪಸ್ ಬರುತ್ತಿರುವಾಗ ಕಾರು ಮತ್ತು ಲಾರಿ ನಡುವೆ ಡಿಕ್ಕಿ ಹೊಡೆದ ಪರಿಣಾಮ ಈ ಭೀಕರ ಅಪಘಾತ ಸಂಭವಿಸಿದೆ.

Written by - Yashaswini V | Last Updated : Aug 5, 2022, 07:26 AM IST
  • ಕಾರು ಮತ್ತು ಲಾರಿ ನಡುವೆ ಡಿಕ್ಕಿ ಸ್ಥಳದಲ್ಲೇ ಮೂರು ಜನ ಹಾಗೂ ಆಸ್ಪತ್ರೆಯಲ್ಲಿ ಮೂರು ಜನ ಸಾವು
  • ಯಾದಗಿರಿ ಜಿಲ್ಲೆಯ ಗುರಮಿಠಕಲ್ ತಾಲೂಕಿನ ಅರಕೇರಾ(ಕೆ) ಬಳಿ ನಿನ್ನೆ ತಡರಾತ್ರಿ ನಡೆದ ಘಟನೆ
  • ಈ ದುರ್ಘಟನೆಯಲ್ಲಿ 1 ವರ್ಷದ ಹೆಣ್ಣುಮಗು ಸೇರಿ 6 ಜನ ಮೃತ
ಯಾದಗಿರಿಯಲ್ಲಿ ಭೀಕರ ಅಪಘಾತ: ಒಂದೇ ಕುಟುಂಬದ ಆರು ಸಾವು title=
Horrific accident In Yadgiri

ಯಾದಗಿರಿಯಲ್ಲಿ ಭೀಕರ ಅಪಘಾತ: ಯಾದಗಿರಿ ಜಿಲ್ಲೆಯ ಗುರಮಿಠಕಲ್ ತಾಲೂಕಿನ ಅರಕೇರಾ(ಕೆ) ಬಳಿ ನಿನ್ನೆ ತಡರಾತ್ರಿ ಕಾರು ಮತ್ತು ಲಾರಿ ನಡುವೆ  ಭೀಕರ ಅಪಘಾತ ಸಂಭವಿಸಿದ್ದು 1 ವರ್ಷದ ಹೆಣ್ಣುಮಗು ಸೇರಿದಂತೆ ಒಂದೇ ಕುಟುಂಬದ ಆರು ಮಂದಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

ಮೃತರೆಲ್ಲರು ರಾಯಚೂರು ಜಿಲ್ಲೆಯ ಲಿಂಗಸೂಗೂರು ಹಟ್ಟಿಯವರು ಎಂದು ತಿಳಿದುಬಂದಿದೆ. ಮೃತರೆಲ್ಲರೂ ತೆಲಂಗಾಣದ ಕೊಡಂಗಲ್ ಸಮೀಪದ ದರ್ಗಾಕ್ಕೆ ತೆರಳಿದ್ದರು. ದರ್ಗಾದಲ್ಲಿ ಜವಳ ಕಾರ್ಯಕ್ರಮ ಹಾಗೂ ಪೂಜೆ ಸಲ್ಲಿಸಿ ಹಟ್ಟಿ ಗ್ರಾಮಕ್ಕೆ ವಾಪಸ್ ಬರುತ್ತಿರುವಾಗ ಕಾರು ಮತ್ತು ಲಾರಿ ನಡುವೆ ಡಿಕ್ಕಿ ಹೊಡೆದ ಪರಿಣಾಮ ಈ ಭೀಕರ ಅಪಘಾತ ಸಂಭವಿಸಿದೆ.

ಇದನ್ನೂ ಓದಿ- ಚಿಕ್ಕಮಗಳೂರಿನಲ್ಲಿ ಕಳಪೆ ರಸ್ತೆ ಕಾಮಗಾರಿ, ಸರ್ಕಾರದ ವಿರುದ್ಧ ಗ್ರಾಮಸ್ಥರ ಆಕ್ರೋಶ

ಘಟನೆಯಲ್ಲಿ ಮೂರು ಜನ ಸ್ಥಳದಲ್ಲೇ ಮೃತಪಟ್ಟಿದ್ದರೆ, ಇನ್ನೂ ಮೂರು ಜನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಗಂಭೀರವಾಗಿ ಗಾಯಗೊಂಡ ವ್ಯಕ್ತಿಯನ್ನು ಕಲಬುರಗಿಯ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ- ಪುಲ್ವಾಮಾದಲ್ಲಿ ವಲಸೆ ಕಾರ್ಮಿಕರ ಮೇಲೆ ಉಗ್ರರ ದಾಳಿ- ಬಿಹಾರ ಕಾರ್ಮಿಕನ ಸಾವು

ಗುರಮಿಠಕಲ್ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಘಟನೆ ಬಳಿಕ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಯಾದಗಿರಿ ಎಸ್ಪಿ ಡಾ.ಸಿ.ಬಿ.ವೇದಮೂರ್ತಿ‌ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.  

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
  

Trending News