Horror Video: ಹಠಾತ್ತನೆ ಪಾದಚಾರಿ ಮಾರ್ಗಕ್ಕೆ ನುಗ್ಗಿದ ಕಾರು! ಮುಂದೆ...

ಕುಡಿದ ಅಮಲಿನಲ್ಲಿ ಚಾಲಕನೊಬ್ಬ ಪಾದಚಾರಿಗಳ ಮೇಲೆ ಕಾರನ್ನು ಹತ್ತಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. 

Last Updated : Aug 19, 2019, 01:22 PM IST
Horror Video: ಹಠಾತ್ತನೆ ಪಾದಚಾರಿ ಮಾರ್ಗಕ್ಕೆ ನುಗ್ಗಿದ ಕಾರು! ಮುಂದೆ... title=

ಬೆಂಗಳೂರು: ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವುದು ಅಪರಾಧ. ಈ ಬಗ್ಗೆ ಸಂಚಾರಿ ಪೊಲೀಸರು ವಾಹನ ಚಾಲಕರಿಗೆ ಸಾಕಷ್ಟು ಬಾರಿ ಎಚ್ಚರಿಕೆಗಳನ್ನು ನೀಡಿರುವುದಷ್ಟೇ ಅಲ್ಲದೆ, ಜಾಗೃತಿ ಕಾರ್ಯಕ್ರಮಗಳನ್ನೂ ಹಮ್ಮಿಕೊಂಡು ಜನರಲ್ಲಿ ಅರಿವು ಮೂಡಿಸುವ ಕಾರ್ಯ ಮಾಡುತ್ತಿದ್ದಾರೆ. ಹೀಗಿದ್ದರೂ ಸಹ ಕುಡಿದ ಅಮಲಿನಲ್ಲಿ ಚಾಲಕನೊಬ್ಬ ಪಾದಚಾರಿಗಳ ಮೇಲೆ ಕಾರನ್ನು ಹತ್ತಿಸಿದ ಘಟನೆ ಬೆಂಗಳೂರಿನ ಎಚ್ಎಸ್ಆರ್ ಲೇಔಟ್ ನಲ್ಲಿ ನಡೆದಿದೆ. 

ಸದ್ಯ ಈ ವೀಡಿಯೋ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ನಿಯಂತ್ರಣ ತಪ್ಪಿದ ಕಾರೊಂದು ಪಾದಚಾರಿ ಮಾರ್ಗಕ್ಕೆ ನುಗ್ಗಿ, ಅಲ್ಲಿದ್ದ ಜನರಿಗೆ ಗುದ್ದಿಕೊಂಡು ಮುಂದೆ ಸಾಗಿದೆ. ಈ ಸಂದರ್ಭದಲ್ಲಿ ಕೆಲವರು ಅತ್ತಿತ್ತ ಓಡಲು ಪ್ರಯತ್ನಿಸಿದರಾದರೂ ಅದು ಸಾಧ್ಯವಾಗಿಲ್ಲ. ಈ ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಎಎನ್ಐ ವರದಿ ಮಾಡಿದೆ.

ಇದೇ ವೇಳೆ, ಕಾರಿನ ಚಾಲಕನನ್ನು ವಶಕ್ಕೆ ಪಡೆಯಲಾಗಿದ್ದು, ಆತನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಆತನನ್ನು ಮದ್ಯಪಾನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಪಾಸಿಟಿವ್ ವರದಿ ಬಂದಿದೆ ಪೊಲೀಸರು ತಿಳಿಸಿದ್ದಾರೆ.

Trending News