ಮಳೆ‌ ಅಬ್ಬರಕ್ಕೆ ಮನೆ ಗೋಡೆ ಕುಸಿದು ಪ್ರಾಣ ಬಿಟ್ಟ ವೃದ್ಧೆ, ಮತ್ತೊಂದು ಪ್ರಕರಣದಲ್ಲಿ ತಾಯಿ-ಮಗು ಗ್ರೇಟ್ ಎಸ್ಕೇಪ್

ಕಳೆದ ಒಂದು ವಾರದಿಂದ ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುತ್ತಿದ್ದು ನಿನ್ನೆ ರಾತ್ರಿ ಗೌರಮ್ಮ‌ ಮನೆಯೊಳಗೆ ಅಡುಗೆ ಮಾಡುತ್ತಾ ಕುಳಿತಿದ್ದರು. ಈ ವೇಳೆ ಏಕಾಏಕಿ ಗೋಡೆ ಕುಸಿದು ವೃದ್ದೆಯ ಮೇಲೆ ಬಿದ್ದಿದ್ದು ಗೌರಮ್ಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಪತಿ ನಟರಾಜ್‌ಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು ಅರಸೀಕೆರೆ ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

Written by - Yashaswini V | Last Updated : Jul 26, 2023, 01:16 PM IST
  • ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ, ಡಿ.ಎಂ.ಕುರ್ಕೆ ಗ್ರಾಮದಲ್ಲಿ ಗೋಡೆ ಕುಸಿದು ವೃದ್ಧೆ ಸಾವು
  • ಈ ದುರ್ಘಟನೆಯಲ್ಲಿ ಮೃತ ಗೌರಮ್ಮ ಅವರ ಪತಿ ನಟರಾಜ್‌ಗೆ ಗಂಭೀರ ಸ್ವರೂಪದ ಗಾಯಗಳಾಗಿವೆ
  • ಮತ್ತೊಂದು ಪ್ರಕರಣದಲ್ಲಿ ಭಾರೀ ಮಳೆಗೆ ವಾಸದ‌‌ ಮನೆ ಕುಸಿದು ಬಿದ್ದಿದೆ.
ಮಳೆ‌ ಅಬ್ಬರಕ್ಕೆ ಮನೆ ಗೋಡೆ ಕುಸಿದು ಪ್ರಾಣ ಬಿಟ್ಟ ವೃದ್ಧೆ, ಮತ್ತೊಂದು ಪ್ರಕರಣದಲ್ಲಿ ತಾಯಿ-ಮಗು ಗ್ರೇಟ್ ಎಸ್ಕೇಪ್ title=

Rain Effect: ನಿರ್ಮಾಣ ಹಂತದ ಮನೆಯ ಗೋಡೆ ಕುಸಿದು ವೃದ್ದೆ ಸಾವನ್ನಪ್ಪಿರುವ ಘಟನೆ ಅರಸೀಕೆರೆ ತಾಲ್ಲೂಕಿನ, ಡಿ.ಎಂ.ಕುರ್ಕೆ ಗ್ರಾಮದಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು 62 ವರ್ಷ ವಯಸ್ಸಿನ ಗೌರಮ್ಮ ಎಂದು ಗುರುತಿಸಲಾಗಿದೆ. 

ಕಳೆದ ಒಂದು ವಾರದಿಂದ ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುತ್ತಿದ್ದು ನಿನ್ನೆ ರಾತ್ರಿ ಗೌರಮ್ಮ‌ ಮನೆಯೊಳಗೆ ಅಡುಗೆ ಮಾಡುತ್ತಾ ಕುಳಿತಿದ್ದರು. ಈ ವೇಳೆ ಏಕಾಏಕಿ ಗೋಡೆ ಕುಸಿದು ವೃದ್ದೆಯ ಮೇಲೆ ಬಿದ್ದಿದ್ದು ಗೌರಮ್ಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಪತಿ ನಟರಾಜ್‌ಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು ಅರಸೀಕೆರೆ ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅರಸೀಕೆರೆ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 

ಇದನ್ನೂ ಓದಿ- ಈ ಸರ್ಕಾರಕ್ಕೆ ಉಳಿಗಾಲವಿಲ್ಲವೆಂದು ಕಾಂಗ್ರೆಸ್ ಶಾಸಕರೇ ಹೇಳುತ್ತಿದ್ದಾರೆ: ಬಿಜೆಪಿ

ಮತ್ತೊಂದು ಪ್ರಕರಣದಲ್ಲಿ ತಾಯಿ-ಮಗು ಗ್ರೇಟ್ ಎಸ್ಕೇಪ್:
ಮತ್ತೊಂದು ಪ್ರಕರಣದಲ್ಲಿ ಭಾರೀ ಮಳೆಗೆ ವಾಸದ‌‌ ಮನೆ ಕುಸಿದು ಬಿದ್ದಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ತಾಯಿ, ಮಗು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ  ಸಕಲೇಶಪುರ ಪಟ್ಟಣದ, ಚಂಪಕನಗರದಲ್ಲಿ ನಡೆದಿದೆ. 

ವಾರ್ಡ್ ನಂಬರ್ 13 ರಲ್ಲಿರುವ ಸಚಿನ್ ಎಂಬುವವರಿಗೆ ಸೇರಿದ ವಾಸದ ಮನೆ ಇದಾಗಿದೆ. ಸಚಿನ್ ಗಾರೆ ಕೆಲಸ ಮಾಡುತ್ತಿದ್ದು ನಿನ್ನೆ ಕೆಲಸಕ್ಕೆ ತೆರಳಿದ್ದರು. ಸಚಿನ್ ಪತ್ನಿ ಸ್ವಾತಿ ಹಾಗೂ ಮಗು  ಮನೆಯಲ್ಲಿಯೇ ಇದ್ದರು. ಮಳೆ‌ ಕೊಂಚ ಬಿಡುವು ನೀಡಿದ ಕಾರಣ ಸ್ವಾತಿ ದಿನಸಿ ತರಲು ಮಗುವಿನೊಂದಿಗೆ ಅಂಗಡಿಗೆ ತೆರಳಿದ್ದರು. ಈ ವೇಳೆ ಭಾರಿ ಮಳೆಗೆ ಏಕಾಏಕಿ ಮನೆ ಕುಸಿದು ಬಿದ್ದಿದೆ. ಸ್ವಾತಿ ಹಾಗೂ ಮಗು ಮನೆಗೆ ವಾಪಾಸ್ ಬರುವಷ್ಟರಲ್ಲಿ ಮನೆ ನೆಲಸಮವಾಗಿದ್ದು, ಅಂಗಡಿಗೆ ತೆರಳಿದ್ದರಿಂದ ತಾಯಿ, ಮಗು ಬದುಕುಳಿದಿದ್ದಾರೆ ಎನ್ನಲಾಗಿದೆ. 

ಇದನ್ನೂ ಓದಿ- ಡಿ.ಕೆ.ಶಿವಕುಮಾರ್ ಸಿಂಗಾಪುರದ ನಾಟಕ ಆರಂಭಿಸಿದ್ದಾರೆ: ಬಿಜೆಪಿ ಟೀಕೆ

ಇನ್ನೂ ಘಟನಾ ಸ್ಥಳಕ್ಕೆ ರೆವಿನ್ಯೂ ಇನ್ಸ್‌ಪೆಕ್ಟರ್ ಮತ್ತು ವಿಲೇಜ್ ಅಕೌಂಟೆಂಟ್ ಭೇಟಿ, ಪರಿಶೀಲನೆ ನಡೆಸಿದರು. ಮನೆ ಕಳೆದುಕೊಂಡು ಬಡ ಕುಟುಂಬ ಬೀದಿ ಪಾಲಾಗಿದ್ದು ಸೂಕ್ತ ಪರಿಹಾರ ನೀಡುವಂತೆ ಮನವಿ ಮಾಡಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News