ಮಂತ್ರಾಲಯದಲ್ಲಿ ಹುಂಡಿ ಎಣಿಕೆ; 2 ಕೋಟಿ 96 ಲಕ್ಷ ಕಾಣಿಕೆ ಸಂಗ್ರಹ

Raghavendra Swamy Temple Mantralaya: ಡಿಸೆಂಬರ್ ತಿಂಗಳ ಕಾಣಿಕೆ ಹುಂಡಿ ಎಣಿಕೆ ಕಾರ್ಯ ಮುಕ್ತಾಯಗೊಂಡಿದ್ದು, ಒಟ್ಟು 2 ಕೋಟಿ 95 ಲಕ್ಷ 74 ಸಾವಿರ ರೂ.ಗೂ ಹೆಚ್ಚು ಕಾಣಿಕೆ ಸಂಗ್ರಹವಾಗಿದೆ.

Written by - Puttaraj K Alur | Last Updated : Dec 27, 2023, 05:57 PM IST
  • ಸಾಲು ಸಾಲು ರಜೆ ಹಿನ್ನಲೆ ರಾಯರ ಮಠಕ್ಕೆ ಹರಿದುಬಂದ ಭಕ್ತಸಾಗರ
  • ಒಟ್ಟು 2 ಕೋಟಿ 95 ಲಕ್ಷ 74 ಸಾವಿರ ರೂ.ಗೂ ಅಧಿಕ ದೇಣಿಗೆ ಸಂಗ್ರಹ
  • ರಾಯರ ಮಠಕ್ಕೆ 71 ಗ್ರಾಂ ಚಿನ್ನ ಮತ್ತು 439 ಗ್ರಾಂ. ಬೆಳ್ಳಿ ಅರ್ಪಣೆ
ಮಂತ್ರಾಲಯದಲ್ಲಿ ಹುಂಡಿ ಎಣಿಕೆ; 2 ಕೋಟಿ 96 ಲಕ್ಷ ಕಾಣಿಕೆ ಸಂಗ್ರಹ title=
2 ಕೋಟಿ 96 ಲಕ್ಷ ಕಾಣಿಕೆ ಸಂಗ್ರಹ

ರಾಯಚೂರು: ಗುರುರಾಯರ ಸನ್ನಿಧಿ ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿ ಮಠದಲ್ಲಿ ಕಳೆದೊಂದು ತಿಂಗಳಲ್ಲಿ ಭಕ್ತರಿಂದ ಭಾರೀ ಮಟ್ಟದ ಕಾಣಿಕೆ ಸಂಗ್ರಹವಾಗಿದೆ. ಸಾಲು ಸಾಲು ರಜೆ ಇರುವ ಹಿನ್ನೆಲೆ ರಾಯರ ಮಠಕ್ಕೆ ಭಕ್ತಸಾಗರ ಹರಿದು ಬರುತ್ತಿದೆ. ವಿವಿಧ  ರಾಜ್ಯಗಳಿಂದ ಬರುತ್ತಿರುವ ಲಕ್ಷಾಂತರ ಭಕ್ತರು ರಾಯರ ದರ್ಶನ ಪಡೆದುಕೊಳ್ಳುತ್ತಿದ್ದಾರೆ.

ಮಂತ್ರಾಲಯದ ರಾಯರ ಮಠದಲ್ಲಿ ಸಾವಿರಾರು ಭಕ್ತರಿಂದ ಹುಂಡಿ ಎಣಿಕೆ ನಡೆದಿದ್ದು, ಕೇವಲ 26 ದಿನಗಳಲ್ಲಿ ಕೋಟಿ ಕೋಟಿ ರೂ. ಭಕ್ತರ ದೇಣಿಗೆ ಹರಿದು ಬಂದಿದೆ. ಡಿಸೆಂಬರ್ ತಿಂಗಳ ಕಾಣಿಕೆ ಹುಂಡಿ ಎಣಿಕೆ ಕಾರ್ಯ ಮುಕ್ತಾಯಗೊಂಡಿದ್ದು, ಒಟ್ಟು 2 ಕೋಟಿ 95 ಲಕ್ಷ 74 ಸಾವಿರ ರೂ.ಗೂ ಹೆಚ್ಚು ಕಾಣಿಕೆ ಸಂಗ್ರಹವಾಗಿದೆ. ಸಂಗ್ರಹವಾದ ಒಟ್ಟು ಕಾಣಿಕೆಯಲ್ಲಿ 2 ಕೋಟಿ 89 ಲಕ್ಷ 66,554 ರೂಪಾಯಿ ಕರೆನ್ಸಿ ನೋಟುಗಳು ಹಾಗೂ 6 ಲಕ್ಷ 07,446 ರೂಪಾಯಿ ನಾಣ್ಯಗಳು ಸಂಗ್ರಹವಾಗಿದೆ.

ಇದನ್ನೂ ಓದಿ: ಲೋಕಸಭೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರ

ಭಕ್ತರು 71 ಗ್ರಾಂ. ಚಿನ್ನ ಹಾಗೂ 439 ಗ್ರಾಂ. ಬೆಳ್ಳಿಯನ್ನು ಕಾಣಿಕೆ ರೂಪದಲ್ಲಿ ರಾಯರ ಮಠಕ್ಕೆ ಅರ್ಪಿಸಿದ್ದಾರೆ ಎಂದು ಗುರು ರಾಘವೇಂದ್ರ ಸ್ವಾಮಿ ಮಠದ ವ್ಯವಸ್ಥಾಪಕ ಶ್ರೀನಿವಾಸ ರಾವ್ ಮಾಹಿತಿ ನೀಡಿದ್ದಾರೆ. ಕಾಣಿಕೆ ಹುಂಡಿ ಎಣಿಕೆ ಕಾರ್ಯದಲ್ಲಿ ಮುಜರಾಯಿ ಇಲಾಖೆ ಅಧಿಕಾರಿಗಳು, ಗುರುಪಾದ ಕರಸೇವಕರು, ನೂರಾರು ಜನ ಸಿಬ್ಬಂದಿ ಹಾಗೂ ಭಕ್ತರು ಪಾಲ್ಗೊಂಡಿದ್ದರು.

ಇದನ್ನೂ ಓದಿ: ರಾಜ್ಯದಲ್ಲಿ JN.1 ವೈರಸ್‌ನ ಆತಂಕ : ಸೋಂಕು ತಡೆಗೆ T3 ಸೂತ್ರ ಪಾಲಿಸೋದಕ್ಕೆ ಮುಂದಾದ ಆರೋಗ್ಯ ಇಲಾಖೆ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News