ಅಖಂಡ ಕರ್ನಾಟಕದ ರಕ್ಷಣೆಗೆ ನಾನು ಬದ್ಧ: ಸಿದ್ದರಾಮಯ್ಯ

 ಉತ್ತರ-ದಕ್ಷಿಣ ಎಂಬ ಭೇದ ನಮಗಿಲ್ಲ. ನಮ್ಮದು ಒಂದೇ ಕರ್ನಾಟಕ, ಅದು ಅಖಂಡ ಕರ್ನಾಟಕ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

Last Updated : Jul 30, 2018, 02:15 PM IST
ಅಖಂಡ ಕರ್ನಾಟಕದ ರಕ್ಷಣೆಗೆ ನಾನು ಬದ್ಧ: ಸಿದ್ದರಾಮಯ್ಯ title=

ಬೆಂಗಳೂರು: ಜಾತಿ - ಧರ್ಮಗಳನ್ನು ರಾಜಕೀಯ ಲಾಭಕ್ಕಾಗಿ ಬಳಸುವುದು ಜನದ್ರೋಹದ ಕೆಲಸ. ಅಖಂಡ ಕರ್ನಾಟಕದ ರಕ್ಷಣೆ ಹಾಗೂ ಅಭಿವೃದ್ಧಿಗೆ ಕಾಂಗ್ರೆಸ್ ಪಕ್ಷ ಹಾಗೂ ನಾನು ಬದ್ಧ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಾದಾಮಿ ಕ್ಷೇತ್ರದ ಶಾಸಕ ಸಿದ್ದರಾಮಯ್ಯ ಹೇಳಿದ್ದಾರೆ.

ಪ್ರತ್ಯೇಕ ರಾಜ್ಯ ಹೋರಾಟದ ನೇತೃತ್ವ ನಾನೇ ವಹಿಸುತ್ತೇನೆ: ಶ್ರೀರಾಮುಲು

ಎಲ್ಲೆಡೆ ಪ್ರತ್ಯೇಕ ರಾಜ್ಯದ ಕೂಗು ಎಲ್ಲೆಡೆ ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಇಂದು ಮೌನ ಮುರಿದಿರುವ ಸಿದ್ದರಾಮಯ್ಯ ಉತ್ತರ-ದಕ್ಷಿಣ ಎಂಬ ಭೇದ ನಮಗಿಲ್ಲ. ನಮ್ಮದು ಒಂದೇ ಕರ್ನಾಟಕ, ಅದು ಅಖಂಡ ಕರ್ನಾಟಕ. ಚಾರಿತ್ರಿಕ ಕಾರಣಗಳಿಗಾಗಿ ರಾಜ್ಯದ ಕೆಲವು ಭಾಗಗಳು ಹಿಂದುಳಿದಿರುವುದು ನಿಜ. ಆದರೆ ಅವುಗಳ‌ ಅಭಿವೃದ್ಧಿಗೆ ಒತ್ತು ನೀಡುವ ಪ್ರಾದೇಶಿಕ ನ್ಯಾಯದ ಪರವಾಗಿ ನಮ್ಮ‌ ಕಾಂಗ್ರೆಸ್ ಪಕ್ಷವಿದೆ. ಕಾಂಗ್ರೆಸ್ ಪಕ್ಷ ನಾಡಿನ ಏಕತೆ ಮತ್ತು ಸಮಗ್ರತೆಯ ಪರವಾಗಿ ದುಡಿಯಲು ಬದ್ಧವಿದೆ ಎಂದು ಸಿದ್ದರಾಮಯ್ಯ ಫೇಸ್ಬುಕ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ. 

ಸಿಎಂ ಕುಮಾರಸ್ವಾಮಿ ಬುದ್ಧಿ ಸ್ಥಿಮಿತದಲ್ಲಿಲ್ಲ, ಅಧಿಕಾರದ ಮದವೇರಿದೆ: ಯಡಿಯೂರಪ್ಪ ಟೀಕೆ

ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಬಾದಾಮಿ ಕ್ಷೇತ್ರದಿಂದ ಸ್ಪರ್ಧಿಸಿ ಶಾಸಕರಾಗಿ ಆಯ್ಕೆಯಾಗಿರುವ ಸಿದ್ದರಾಮಯ್ಯ ಅವರು, ತಾವು ಆ ಕ್ಷೇತ್ರದಿಂದ ಸ್ಪರ್ಧಿಸಲು ಕಾರಣವೇನು ಎಂಬುದನ್ನು ಬಹಿರಂಗಪಡಿಸಿದ್ದಾರೆ. "ಉತ್ತರ ಹಾಗೂ ದಕ್ಷಿಣದ ನಡುವಿನ ಅಂತರವನ್ನು ಹೋಗಲಾಡಿಸಿ, ಸೌಹಾರ್ದತೆಯ ಪರಂಪರೆಯನ್ನು ಗಟ್ಟಿಗೊಳಿಸುವುದಕ್ಕಾಗಿಯೇ ನಾನು ಬಾದಾಮಿ ಕ್ಷೇತ್ರದಿಂದ ಸ್ಪರ್ಧಿಸಿದ್ದೆ. ಆ ಕ್ಷೇತ್ರದ ಜನರ ಆಶೀರ್ವಾದ ನನ್ನ ಬದ್ಧತೆಯನ್ನು ಮತ್ತಷ್ಟು ಗಟ್ಟಿಗೊಳಿಸಿದೆ. ಹಾಗಾಗಿ ಈ ಕ್ಷೇತ್ರದ ಅಭಿವೃದ್ಧಿಗೆ ಪಣ ತೊಟ್ಟಿದ್ದು, ಉತ್ತರ ಕರ್ನಾಟಕದ ಅಭಿವೃದ್ಧಿಯೇ ನಮ್ಮ ಗುರಿ" ಎಂದು ಹೇಳಿದ್ದಾರೆ. 

ಪ್ರತ್ಯೇಕ ರಾಜ್ಯದ ಕೂಗಿಗೆ ನನ್ನ ಸಹಮತ ಇಲ್ಲ: ಯಡಿಯೂರಪ್ಪ

ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿಗೆ ಅಂದು ಸಾಥ್ ನೀಡದ ಬಿಜೆಪಿ, ಇದು ಪ್ರತ್ಯೇಕ ಕರ್ನಾಟಕದ ಕೂಗಿಗೆ ಧ್ವನಿಗೂಡಿಸಿದೆ ಎಂದು ತೀವ್ರ ವಾಗ್ದಾಳಿ ನಡೆಸಿರುವ ಸಿದ್ದರಾಮಯ್ಯ, ಹೈದ್ರಾಬಾದ್ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ನೀಡಲು ಸಂವಿಧಾನಕ್ಕೆ ತಿದ್ದುಪಡಿ (371-ಜೆ) ಮಾಡಬೇಕೆಂಬ ಬೇಡಿಕೆ ಈಡೇರಿಸಿದ್ದು ಕಾಂಗ್ರೆಸ್ ಪಕ್ಷ. ಆದರೆ ಬಿಜೆಪಿಯ ಆ ಬೇಡಿಕೆಯನ್ನು ತಿರಸ್ಕರಿಸಿದ್ದ ಬಿಜೆಪಿ ನಾಯಕರು ಈಗ ಪ್ರತ್ಯೇಕ ರಾಜ್ಯದ ಬೇಡಿಕೆ ಇಟ್ಟಿರುವುದು ಆತ್ಮ ದ್ರೋಹ ಮಾತ್ರವಲ್ಲ, ಆತ್ಮವಂಚಕ ನಡವಳಿಕೆ ಕೂಡ ಹೌದು. ಡಿ.ಎಂ ನಂಜುಂಡಪ್ಪ ಸಮಿತಿಯ ಶಿಫಾರಸ್ಸಿನಂತೆ ರೂಪಿಸಲಾಗಿದ್ದ ವಿಶೇಷ ಅಭಿವೃದ್ಧಿ ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿ ಮಾಡಲು ಅದರ ಅವಧಿಯನ್ನು 5 ವರ್ಷಗಳ‌ ಕಾಲ ವಿಸ್ತರಿಸಿದ್ದು ನಮ್ಮ ಸರ್ಕಾರ. ಪ್ರತೀ ವರ್ಷ ಇದಕ್ಕಾಗಿ ರೂ. 1500 ಕೋಟಿ ವಿಶೇಷ ಅನುದಾನವನ್ನು ನಮ್ಮ‌ ಸರ್ಕಾರ ನೀಡಿತ್ತು ಎಂದಿದ್ದಾರೆ. 

ಸಮ್ಮಿಶ್ರ ಸರ್ಕಾರದ ಬಜೆಟ್'ನಲ್ಲಿ ಉತ್ತರ ಕರ್ನಾಟಕ ಭಾಗದ ಜನರಿಗೆ ಅನುದಾನ ನೀಡಿಲ್ಲ, ಆ ಭಾಗದ ಅಭಿವೃದ್ಧಿಯನ್ನು ಕಡೆಗಣಿಸಲಾಗಿದೆ. ಯಾರೇ ಮುಖ್ಯಮಂತ್ರಿಯಾಗಿ ಬಂದರೂ ದಕ್ಷಿಣ ಕರ್ನಾಟಕ ಭಾಗಕ್ಕೆ ನೀಡಿದಷ್ಟು ಸೌಲಭ್ಯವನ್ನು, ಕೊಡಗೆಗಳನ್ನು ಉತ್ತರ ಕರ್ನಾಟಕ ಭಾಗಕ್ಕೆ ನೀಡುತ್ತಿಲ್ಲ. ಸದಾ ಮಲತಾಯಿ ಧೋರಣೆ ಅನುಸರಿಸಲಾಗುತ್ತಿದೆ. ಆ ಕಾರಣದಿಂದಲೇ ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯವನ್ನಾಗಿ ಮಾಡಬೇಕು ಎಂದು ಹಲವು ಸಂಘಟನೆಗಳು ಧ್ವನಿ ಎತ್ತಿವೆ. 
 

Trending News