ಮೈಸೂರು: ಇಂದು ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿಸುತ್ತಿರುವ ಹಿನ್ನಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ ತಾವು ಒಂದು ವರ್ಗಕ್ಕೆ ಸೀಮಿತವಾದ ಮುಖ್ಯಮಂತ್ರಿ ಆಗಿರಲ್ಲ ಎಂದು ತಿಳಿಸಿದರು.
ಬುಧುವಾರದಂದು ಪತ್ನಿ ಅನಿತಾಕುಮಾರಸ್ವಾಮಿ ಜತೆ ಚಾಮುಂಡಿ ಬೆಟ್ಟಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರೊಡನೆ ಮಾತನಾಡುತ್ತಾ "ರಾಜ್ಯದಲ್ಲಿ ಮತ್ತೊಮ್ಮೆ ಮುಖ್ಯಮಂತ್ರಿ ಆಗಬೇಕೆಂಬ ಆಸೆ ಇತ್ತು ಆದರೆ ಈ ರೀತಿ ಮುಖ್ಯಮಂತ್ರಿ ಆಗಬೇಕೆಂಬ ಆಸೆ ಇರಲಿಲ್ಲ" ಎಂದು ತಿಳಿಸಿದರು.
ಇದೆ ಸಂದರ್ಭದಲ್ಲಿ ರೈತರ ಸಾಲ ಮನ್ನಾ ವಿಚಾರವಾಗಿ ಮಾತನಾಡಿದ ಅವರು "ನಾನೀಗ ಸಮ್ಮಿಶ್ರ ಸರ್ಕಾರದಲ್ಲಿ ಇದ್ದೇನೆ ಕಾಂಗ್ರೆಸ್ ಪಕ್ಷವು ತನ್ನ ಪ್ರಣಾಳಿಕೆಯಲ್ಲಿ ಹಲವು ಆಶ್ವಾಸನೆ ನೀಡಿದೆ.ಆದ್ದರಿಂದ ಕಾಂಗ್ರೆಸ್ ಪಕ್ಷದ ಜೊತೆ ಚರ್ಚಿಸಿ ಆರ್ಥಿಕ ಪರಿಸ್ಥಿತಿಗೆ ಧಕ್ಕೆಯಾಗದಂತೆ ಸಾಲ ಮನ್ನಾದ ಕುರಿತು ತಿರ್ಮಾನ ತೆಗೆದುಕೊಳ್ಳುವುದಾಗಿ ತಿಳಿಸಿದರು.