ರಾಜಕೀಯ ಬೆಳವಣಿಗೆಗೂ ನನಗೂ ಸಂಬಂಧವಿಲ್ಲ: ಸಿಎಂ

ರಾಜಕಾರಣದ ಬೆಳವಣಿಗೆ ಬಗ್ಗೆ ನನಗೇನೂ ಆತಂಕವಿಲ್ಲ. ಸರ್ಕಾರಕ್ಕೆ ಏನೂ ಆಗುವುದಿಲ್ಲ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. 

Last Updated : Jul 8, 2019, 05:11 PM IST
ರಾಜಕೀಯ ಬೆಳವಣಿಗೆಗೂ ನನಗೂ ಸಂಬಂಧವಿಲ್ಲ: ಸಿಎಂ title=

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆ ಬಗ್ಗೆ ನನಗೆ ಯಾವುದೇ ಆತಂಕ ಇಲ್ಲ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. 

ಶಾಸಕರ ರಾಜೀನಾಮೆಗೆ ಸಂಬಂಧಿಸಿದಂತೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು,  ರಾಜಕಾರಣದ ಬೆಳವಣಿಗೆ ಬಗ್ಗೆ ನನಗೇನೂ ಆತಂಕವಿಲ್ಲ. ಸರ್ಕಾರಕ್ಕೆ ಏನೂ ಆಗಲ್ಲ. ನನಗೆ ನನ್ನ ಜವಾಬ್ದಾರಿ ಮುಖ್ಯ ಎಂದು ತಿಳಿಸಿದ್ದಾರೆ.

ಇದೇ ವೇಳೆ,  ಬಿಜೆಪಿಯವರು ಏನು ಮಾಡುತ್ತಾರೆ, ಬೇರೆಯವರು ಏನು ಮಾಡುತ್ತಾರೆ ಎಂಬುದಕ್ಕೂ ನನಗೂ ಸಂಬಂಧವಿಲ್ಲ. ಸದ್ಯದ ಪರಿಸ್ಥಿತಿಯಲ್ಲಿ ರಾಜ್ಯದ ಜವಾಬ್ದಾರಿ ನಿರ್ವಹಣೆ ಮಾಡುವ ಬಗ್ಗೆ ಗಮನಹರಿಸಿದ್ದೇನೆ. ರೈತರ ಸಮಸ್ಯೆಗಳ ಬಗ್ಗೆ ಪರಿಶೀಲನೆ ನಡೆಸುತ್ತಿದ್ದೇನೆ ಎಂದು ಸಿಎಂ ಹೇಳಿದರು.

Trending News