ಬೆಂಗಳೂರು: ಕಳೆದ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದರ ಬಗ್ಗೆ ಮಾಜಿ ಸಿಎಂ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, "ಹೌದು, ಕುಮಾರಸ್ವಾಮಿ ಅವರೇ, ನಾನೇ ನಂಬಿದ ಗಿಣಿಗಳು ಹದ್ದಾಗಿ ಕಾಡಿದ್ದು ನಿಜ. ನನ್ನದೇ ತಪ್ಪು, ನಾಲ್ಕು ದಶಕಗಳ ರಾಜಕೀಯ ಒಡನಾಟದ ಅನುಭವದ ನಂತರವೂ ಹದ್ದನ್ನು ಗಿಣಿಯೆಂದು ಭ್ರಮಿಸಿ ಮೈತ್ರಿ ಮಾಡಿಕೊಂಡೆವು. ಕುಕ್ಕದೇ ಬಿಡುತ್ತಾ? ಅನುಭವಕ್ಕಿಂತ ದೊಡ್ಡ ಪಾಠ ಏನಿದೆ ಹೇಳಿ?" ಎಂದು ಪ್ರಶ್ನಿಸಿದ್ದಾರೆ.
ಹೌದು, @hd_kumaraswamy ಅವರೇ,
ನಾನೇ ನಂಬಿದ ಗಿಣಿಗಳು ಹದ್ದಾಗಿ ಕಾಡಿದ್ದು ನಿಜ. ನನ್ನದೇ ತಪ್ಪು,
ನಾಲ್ಕು ದಶಕಗಳ ರಾಜಕೀಯ ಒಡನಾಟದ ಅನುಭವದ ನಂತರವೂ ಹದ್ದನ್ನು ಗಿಣಿಯೆಂದು ಭ್ರಮಿಸಿ ಮೈತ್ರಿ ಮಾಡಿಕೊಂಡೆವು.
ಕುಕ್ಕದೇ ಬಿಡುತ್ತಾ? ಅನುಭವಕ್ಕಿಂತ ದೊಡ್ಡ ಪಾಠ ಏನಿದೆ ಹೇಳಿ?@INCKarnataka— Siddaramaiah (@siddaramaiah) September 24, 2019
2019ರ ಲೋಕಸಭೆ ಚುನಾವಣೆಯಲ್ಲಿ ತುಮಕೂರು, ಮಂಡ್ಯ ಹಾಗೂ ಕೋಲಾರ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಸೋಲಿಗೆ ಸಿದ್ದರಾಮಯ್ಯ ಸಾಕಿದ ಮುದ್ದಿನ ಗಿಣಿಗಳೇ ಕಾರಣ ಎಂದು ಆರೋಪ ಮಾಡಿದ್ದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿರುದ್ದ ಇದೀಗ ಸಿದ್ದರಾಮಯ್ಯ ಟ್ವೀಟ್ ಮೂಲಕ ತಿರುಗೇಟು ನೀಡಿದ್ದಾರೆ.