ಬಜೆಟ್ ಮಂಡನೆ ಮಾಡ್ತಿನೋ, ಇಲ್ವೋ ಗೊತ್ತಿಲ್ಲ: ಸಿಎಂ

ಈ ಬಾರಿ ನಾನು ಬಜೆಟ್ ಮಂಡಿಸುತ್ತೇನೋ ಇಲ್ಲವೋ ಗೊತ್ತಿಲ್ಲ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

Last Updated : Jun 25, 2018, 11:58 AM IST
ಬಜೆಟ್ ಮಂಡನೆ ಮಾಡ್ತಿನೋ, ಇಲ್ವೋ ಗೊತ್ತಿಲ್ಲ: ಸಿಎಂ title=

ಬೆಂಗಳೂರು: ಈ ಬಾರಿ ನಾನು ಬಜೆಟ್ ಮಂಡಿಸುತ್ತೇನೋ ಇಲ್ಲವೋ ಗೊತ್ತಿಲ್ಲ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ವಿಧಾನಸೌಧದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಕುಮಾರಸ್ವಾಮಿ ಅವರು, ಎಲ್ಲರೂ ಲೋಕಸಭೆ ಚುನಾವಣೆ ಬಳಿಕ ಹೊಸ ಬಜೆಟ್ ಮಂಡಿಸಿ ಎನ್ನುತ್ತಿದ್ದಾರೆ. ಅಲ್ಲದೆ, ಕಳೆದ ಸರ್ಕಾರದಲ್ಲಿ ಶಾಸಕರಾಗಿದ್ದವರೇ ಈ ಬಾರಿ ಶಾಸಕರಾಗಿಲ್ಲ. ಸುಮಾರು 100 ಶಾಸಕರು ಬದಲಾಗಿದ್ದಾರೆ. ಹಳೇ ಬಜೆಟ್ ಮುಂದುವರೆಸಿದರೆ ಹೊಸ ಶಾಸಕರಿಗೆ ತೊಂದರೆಯಾಗುತ್ತದೆ. ಹಾಗಾಗಿ ನೂತನ ಬಜೆಟ್ ಮಂಡಿಸಬೇಕೇ? ಬೇಡವೇ? ಆಥವಾ ಕಳೆದ ಸರ್ಕಾರದ ಬಜೆಟ್'ಗೆ ಲೇಖಾನುದಾನ ನೀಡಬೇಕೇ ಎಂಬ ಚರ್ಚೆ ನಡೆಯುತ್ತಿದೆ ಎಂದು ಹೇಳಿದರು.

ಇತ್ತೀಚೆಗೆ ರಾಜ್ಯ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಯಾವ ಪಕ್ಷವೂ ಬಹುಮತ ಪಡೆಯದ ಹಿನ್ನೆಲೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ರಚನೆಯಾಗಿದ್ದು, ಕಳೆದ ಬಾರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಅಸ್ತಿತ್ವದಲ್ಲಿದ್ದ ಕಾಂಗ್ರೆಸ್ ಸರ್ಕಾರ ಫೆಬ್ರವರಿ ತಿಂಗಳಿನಲ್ಲಷ್ಟೇ ಬಜೆಟ್ ಮಂಡಿಸಿದ್ದರು. ಈ ಹಿನ್ನೆಲೆಯಲ್ಲಿ ಇದೀಗ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ನೂತನ ಬಜೆಟ್ ಮಂಡನೆ ಅಗತ್ಯವಿಲ್ಲ ಎಂದು ಹಲವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಇದುವರೆಗೂ ಮೈತ್ರಿ ಸರ್ಕಾರದ ಬಜೆಟ್ ಮಂಡನೆ ಆಗಲೇಬೇಕು ಎನ್ನುತ್ತಿದ್ದ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ಹೇಳಿದ್ದಾರೆ.

Trending News