'ಒಕ್ಕಲಿಗರ ಬಗ್ಗೆ ನಾನು ಎಲ್ಲಿಯೂ ತಪ್ಪು ಮಾತನಾಡಿಲ್ಲ'

ಕೆಪಿಸಿಸಿ ಅಧ್ಯಕ್ಷರಾದ ಶ್ರೀ ಡಿ.ಕೆ ಶಿವಕುಮಾರ್ ಅವರು ನಮ್ಮ ಅಧ್ಯಕ್ಷರು. ನಮ್ಮಿಬ್ಬರ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ನಾನು ಒಕ್ಕಲಿಗರ ಬಗ್ಗೆ ಯಾವುದೇ ತಪ್ಪು ಹೇಳಿಕೆ ನೀಡಿಲ್ಲ. ನನಗೂ ಒಕ್ಕಲಿಗ ಸಮುದಾಯದಲ್ಲಿ ಬಹಳಷ್ಟು ಆತ್ಮಿಯರಿದ್ದಾರೆ ಎಂದು ಚಾಮರಾಜಪೇಟೆ ಶಾಸಕರು ಮತ್ತು ಮಾಜಿ ಸಚಿವರಾದ ಶ್ರೀ ಬಿ ಜೆಡ್ ಜಮೀರ್ ಅಹ್ಮದ್ ಖಾನ್ ಪ್ರತಿಕ್ರಿಯಿಸಿದ್ದಾರೆ. 

Written by - Prashobh Devanahalli | Edited by - Manjunath N | Last Updated : Jul 25, 2022, 12:41 AM IST
  • ಹುಬ್ಬಳ್ಳಿಯಲ್ಲಿ ಇಂದು ನಡೆದ ವಿರೋಧ ಪಕ್ಷದ ನಾಯಕರಾದ ಶ್ರೀ ಸಿದ್ದರಾಮಯ್ಯ ಅವರ 75ನೇ ಜನ್ಮದಿನದ ಅಮೃತ ಮಹೋತ್ಸವದ ಪೂರ್ವ ಭಾವಿ ಸಭೆ ಯಲ್ಲಿ ಭಾಗವಹಿಸಿ, ಬಳಿಕ ಅವರು ಮಾತನಾಡಿದರು
'ಒಕ್ಕಲಿಗರ ಬಗ್ಗೆ ನಾನು ಎಲ್ಲಿಯೂ ತಪ್ಪು ಮಾತನಾಡಿಲ್ಲ' title=
Photo Courtsey: Facebook

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರಾದ ಶ್ರೀ ಡಿ.ಕೆ ಶಿವಕುಮಾರ್ ಅವರು ನಮ್ಮ ಅಧ್ಯಕ್ಷರು. ನಮ್ಮಿಬ್ಬರ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ನಾನು ಒಕ್ಕಲಿಗರ ಬಗ್ಗೆ ಯಾವುದೇ ತಪ್ಪು ಹೇಳಿಕೆ ನೀಡಿಲ್ಲ. ನನಗೂ ಒಕ್ಕಲಿಗ ಸಮುದಾಯದಲ್ಲಿ ಬಹಳಷ್ಟು ಆತ್ಮಿಯರಿದ್ದಾರೆ ಎಂದು ಚಾಮರಾಜಪೇಟೆ ಶಾಸಕರು ಮತ್ತು ಮಾಜಿ ಸಚಿವರಾದ ಶ್ರೀ ಬಿ ಜೆಡ್ ಜಮೀರ್ ಅಹ್ಮದ್ ಖಾನ್ ಪ್ರತಿಕ್ರಿಯಿಸಿದ್ದಾರೆ. 

ಹುಬ್ಬಳ್ಳಿಯಲ್ಲಿ ಇಂದು ನಡೆದ ವಿರೋಧ ಪಕ್ಷದ ನಾಯಕರಾದ ಶ್ರೀ ಸಿದ್ದರಾಮಯ್ಯ ಅವರ 75ನೇ ಜನ್ಮದಿನದ ಅಮೃತ ಮಹೋತ್ಸವದ ಪೂರ್ವ ಭಾವಿ ಸಭೆ ಯಲ್ಲಿ ಭಾಗವಹಿಸಿ, ಬಳಿಕ ಅವರು ಮಾತನಾಡಿದರು.

ನಾನು ಹೇಳಿದ್ದು, ಕೇವಲ ಒಂದು ಸಮುದಾಯದ ಮತಗಳಿಂದ ಮುಖ್ಯಮಂತ್ರಿಗಳಾಗಲು ಸಾಧ್ಯವಿಲ್ಲ. ಎಲ್ಲ ಸಮುದಾಯದವರ ಬೆಂಬಲ, ಆಶೀರ್ವಾದ ಇದ್ದರೆ ಮಾತ್ರ ರಾಜ್ಯದ ಸಿಎಂ ಆಗಲು ಸಾಧ್ಯ ಎಂದು. ನಾನು ನನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದೇನೆಯೇ ಹೊರತು, ನಾನು ಒಗ್ಗಲಿಗರ ಬಗ್ಗೆ ಆಗಲಿ, ಅಥವಾ ಯಾವುದೇ ಸಮುದಾಯದ ಬಗ್ಗೆ ಎಲ್ಲಿಯೂ ತಪ್ಪು ಹೇಳಿಕೆ ನೀಡಿಲ್ಲ. ನನ್ನ ಹೇಳಿಕೆಯನ್ನು ತಿರುಚಲಾಗಿದ್ದು , ಈ ಬಗ್ಗೆ ಮಾನ್ಯ ಶ್ರೀ ಸಿ.ಟಿ ರವಿ ಅವರು ಹಾಗೂ ಆರ್ ಅಶೋಕ್ ಅವರು ಮಾತನಾಡಿದ್ದನ್ನು ನಾನು ಕೇಳಿದ್ದೇನೆ. ಸ್ವಾಮೀಜಿ ಅವರು ಅಸಮಾಧಾನಗೊಂಡಿದ್ದು ನನಗೆ ಗೊತ್ತಿಲ್ಲ. ಒಕ್ಕಲಿಗರ ಸಮುದಾಯದ ಮೇಲೆ ನನಗೆ ಅಪಾರ ಗೌರವ, ಅಭಿಮಾನವಿದೆ. ನಾನು ಒಕ್ಕಲಿಗರ ಬಗ್ಗೆ ಲಘುವಾಗಿ ಮಾತನಾಡಿದ್ದಕ್ಕೆ ಎಐಸಿಸಿ ಯಿಂದ ನೋಟಿಸ್ ಬಂದಿದೆ ಎಂಬುದು ಸುಳ್ಳು. ನಾನು ಏನೂ ತಪ್ಪು ಮಾತನಾಡಿಯೇ ಇಲ್ಲ ಎಂದ ಮೇಲೆ ನನಗೇಕೆ ನೋಟೀಸ್ ನೀಡುತ್ತಾರೆ ಮತ್ತು ಚೆಲುವರಾಯಸ್ವಾಮಿ ಅವರು ನಂಗೆ ಏನೂ ಹೇಳಿಲ್ಲ ಎಂದು ಶಾಸಕ ಜಮೀರ್ ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಮುಂದಿನ ಚುನಾವಣೆಯಲ್ಲಿ ಬಿ.ಎಸ್.ಯಡಿಯೂರಪ್ಪ ಅವರ ಬಲ ಮಾರ್ಗದರ್ಶನ ಇರಲಿದೆ : ಸಿಎಂ ಬೊಮ್ಮಾಯಿ

ಮುಂದುವರಿದು ಮಾತನಾಡಿದ ಅವರು, ಯಾರೋ ನನ್ನ ಬಗ್ಗೆ ಇಲ್ಲದ ವದಂತಿ ಹಬ್ಬಿಸಿ, ಬಾಯಿಗೆ ಬಂದಂತೆ ಅಬ್ಬರಿಸಿ ಬೊಬ್ಬಿರಿದು, ನನ್ನ ಬಾಯಿ ಮುಚ್ಚಿಸಬಹುದು ಎಂದುಕೊಂಡಿದ್ದರೆ, ಅದು ಸಾಧ್ಯವಿಲ್ಲ. ನನ್ನ ಬಾಯಿ ಮುಚ್ಚೋದು ನಾನು ಸತ್ತ ಮೇಲೆಯೇ. ನಾನು ಪಕ್ಷ ಪೂಜೆನೂ ಮಾಡ್ತಿ‌‌ನಿ. ಜೊತೆಗೆ ವ್ಯಕ್ತಿ ಪೂಜೆನೂ ಮಾಡ್ತೀನಿ. ನಾನು ನನ್ನ ಅಭಿಪ್ರಾಯ ಹೇಳಿದ್ದೆನೆ. ಅದರಲ್ಲಿ ತಪ್ಪೇನಿದೆ. ಪದೇ ಪದೇ ಅದೇ ವಿಚಾರ ಮುಂದುವರೆಸೋದು ಬೇಡ. ರಾಜಕೀಯದಲ್ಲಿ ನಮ್ಮ ಭವಿಷ್ಯ ನಿರ್ಧರಿಸುವವರು ಜನ ಎಂದು ಶಾಸಕರಾದ ಶ್ರೀ ಜಮೀರ್ ಅಹ್ಮದ್ ಖಾನ್, ಖಡಕ್ ಆಗಿ ಪ್ರತಿಕ್ರಿಯಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

Trending News