‘ಗುತ್ತಿಗೆದಾರ ಸಂತೋಷ್ ಯಾರೆಂದೇ ನಂಗೆ ಗೊತ್ತಿಲ್ಲ, ನಾನು ರಾಜೀನಾಮೆ ನೀಡಲ್ಲ’

ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಮಂಗಳವಾರ ಉಡುಪಿಯ ಖಾಸಗಿ ಲಾಡ್ಜ್ ವೊಂದರಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

Written by - Zee Kannada News Desk | Last Updated : Apr 12, 2022, 07:05 PM IST
  • ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ
  • ಈ ಪ್ರಕರಣದಲ್ಲಿ ನನ್ನ ಪಾತ್ರವಿಲ್ಲ, ಸಂತೋಷ್ ಪಾಟೀಲ್ ಯಾರೆಂಬುದೇ ನನಗೆ ಗೊತ್ತಿಲ್ಲ
  • ನಾನು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲವೆಂದ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ
‘ಗುತ್ತಿಗೆದಾರ ಸಂತೋಷ್ ಯಾರೆಂದೇ ನಂಗೆ ಗೊತ್ತಿಲ್ಲ, ನಾನು ರಾಜೀನಾಮೆ ನೀಡಲ್ಲ’ title=
'ಸಂತೋಷ್ ಪಾಟೀಲ್ ಯಾರೆಂಬುದೇ ನನಗೆ ಗೊತ್ತಿಲ್ಲ'

ಮೈಸೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ನನ್ನ ಪಾತ್ರ ಇಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಮಾತನಾಡಿರುವ ಅವರು, ‘ಈ ಪ್ರಕರಣದಲ್ಲಿ ನನ್ನ ಪಾತ್ರ ಇಲ್ಲ. ಸಂತೋಷ್ ಪಾಟೀಲ್ ಯಾರೆಂಬುದೇ ನನಗೆ ಗೊತ್ತಿಲ್ಲ. ಆತ ನಮ್ಮ ಇಲಾಖೆಯ ಮೇಲೆ ಆರೋಪ ಮಾಡಿದ್ದ. ಈ ವಿಚಾರವಾಗಿ ನಾವು ನ್ಯಾಯಾಲಯದಲ್ಲಿ ಪ್ರಕರಣ ದಾಖಲು ಮಾಡಿದ್ದೇವೆ. ಆತನ ಮೇಲೆ ಮತ್ತು ಒಂದು ಖಾಸಗಿ ಚಾನಲ್ ಮೇಲೆ ಪ್ರಕರಣ ದಾಖಲು ಮಾಡಲಾಗಿದೆ’ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಕೇಸ್‌: ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ

ನ್ಯಾಯಾಲಯದಿಂದ ಸಂತೋಷ್ ಪಾಟೀಲ್‍ಗೆ ನೋಟಿಸ್ ಬಂದಿದೆ. ಹೀಗಾಗಿ ಆತ ಆತ್ಮಹತ್ಯೆ ಮಾಡಿಕೊಂಡಿರಬಹುದು. ಆತ ನಮ್ಮ ಇಲಾಖೆಯಿಂದ ಯಾವುದೇ ಟೆಂಡರ್ ಪಡೆದುಕೊಂಡಿಲ್ಲ. ನನಗೂ ಈ ಆತ್ಮಹತ್ಯೆ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ. ಹೀಗಾಗಿ ನಾನು ರಾಜೀನಾಮೆ ನೀಡುವ ಪ್ರಶ್ನೆಯೇ ಬರುವುದಿಲ್ಲವೆಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಮಂಗಳವಾರ ಉಡುಪಿಯ ಖಾಸಗಿ ಲಾಡ್ಜ್‍ವೊಂದರಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ತನ್ನ ಸಾವಿಗೆ ಸಚಿವ ಕೆ.ಎಸ್.ಈಶ್ವರಪ್ಪನವರೇ ಕಾರಣವೆಂದು ಡೇತ್‍ನೋಟ್‍ನಲ್ಲಿ ಉಲ್ಲೇಖಿಸಿದ್ದಾನೆ.

ಇದನ್ನೂ ಓದಿ: ಕಾಂಗ್ರೆಸ್ ಪಕ್ಷಕ್ಕೆ ಕಾನೂನು, ಸಂವಿಧಾನದಲ್ಲಿ ನಂಬಿಕೆ ಇಲ್ಲವೇ?: ಬಿಜೆಪಿ

ಪ್ರಧಾನಿ ನರೇಂದ್ರ ಮೋದಿ ಮತ್ತು ಸಿಎಂ ಬಸವರಾಜ್ ಬೊಮ್ಮಾಯಿಯವರಿಗೆ ಪತ್ರ ಬರೆದಿದ್ದ ಸಂತೋಷ್, ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಶೇ.40ರಷ್ಟು ಕಮಿಷನ್ ಆರೋಪ ಮಾಡಿದ್ದರು. ಪ್ರಕರಣ ಸಂಬಂಧಿಸಿದಂತೆ ಈಶ್ವರಪ್ಪ ರಾಜೀನಾಮೆ ನೀಡಬೇಕೆಂದು ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳು ಪಟ್ಟು ಹಿಡಿದಿವೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News