ಸುಮಲತಾ ಅವರು ಕಾಂಗ್ರೆಸ್ ವಿರುದ್ಧ ಹೋಗುವುದಿಲ್ಲ ಎಂಬ ವಿಶ್ವಾಸವಿದೆ: ಡಿಕೆಶಿ

ಸುಮಲತಾ ಅಂಬರೀಶ್ ಅವರು ಕಾಂಗ್ರೆಸ್ ವಿರುದ್ಧ ಹೋಗುವುದಿಲ್ಲ ಎಂಬ ಭರವಸೆ ನನಗಿದೆ ಎಂದು ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.   

Last Updated : Mar 9, 2019, 10:52 AM IST
ಸುಮಲತಾ ಅವರು ಕಾಂಗ್ರೆಸ್ ವಿರುದ್ಧ ಹೋಗುವುದಿಲ್ಲ ಎಂಬ ವಿಶ್ವಾಸವಿದೆ: ಡಿಕೆಶಿ title=

ಹುಬ್ಬಳ್ಳಿ: ಸುಮಲತಾ ಅಂಬರೀಶ್ ಅವರು ಕಾಂಗ್ರೆಸ್ ವಿರುದ್ಧ ಹೋಗುವುದಿಲ್ಲ ಎಂಬ ಭರವಸೆ ನನಗಿದೆ ಎಂದು ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. 

ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಮಲತಾ ಅವರ ಮನವೊಲಿಸಲು ನನಗೆ ಇದುವರೆಗೂ ಯಾರೂ ಹೇಳಿಲ್ಲ. ಈಗಾಗಲೇ ಮಂಡ್ಯ ಕ್ಷೇತ್ರವನ್ನು ಜೆಡಿಎಸ್ ಪಕ್ಷಕ್ಕೆ ಬಿಟ್ಟುಕೊಡಲಾಗಿದೆ. ಇನ್ನು, ರೇವಣ ಅವರು ಸುಮಲತಾ ಅವರ ಬಗ್ಗೆ ಏನು ಹೇಳಿದ್ದಾರೋ ತಿಳಿದಿಲ್ಲ. ಆದರೆ ಸುಮಲತಾ ಅವರು ಕಾಂಗ್ರೆ ವಿರುದ್ಧವಾಗಿ ಹೋಗುವುದಿಲ್ಲ ಅನ್ನೋ ಭರವಸೆ ಇದೆ ಎಂದು ಹೇಳಿದರು.

ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್-ಜೆಡಿಎಸ್ ಟಿಕೆಟ್ ಹಂಚಿಕೆ ಕುರಿತು ಪ್ರತಿಕ್ರಿಯಿಸಿದ ಡಿಕೆಶಿ, ಈ ಬಗ್ಗೆ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರನ್ನೇ ಪ್ರಶ್ನಿಸಿ ಎಂದು ಹೇಳಿ ಮೌನವಹಿಸಿದರು.

Trending News