ಹಾವೇರಿ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಅಭಿವೃದ್ಧಿ ಮಾಡುತ್ತೇನೆ: ಗೆಲುವಿನ ಬಳಿಕ ಬೊಮ್ಮಾಯಿ ಹೇಳಿಕೆ

Haveri Lok Sabha Election Result: ಲೋಕಸಭಾ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವಿನ ನಂತರ ಹಾವೇರಿಯಲ್ಲಿ ನಡೆದ ಬೃಹತ್ ಮೆರವಣಿಗೆಯಲ್ಲಿ ಪಾಲ್ಗೊಂಡು ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದರು.

Written by - Prashobh Devanahalli | Edited by - Bhavishya Shetty | Last Updated : Jun 4, 2024, 05:37 PM IST
    • ಲೋಕಸಭಾ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು
    • ಹಾವೇರಿ ಗದಗ ಕ್ಷೇತ್ರವನ್ನು ಮಾದರಿ ಕ್ಷೇತ್ರವಾಗಿ ಅಭಿವೃದ್ದಿ ಮಾಡಲಾಗುವುದು
    • ಬೃಹತ್ ಮೆರವಣಿಗೆಯಲ್ಲಿ ಪಾಲ್ಗೊಂಡ ಬಸವರಾಜ ಬೊಮ್ಮಾಯಿ
ಹಾವೇರಿ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಅಭಿವೃದ್ಧಿ ಮಾಡುತ್ತೇನೆ: ಗೆಲುವಿನ ಬಳಿಕ ಬೊಮ್ಮಾಯಿ ಹೇಳಿಕೆ title=
Basavaraj Bommai- File Photo

ಹಾವೇರಿ: ಹಾವೇರಿ ಗದಗ ಕ್ಷೇತ್ರವನ್ನು ಮಾದರಿ ಕ್ಷೇತ್ರವಾಗಿ ಅಭಿವೃದ್ದಿ ಮಾಡಲಾಗುವುದು ಎಂದು ಕ್ಷೇತ್ರದ ನೂತನ ಸಂಸದರಾಗಿ ಆಯ್ಕೆಯಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ಲೋಕಸಭಾ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವಿನ ನಂತರ ಹಾವೇರಿಯಲ್ಲಿ ನಡೆದ ಬೃಹತ್ ಮೆರವಣಿಗೆಯಲ್ಲಿ ಪಾಲ್ಗೊಂಡು ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದರು. ನನ್ನ ಗೆಲುವಿಗೆ ಕಾರಣರಾದ ಹಾವೇರಿ ಗದಗ ಜಿಲ್ಲೆಗಳ ಜನರಿಗೆ ಕೋಟಿ ಕೋಟಿ  ನಮನಗಳು. ಮಹಾಜನತೆಯ ಆಶೀರ್ವಾದದಿಂದ ಈ ಗೆಲುವು ಸಾಧಿಸಿದ್ದೇನೆ ಎಂದರು.

ಇದನ್ನೂ ಓದಿ: ಬಿಜೆಪಿ ಭದ್ರಕೋಟೆ ದಕ್ಷಿಣ ಕನ್ನಡದಲ್ಲಿ ಮತ್ತೆ ಅರಳಿದ ಕಮಲ: ಕ್ಯಾ.ಬ್ರಿಜೇಶ್ ಚೌಟಗೆ ಭರ್ಜರಿ ಗೆಲುವು

ಈಗಾಗಲೇ ಸಂದೇಶ ಬಂದಿದೆ. ಮತ್ತೊಮ್ಮೆ ಮೋದಿಯವರನ್ನು ಪ್ರಧಾನಿ ಮಾಡಲಾಗುವುದು. ದೆಹಲಿಯಿಂದ ಬಂದ ಮೇಲೆ ದೊಡ್ಡ ಪ್ರಮಾಣದಲ್ಲಿ ಮೆರವಣಿಗೆ ಮಾಡೋಣ. ನೀವು ಇಟ್ಟಿರುವ ನಂಬಿಕೆಗೆ ತಕ್ಕಹಾಗೆ ಕೆಲಸ ಮಾಡುತ್ತೇನೆ. ಮಹಿಳೆಯರ ರಕ್ಷಣೆ ಮಾಡುವ ಕೆಲಸ ಮಾಡುತ್ತೇನೆ ಎಂದು ಹೇಳಿದರು.

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರ ಇರಬಹುದು. ನಮ್ಮ ಬಳಿ ಜನ ಶಕ್ತಿ ಇದೆ. ಜನ ಶಕ್ತಿ ರಾಜಶಕ್ತಿ ನಡುವೆ ಸಂಘರ್ಷ ಬಂದಾಗ ಜನಶಕ್ತಿ ಗೆಲ್ಲುತ್ತದೆ. ಅಧಿಕಾರಿಗಳು ಕಾನೂನು ಪ್ರಕಾರ ಕೆಲಸ ಮಾಡದಿದ್ದರೆ ಸುಮ್ಮನೆ ಬಿಡುವುದಿಲ್ಲ ನಮ್ಮ ಕಾರ್ಯಕರ್ತರಿಗೆ ವಿನಾಕಾರಣ ತೊಂದರೆ ಕೊಟ್ಟರೆ ಸುಮ್ಮನಿರುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ಇದನ್ನೂ ಓದಿ: 25 ವರ್ಷಗಳ ದಳಪತಿ ಆಡಳಿತಕ್ಕೆ ಕಾಂಗ್ರೆಸ್ ಹೊಡೆತ: ಶ್ರೇಯಸ್ ಪಟೇಲ್ ಗೆಲುವು- ಪ್ರಜ್ವಲ್'ಗೆ ಸೋಲು

ನನ್ನ ಮೇಲೆ ನಂಬಿಕೆ ಇಟ್ಡು ಟಿಕೆಟ್ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ಹೇಳಿದರು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News