ಮಂಗನ ಕಾಯಿಲೆಗೆ ಹೊಸ ವ್ಯಾಕ್ಸಿನ್ ತಯಾರಿಸಲು ICMR ಒಪ್ಪಿಗೆ ಸೂಚಿಸಿದೆ: ದಿನೇಶ್ ಗುಂಡೂರಾವ್

ಉಣ್ಣೆ ಕಡಿತವನ್ನು ತಡೆಗಟ್ಟಲು ಬಳಸಲಾಗುವ DEPA ತೈಲವನ್ನು ಸಾರ್ವಜನಿಕರಿಗೆ ಬಳಸಲು ಉಚಿತವಾಗಿ ನೀಡಲಾಗಿದೆ. ರಾಜ್ಯಮಟ್ಟದಿಂದ ಈವರೆಗೆ 62794 DEPA ಬಾಟಲ್‌ಗಳನ್ನು ವಿತರಿಲಾಗಿದೆ. ರಾಜ್ಯ ಮಟ್ಟದಿಂದ ಅಧಿಕಾರಿಗಳು, RRT ತಂಡ ನಿಯಮಿತವಾಗಿ ಭೇಟಿ ನೀಡುತ್ತಿದ್ದು, ಸಮಯೋಚಿತ ಮಾರ್ಗದರ್ಶನವನ್ನು ನೀಡುತ್ತಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ

Written by - Prashobh Devanahalli | Edited by - Puttaraj K Alur | Last Updated : Feb 10, 2024, 06:46 PM IST
  • ಮಂಗನ ಕಾಯಿಲೆಗೆ ಹೊಸ ವ್ಯಾಕ್ಸಿನ್ ಕುರಿತು ಐಸಿಎಂಆರ್ ಜೊತೆ ಚರ್ಚೆ ನಡೆಸಲಾಗಿದೆ
  • ವ್ಯಾಕ್ಸಿನ್ ತಯಾರಿಕೆಗೆ ICMR ಒಪ್ಪಿಗೆ ಸೂಚಿಸಿದೆ ಎಂದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
  • ಮಳೆಗಾಲ ಆರಂಭ-ಅಂತ್ಯದಲ್ಲಿ ಮಂಗನ ಕಾಯಿಲೆ ಹೆಚ್ಚಳವಾಗಲಿದ್ದು, ಜನರು ಬಹಳ ಎಚ್ಚರಿಕೆಯಿಂದಿರಬೇಕು
ಮಂಗನ ಕಾಯಿಲೆಗೆ ಹೊಸ ವ್ಯಾಕ್ಸಿನ್ ತಯಾರಿಸಲು ICMR ಒಪ್ಪಿಗೆ ಸೂಚಿಸಿದೆ: ದಿನೇಶ್ ಗುಂಡೂರಾವ್ title=
ಮಂಗನ ಕಾಯಿಲೆಗೆ ಹೊಸ ವ್ಯಾಕ್ಸಿನ್

ಬೆಂಗಳೂರು: ಮಂಗನ ಕಾಯಿಲೆಗೆ ಹೊಸ ವ್ಯಾಕ್ಸಿನ್ ಕುರಿತು ಐಸಿಎಂಆರ್ ಜೊತೆ ಚರ್ಚೆ ನಡೆಸಲಾಗಿದ್ದು, ವ್ಯಾಕ್ಸಿನ್ ತಯಾರಿಕೆಗೆ ಐಸಿಎಂಆರ್ ಒಪ್ಪಿಗೆ ಸೂಚಿಸಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಉಡುಪಿಯಲ್ಲಿ ಶನಿವಾರ ಮಂಗನ ಕಾಯಿಲೆ ನಿಯಂತ್ರಣ ಕುರಿತಂತೆ ಆರೋಗ್ಯ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದ ಅವರು, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಮಾಹಿತಿ ನೀಡಿದರು. 

ಮಳೆಗಾಲ ಆರಂಭ ಮತ್ತು ಅಂತ್ಯದಲ್ಲಿ ಮಂಗನ ಕಾಯಿಲೆ ಹೆಚ್ಚಳವಾಗುತ್ತದೆ.‌ ಮಾರ್ಚ್‌ವರೆಗೆ ಜನರು ಬಹಳ ಎಚ್ಚರಿಕೆಯಿಂದ ಇರಬೇಕು. ಯಾವುದೇ ರೀತಿಯ ಲಕ್ಷಣಗಳು ಕಂಡುಬಂದ ಕೂಡಲೇ ಚಿಕಿತ್ಸೆ ಪಡೆದುಕೊಳ್ಳಲು ಮುಂದಾಗಬೇಕು ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು.‌ ಮಂಗನ ಕಾಯಿಲೆಗೆ ABARK ಫಂಡ್‌ನಲ್ಲಿ ಉಚಿತವಾಗಿ ಚಿಕಿತ್ಸೆ ನೀಡಲು ಈಗಾಗಲೇ ಸೂಚಿಸಲಾಗಿದೆ. ಅಲ್ಲದೇ KFD ಪಾಸಿಟಿವ್ ಬಂದವರಿಗೆ ಆಸ್ಪತ್ರೆಯಲ್ಲೇ ಚಿಕಿತ್ಸೆ ನೀಡಲು ಕಡ್ಡಾಯಗೊಳಿಸಲಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು. 

ಇದನ್ನೂ ಓದಿ: ಮಕ್ಕಳಿಗೆ ಸಂಸ್ಕೃತಿ, ಸಂಸ್ಕಾರ ಕಲಿಸಬೇಕು: ಪರಿಸರ ಸಚಿವ ಈಶ್ವರ ಖಂಡ್ರೆ

ರಾಜ್ಯದಲ್ಲಿ ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗನ ಕಾಯಿಲೆ ಹೆಚ್ಚಾಗಿ ಕಾಣಿಸಿಕೊಂಡಿದ್ದು, ಒಟ್ಟು 70 ಪ್ರಕರಣಗಳು ದಾಖಲಾಗಿವೆ. ಹಲವರು ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. 20 ಸಕ್ರಿಯ ಪ್ರಕರಣಗಳು ಇವೆ. ಇಬ್ಬರು ಸಾವಾಗೀಡಾಗಿದ್ದು, ಇಬ್ಬರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಾವನ್ನಪ್ಪಿದವರ ಕುಟುಂಬಗಳಿಗೆ ಪರಿಹಾರ ನೀಡುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚೆ ಮಾಡುವುದಾಗಿ ಅವರು ಹೇಳಿದರು.

ಸಾವು ಆಗದೆ ಇರುವ ಬಗ್ಗೆ ಮುನ್ನೆಚ್ಚರಿ ಕಾರ್ಯಕ್ರಮ ಕೈಗೊಳ್ಳಲು ಆರೋಗ್ಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಹಿಂದೆ ಇರುವ ವ್ಯಾಕ್ಸಿನ್ ಬಳಕೆ ಮಾಡಬೇಡಿ ಎಂದು ಸೂಚಿಸಲಾಗಿದೆ. ಹೊಸ ವ್ಯಾಕ್ಸಿನ್ ಬಗ್ಗೆ ಐಸಿಎಂಆರ್ ಜೊತೆ ಚರ್ಚೆ ನಡೆಸಲಾಗಿದೆ. ಐಸಿಎಂಆರ್‌ನವರು ವ್ಯಾಕ್ಸಿನ್ ತಯಾರಿಕೆಗೆ ಒಪ್ಪಿಗೆ ನೀಡಿದ್ದು, ಹೈದರಾಬಾದ್ ಸಂಸ್ಥೆ ಸಂಶೋಧನೆ ಮಾಡಿ ವ್ಯಾಕ್ಸಿನ್ ತಯಾರಿಸುತ್ತದೆ. ಮುಂದಿನ ವರ್ಷಕ್ಕೆ ಮಂಗನ ಕಾಯಿಲೆಗೆ ಒಳ್ಳೆಯ ಚುಚ್ಚುಮದ್ದು ಸಿಗಬಹುದು ಎಂದು ಇದೇ ವೇಳೆ ಭರವಸೆ ವ್ಯಕ್ತಪಡಿಸಿದರು. 

ಇದನ್ನೂ ಓದಿ: ಭ್ರಷ್ಟಾಚಾರದ ತನಿಖೆಯನ್ನು ಸಿಬಿಐಗೆ ವಹಿಸಿ, ಸಿಎಂ ರಾಜೀನಾಮೆ ನೀಡಲಿ: ಪ್ರತಿಪಕ್ಷ ನಾಯಕ ಆರ್ ಅಶೋಕ್ ಆಗ್ರಹ

ಉಣ್ಣೆ ಕಡಿತವನ್ನು ತಡೆಗಟ್ಟಲು ಬಳಸಲಾಗುವ DEPA ತೈಲವನ್ನು ಸಾರ್ವಜನಿಕರಿಗೆ ಬಳಸಲು ಉಚಿತವಾಗಿ ನೀಡಲಾಗಿದೆ. ರಾಜ್ಯಮಟ್ಟದಿಂದ ಈವರೆಗೆ 62794 DEPA ಬಾಟಲ್‌ಗಳನ್ನು ವಿತರಿಲಾಗಿದೆ. ರಾಜ್ಯ ಮಟ್ಟದಿಂದ ಅಧಿಕಾರಿಗಳು, RRT ತಂಡ ನಿಯಮಿತವಾಗಿ ಭೇಟಿ ನೀಡುತ್ತಿದ್ದು, ಸಮಯೋಚಿತ ಮಾರ್ಗದರ್ಶನವನ್ನು ನೀಡುತ್ತಿದ್ದಾರೆ. ಪ್ರತಿದಿನ ವಿಸಿ ಮುಖೇನ ಸದರಿ ಕಾರ್ಯ ಚಟುವಟಿಕೆಗಳ ಮೇಲ್ವಿಚಾರಣೆಯನ್ನು ನಡೆಸಲಾಗುತ್ತಿದೆ. VDL ಶಿವಮೊಗ್ಗ ಮತ್ತು MIV ಮಣಿಪಾಲದಲ್ಲಿನ ಪ್ರಯೋಗಾಲಯಗಳನ್ನು KFD ಪರೀಕ್ಷೆಗೆ ಗುರುತಿಸಲಾಗಿದ್ದು, ಶೀಘ್ರವಾಗಿ ಮಾದರಿಗಳನ್ನು ಸಂಸ್ಕರಿಸಿ ಪರೀಕ್ಷೆ ನಡೆಸಿ ವರದಿ ನೀಡಲಾಗುತ್ತಿದೆ. KFD ಪಾಸಿಟಿವ್ ಪ್ರಕರಣಗಳನ್ನು ಮನೆಯಿಂದ ಆಸ್ಪತ್ರೆಗೆ ಸಾಗಿಸಲು ಮತ್ತು ಅಗತ್ಯವಿದ್ದರೆ, ಉನ್ನತ ರೆಫರಲ್ ಸೆಂಟರ್‌ ನಾಗಿಸಲು ಉಚಿತ ಆಂಬ್ಯುಲೆನ್ಸ್ ಸೌಲಭ್ಯ ಒದಗಿಸಿದೆ. ರೋಗ ಪ್ರಸರಣಾ ಋತುವಿನಲ್ಲಿ ತಾಲೂಕು ಆಸ್ಪತ್ರೆಗಳಾದ ಜಿಸಿಎಚ್ ತೀರ್ಥಹಳ್ಳಿ, ಸಾಗರ, ಸಿದ್ದಾಪುರ ಮತ್ತು ಹೊನ್ನಾವರ ಉಪ ವಿಭಾಗೀಯ ಆಸ್ಪತ್ರೆಗಳಲ್ಲಿ KFDಗೆ ಚಿಕಿತ್ಸೆ ನೀಡಲು ಹಾಸಿಗೆಗಳನ್ನು ಮೀಸಲಿರಿಸಲಾಗಿದೆ. ICUನಲ್ಲಿ ದಾಖಲಾಗಿರುವ ರೋಗಿಗಳ ಆರೋಗ್ಯ ಸ್ಥಿತಿ-ಗತಿಯನ್ನು ಪ್ರತಿದಿನ ಪರೀಶೀಲಿಸಲು ಟೆಲಿ-ICU ಸೇವೆಯನ್ನು KFDಗೂ ವಿಸ್ತರಿಸಲಾಗಿದೆ ಎಂದು ಆರೋಗ್ಯ ಇಲಾಖೆ ಕೈಗೊಂಡ ಕ್ರಮಗಳ ಕುರಿತು ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ನೀಡಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News