ಅಂಬೇಡ್ಕರ್ ಸಂವಿಧಾನ ನೀಡದೇ ಹೋಗಿದ್ದರೆ ನಾನು ಮುಖ್ಯಮಂತ್ರಿ ಆಗುತ್ತಲೇ ಇರಲಿಲ್ಲ-ಸಿಎಂ ಸಿದ್ದರಾಮಯ್ಯ 

CM Siddaramaiah on B.R. Ambedkar's Constitution : ಅಂಬೇಡ್ಕರ್ ಸಂವಿಧಾನ ನೀಡದೇ ಹೋಗಿದ್ದರೆ ನಾನು ಮುಖ್ಯಮಂತ್ರಿ ಆಗುತ್ತಲೇ ಇರಲಿಲ್ಲ. ಆದ್ದರಿಂದ ಸಂವಿಧಾನ ವಿರೋಧಿಗಳು ನಮ್ಮ ವಿರೋಧಿಗಳು ಎನ್ನುವುದನ್ನು ನಾವು-ನೀವು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು. ಸಂವಿಧಾನದ ವಿರೋಧಿಗಳನ್ನು ಸಾರಾ ಸಗಟಾಗಿ ತಿರಸ್ಕರಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಮನವಿ ಮಾಡಿದರು.

Written by - Manjunath N | Last Updated : Jan 31, 2024, 04:57 PM IST
  • ಪೌರ ಕಾರ್ಮಿಕರು ಘನತೆಯಿಂದ ಬದುಕು ಕಟ್ಟಿಕೊಳ್ಳಬೇಕು ಎನ್ನುವುದು ನಮ್ಮ ಪಕ್ಷದ ಮತ್ತು ನಮ್ಮ ಬದ್ಧತೆ.
  • ಹೀಗಾಗಿ ಮೊದಲ ಬಾರಿ ಮುಖ್ಯಮಂತ್ರಿ ಆದಾಗಲೇ ಸಫಾಯಿ ಕರ್ಮಚಾರಿಗಳ ಸಂಬಳವನ್ನು 7 ಸಾವಿರದಿಂದ 17 ಕ್ಕೆ ಏರಿಸಿದ್ದೆ.
  • ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಮ್ಯಾನ್ಯುಯಲ್ ಸ್ಕ್ಯಾವೆಂಜರ್ ಗಳಿಗೆ ಅವಕಾಶವೇ ಇಲ್ಲ ಎಂದು ಹೇಳಿದರು
 ಅಂಬೇಡ್ಕರ್ ಸಂವಿಧಾನ ನೀಡದೇ ಹೋಗಿದ್ದರೆ ನಾನು ಮುಖ್ಯಮಂತ್ರಿ ಆಗುತ್ತಲೇ ಇರಲಿಲ್ಲ-ಸಿಎಂ ಸಿದ್ದರಾಮಯ್ಯ  title=

Siddaramaiah Credits Dr. B.R. Ambedkar for Chief Minister Role:  ಅಂಬೇಡ್ಕರ್ ಸಂವಿಧಾನ ನೀಡದೇ ಹೋಗಿದ್ದರೆ ನಾನು ಮುಖ್ಯಮಂತ್ರಿ ಆಗುತ್ತಲೇ ಇರಲಿಲ್ಲ. ಆದ್ದರಿಂದ ಸಂವಿಧಾನ ವಿರೋಧಿಗಳು ನಮ್ಮ ವಿರೋಧಿಗಳು ಎನ್ನುವುದನ್ನು ನಾವು-ನೀವು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು. ಸಂವಿಧಾನದ ವಿರೋಧಿಗಳನ್ನು ಸಾರಾ ಸಗಟಾಗಿ ತಿರಸ್ಕರಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಮನವಿ ಮಾಡಿದರು.

ರಾಜ್ಯದಲ್ಲಿ ಗುರುತಿಸಿರುವ ಮ್ಯಾನ್ಯುಯಲ್ ಸ್ಕ್ಯಾವೆಂಜರ್ ಗಳಿಗೆ ಸಹಾಯಧನ ವಿತರಣೆ ಮತ್ತು ಪುನರ್ವಸತಿ ಸಮಾವೇಶವನ್ನು ಮುಖ್ಯಮಂತ್ರಿ Siddaramaiah ಅವರು ಉದ್ಘಾಟಿಸಿ, 4000ಕ್ಕೂ ಹೆಚ್ಚು ಸಫಾಯಿ ಕರ್ಮಚಾರಿಗಳಿಗೆ ತಲಾ 40 ಸಾವಿರ ರೂ ಸಹಾಯಧನ ವಿತರಿಸಿ ಮಾತನಾಡಿದರು.

ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್ ಇರಕೂಡದು. ಯಾರಾದರೂ ಮ್ಯಾನ್ಯುಯಲ್ ಕೆಲಸ ಮಾಡಿಸಿದರೆ ಮುಲಾಜಿಲ್ಲದೆ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು.

ಪೌರ ಕಾರ್ಮಿಕರು ಘನತೆಯಿಂದ ಬದುಕು ಕಟ್ಟಿಕೊಳ್ಳಬೇಕು ಎನ್ನುವುದು ನಮ್ಮ ಪಕ್ಷದ ಮತ್ತು ನಮ್ಮ ಬದ್ಧತೆ. ಹೀಗಾಗಿ ಮೊದಲ ಬಾರಿ ಮುಖ್ಯಮಂತ್ರಿ ಆದಾಗಲೇ ಸಫಾಯಿ ಕರ್ಮಚಾರಿಗಳ ಸಂಬಳವನ್ನು 7 ಸಾವಿರದಿಂದ 17 ಕ್ಕೆ ಏರಿಸಿದ್ದೆ. ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಮ್ಯಾನ್ಯುಯಲ್ ಸ್ಕ್ಯಾವೆಂಜರ್ ಗಳಿಗೆ ಅವಕಾಶವೇ ಇಲ್ಲ ಎಂದು ಹೇಳಿದರು

ಸಫಾಯಿ ಕರ್ಮಚಾರಿಗಳು ಮನೆ ಕಟ್ಟಿಕೊಳ್ಳಲು 7.5 ಲಕ್ಷ ನೆರವು ನೀಡುವ ಕಾರ್ಯಕ್ರಮವನ್ನೂ ಜಾರಿಗೆ ತಂದಿದ್ದು ನಮ್ಮ ಸರ್ಕಾರವೇ. ನಾನು ಮುಖ್ಯಮಂತ್ರಿಯಾಗಿ‌ ಈ ಕಾರ್ಯಕ್ರಮಗಳನ್ನು ಜಾರಿ‌ ಮಾಡಿದೆ ಎಂದರು.

ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಸಚಿವರಾದ ಎಚ್.ಸಿ.ಮಹದೇವಪ್ಪ, ಮಳವಳ್ಳಿ ಶಾಸಕ ನರೇಂದ್ರಸ್ವಾಮಿ, ಮಾಯಕೊಂಡ ಶಾಸಕರಾದ ಬಸಂತಪ್ಪ, ನೆಲಮಂಗಲ ಶಾಸಕರಾದ ಶ್ರೀನಿವಾಸ್ ಸೇರಿ ಹಲವು ಪ್ರಮುಖರು ಮತ್ತು ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News