ಸಂವಿಧಾನದ ಧ್ಯೇಯೋದ್ದೇಶಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಮಾಡಬೇಕಿದೆ: ಸಿಎಂ ಸಿದ್ದರಾಮಯ್ಯ

ಇಂದು ಡಾ: ಬಿ.ಆರ್.ಅಂಬೇಡ್ಕರ್ ಅವರ 67 ನೇ ಮಹಾಪರಿನಿರ್ವಾಣದ ಅಂಗವಾಗಿ  ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ  ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರತಿಯೊಬ್ಬರೂ ಸಂವಿಧಾನವನ್ನು ಅರ್ಥ ಮಾಡಿಕೊಂಡರೆ, ಅದೇ ನಾವು ಅಂಬೇಡ್ಕರ್ ಅವರಿಗೆ ಸಲ್ಲಿಸುವ ಗೌರವ ಎಂದರು. 

Written by - Yashaswini V | Last Updated : Dec 6, 2023, 12:46 PM IST
  • ಅಂಬೇಡ್ಕರ್ ಅವರು ಇನ್ನೂ ಬದುಕಿರಬೇಕಿತ್ತು.
  • ಅವರು ಇದ್ದಿದ್ದರೆ ಸಮಾನತೆಯ ಪರವಾಗಿ ಇನ್ನಷ್ಟು ಹೋರಾಟಗಳಾಗುತ್ತಿತ್ತು- ಸಿಎಂ ಸಿದ್ದರಾಮಯ್ಯ
ಸಂವಿಧಾನದ  ಧ್ಯೇಯೋದ್ದೇಶಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಮಾಡಬೇಕಿದೆ: ಸಿಎಂ ಸಿದ್ದರಾಮಯ್ಯ title=

ಬೆಂಗಳೂರು: ಎಲ್ಲರೂ ಸಂವಿಧಾನದ  ಧ್ಯೇಯೋದ್ದೇಶಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಮಾಡಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. 

ಇಂದು ಡಾ: ಬಿ.ಆರ್.ಅಂಬೇಡ್ಕರ್ ಅವರ 67 ನೇ ಮಹಾಪರಿನಿರ್ವಾಣದ ಅಂಗವಾಗಿ  ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ  ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರತಿಯೊಬ್ಬರೂ ಸಂವಿಧಾನವನ್ನು ಅರ್ಥ ಮಾಡಿಕೊಂಡರೆ, ಅದೇ ನಾವು ಅಂಬೇಡ್ಕರ್ ಅವರಿಗೆ ಸಲ್ಲಿಸುವ ಗೌರವ ಎಂದರು. 

ಇದನ್ನೂ ಓದಿ- 150 ದಿನಗಳ ಉದ್ಯೋಗ ನೀಡಲು ಕೇಂದ್ರವಿನ್ನೂ ಒಪ್ಪಿಗೆ ಸೂಚಿಸಿಲ್ಲ: ಸಿಎಂ ಸಿದ್ದರಾಮಯ್ಯ

ಅಂಬೇಡ್ಕರ್ ಅವರು ಇನ್ನೂ ಬದುಕಿರಬೇಕಿತ್ತು. ಅವರು ಇದ್ದಿದ್ದರೆ ಸಮಾನತೆಯ ಪರವಾಗಿ ಇನ್ನಷ್ಟು ಹೋರಾಟಗಳಾಗುತ್ತಿತ್ತು. ಸಮಾಜ ನಿರ್ಮಾಣ ಮಾಡಲು ಸಾಧ್ಯ ವಾಗುತ್ತಿತ್ತು. ಸಂವಿಧಾನದ ಕರ್ತೃ ಅಂಬೇಡ್ಕರ್ ಅವರು ದೇಶದ ಸಂವಿಧಾನವನ್ನು ಬಹಳ ಶ್ರಮ ವಹಿಸಿ ವಿವಿಧ ದೇಶಗಳ ಸಂವಿಧಾನವನ್ನು ಅಧ್ಯಯನ ಮಾಡಿ ಭಾರತದ  ವ್ಯವಸ್ಥೆಗೆ ಎಂಥ ಸಂವಿಧಾನ ಬೇಕು ಎಂದು ಚಿಂತಿಸಿ ಸಂವಿಧಾನ ನೀಡಿದ್ದಾರೆ.  ಸಾಮಾಜಿಕ ನ್ಯಾಯದ ಹಕ್ಕು, ಅಸಮಾನತೆಯನ್ನು ತೊಡೆದುಹಾಕುವ ಅಂಶ ಜಗತ್ತಿನ ಯಾವ ಸಂವಿಧಾನದಲ್ಲಿಯೂ ನೋಡಲು ಸಾಧ್ಯವಿಲ್ಲ.  ಎಲ್ಲಾ ಜಾತಿ, ವರ್ಗ ಮತ್ತು ಬಡವರಿಗೆ ನ್ಯಾಯ ದೊರೆತಿದ್ದರೆ, ಕಾನೂನಿನ ದೃಷ್ಟಿಯಲ್ಲಿ ಎಲ್ಲರೂ ಸಮಾನರಾಗಿದ್ದರೆ ಅದಕ್ಕೆ ಅಂಬೇಡ್ಕರ್ ಅವರು ಸಂವಿಧಾನದ ಲ್ಲಿ ಸೇರಿಸಿದ  ಅಂಶಗಳೇ ಕಾರಣ. ಕಟ್ಟ ಕಡೆಯ ಮನುಷ್ಯನಿಗೂ ಶ್ರೀಮಂತರಿಗೂ ಒಂದೇ ಕಾನೂನು. ಅದಕ್ಕೆ 14 ನೇ ಪರಿಚ್ಛೇದದಲ್ಲಿ ಕಾನೂನಿನ ಮುಂದೆ ಎಲ್ಲರೂ ಸಮಾನರು, ಎಲ್ಲರಿಗೂ ಕಾನೂನಿನ ರಕ್ಷಣೆಯಿದೆ ಎಂಬುದನ್ನು ಸ್ಪಷ್ಟವಾಗಿ ಹೇಳಿದ್ದಾರೆ ಎಂದು ಸ್ಮರಿಸಿದರು. 

ಒಂದು ದೇಶದ ಆಸ್ತಿ ಸಮಾನವಾಗಿ ಹಂಚಿಕೆಯಾಗಬೇಕು. ಬಲಾಢ್ಯರ ಕೈಯಲ್ಲಿ ಅಧಿಕಾರವಿದ್ದರೆ ಪ್ರಜಾಪ್ರಭುತ್ವ ಉಳಿಯುವುದು ಕಷ್ಟ ಎಂದು ಅಧಿಕಾರ ಮತ್ತು ಆಸ್ತಿ ಹಂಚಿಕೆಯಾಗಬೇಕು ಎಂದು ಹೇಳಿದ್ದರು. ದೇಶಕ್ಕೆ ದೊರೆತ ಸ್ವಾತಂತ್ರ್ಯ ಯಶಸ್ವಿಯಾಗಲು ರಾಜಕೀಯ ಪ್ರಜಾಪ್ರಭುತ್ವ ಸಾಮಾಜಿಕ ಪ್ರಜಾಪ್ರಭುತ್ವದ ತಳಹದಿಯ ಮೇಲಿರಬೇಕು. ಇಲ್ಲವಾದರೆ ಅಸಮಾನತೆ ಯಿಂದ ನೊಂದ ಜನ ರಾಜಕೀಯ ಪ್ರಜಾಪ್ರಭುತ್ವದ ಸೌಧವನ್ನು ಧ್ವಂಸ ಮಾಡುತ್ತಾರೆ ಎಂದೂ ಹೇಳಿದ್ದರು. ಅದನ್ನು ನಾವು ಅರ್ಥ ಮಾಡಿಕೊಳ್ಳಬೇಕು.  ಅಂಬೇಡ್ಕರ್ ಅವರನ್ನು ಎಷ್ಟು ನೆನೆದರೂ, ಎಷ್ಟು ಗೌರವ ಸಲ್ಲಿಸಿದರೂ ಕಡಿಮೆಯೇ  ಎಂದರು. 

ಇದನ್ನೂ ಓದಿ- ನಾನೇನೂ ತಪ್ಪು ಮಾಡಿಲ್ಲ, ಜನರಿದ್ದಾರೆ, ದೇವರಿದ್ದಾನೆ..! 

ಲಿಡ್ಕರ್ ಉತ್ಪನ್ನಗಳಿಗೆ ಖ್ಯಾತ ನಟ ಡಾಲಿ ಧನಂಜಯ್  ಪ್ರದರ್ಶನ ರಾಯಭಾರಿ: 
ಲಿಡ್ಕರ್ ಉತ್ಪನ್ನಗಳಿಗೆ ಖ್ಯಾತ ನಟ ಡಾಲಿ ಧನಂಜಯ್ ಅವರನ್ನು ಪ್ರದರ್ಶನ ರಾಯಭಾರಿಯಾಗಿ ನೇಮಕ ಮಾಡಿದ್ದು, ಉಚಿತವಾಗಿ ಈ ಕೆಲಸ ಮಾಡುತ್ತಿದ್ದಾರೆ. ಅವರೊಬ್ಬ ಉದಯೋನ್ಮುಖ ನಟ ಹಾಗೂ ಸಾಮಾಜಿಕ ಕಳಕಳಿ ಉಳ್ಳವರು. ಅವರನ್ನು ರಾಯಭಾರಿಯಾಗಿ ಮಾಡಿರುವುದು ಅರ್ಥಪೂರ್ಣವಾಗಿದೆ. ಇದರಿಂದ ಲಿಡ್ಕರ್ ಉತ್ಪನ್ನಗಳು ಹೆಚ್ಚಾಗಿ  ಮಾರಾಟವಾಗುವುದಲ್ಲದೆ ಚರ್ಮ ಉದ್ಯಮಕ್ಕೆ ಉತ್ತೇಜನ  ದೊರೆಯಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://youtu.be/--phA9ji8NM

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News