"ಅಂಬೇಡ್ಕರ್ ಚಿಂತನೆಯ ಸಂವಿಧಾನ ಜಾರಿಗೆ ಬರದೆ ಇದ್ದಿದ್ದರೆ ನಾನು ಸಿಎಂ ಆಗುತ್ತಿರಲಿಲ್ಲ, ಊರಲ್ಲಿ ಕುರಿ ಮೇಯಿಸುತ್ತಿದ್ದೆ"

ಬಾಬಾ ಸಾಹೇಬ್ ಅಂಬೇಡ್ಕರ್ ಚಿಂತನೆಯ ಸಂವಿಧಾನ ಜಾರಿಗೆ ಬರದೆ ಇದ್ದಿದ್ದರೆ ನಾನು ಮುಖ್ಯಮಂತ್ರಿಯಾಗುತ್ತಿರಲಿಲ್ಲ, ಊರಲ್ಲಿ ಕುರಿ ಮೇಯಿಸುತ್ತಿದ್ದೆ ಎಂದು ಪ್ರತಿಪಕ್ಷದ ನಾಯಕ ಹಾಗೂ ಮಾಜಿ ಸಿಎಂ ಇಂದು ಡಾ.ಬಿ.ಆರ್ ಅಂಬೇಡ್ಕರ್ ಅವರ ಜಯಂತಿ ಹಿನ್ನೆಲೆಯಲ್ಲಿ ಸ್ಮರಿಸಿದ್ದಾರೆ.

Written by - Zee Kannada News Desk | Last Updated : Apr 14, 2023, 10:00 AM IST
  • ಬಾಬಾ ಸಾಹೇಬ್ ಅಂಬೇಡ್ಕರ್ ಚಿಂತನೆಯ ಸಂವಿಧಾನ ಜಾರಿಗೆ ಬರದೆ ಇದ್ದಿದ್ದರೆ ನಾನು ಮುಖ್ಯಮಂತ್ರಿಯಾಗುತ್ತಿರಲಿಲ್ಲ, ಊರಲ್ಲಿ ಕುರಿ ಮೇಯಿಸುತ್ತಿದ್ದೆ
  • ನನ್ನ ರಾಜಕೀಯ ಬದುಕು ಬಾಬಾ ಸಾಹೇಬರ ಋಣ
  • ಈ ಋಣ ಸಂದಾಯಕ್ಕೆ ನನ್ನ ರಾಜಕೀಯ ಮುಡಿಪು.ಮಹಾಗುರುವಿಗೆ ನಮನಗಳು
"ಅಂಬೇಡ್ಕರ್ ಚಿಂತನೆಯ ಸಂವಿಧಾನ ಜಾರಿಗೆ ಬರದೆ ಇದ್ದಿದ್ದರೆ ನಾನು ಸಿಎಂ ಆಗುತ್ತಿರಲಿಲ್ಲ, ಊರಲ್ಲಿ ಕುರಿ ಮೇಯಿಸುತ್ತಿದ್ದೆ" title=
file photo

ಬೆಂಗಳೂರು: ಬಾಬಾ ಸಾಹೇಬ್ ಅಂಬೇಡ್ಕರ್ ಚಿಂತನೆಯ ಸಂವಿಧಾನ ಜಾರಿಗೆ ಬರದೆ ಇದ್ದಿದ್ದರೆ ನಾನು ಮುಖ್ಯಮಂತ್ರಿಯಾಗುತ್ತಿರಲಿಲ್ಲ, ಊರಲ್ಲಿ ಕುರಿ ಮೇಯಿಸುತ್ತಿದ್ದೆ ಎಂದು ಪ್ರತಿಪಕ್ಷದ ನಾಯಕ ಹಾಗೂ ಮಾಜಿ ಸಿಎಂ ಇಂದು ಡಾ.ಬಿ.ಆರ್ ಅಂಬೇಡ್ಕರ್ ಅವರ ಜಯಂತಿ ಹಿನ್ನೆಲೆಯಲ್ಲಿ ಸ್ಮರಿಸಿದ್ದಾರೆ.

ಬಾಬಾಸಾಹೇಬ್ ಅಂಬೇಡ್ಕರ್ ಅವರ ಚಿಂತನೆಯ ಪ್ರತಿರೂಪವಾಗಿರುವ ಸಂವಿಧಾನಕ್ಕೆ ಎದುರಾಗಿರುವ ಬೆದರಿಕೆಯ ವಿರುದ್ಧ ಹೋರಾಡುವುದೇ ಸಂವಿಧಾನ ಶಿಲ್ಪಿಗೆ ನಾವು ಸಲ್ಲಿಸುವ ಅತ್ಯುನ್ನತ ಗೌರವ. ಈ ಹೋರಾಟಕ್ಕೆ ಬಾಬಾಸಾಹೇಬರ ಚಿಂತನೆಗಳು ನಮ್ಮ ಆಯುಧವಾಗಲಿ.ಅರಿವಿನ ಗುರುವಿಗೆ ಗೌರವದ ನಮನಗಳು..ಸಾಮಾಜಿಕ ಮತ್ತು ಆರ್ಥಿಕ ಪ್ರಜಾಪ್ರಭುತ್ವ ಸ್ಥಾಪನೆಯಾಗದೆ ರಾಜಕೀಯ ಪ್ರಜಾಪ್ರಭುತ್ವ ಬಾಳಲಾರದು ಎಂಬ ಬಿ.ಆರ್.ಅಂಬೇಡ್ಕರ್ ಎಚ್ಚರಿಕೆಯ ಸಂದೇಶವನ್ನು ನಾನು ಮಂಡಿಸಿರುವ ಹದಿಮೂರು ಬಜೆಟ್ ಗಳಲ್ಲಿ ಪಾಲಿಸಿದ್ದೇನೆ.ಇದು ನಾನು ಬಾಬಾ ಸಾಹೇಬರಿಗೆ ಸಲ್ಲಿಸಿದ ಗೌರವವೂ ಹೌದು.

ನಿರ್ಲಕ್ಷ್ಯ, ತುಚ್ಛೀಕರಣ, ದೈವೀಕರಣದ ಮೂಲಕ ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ದಮನಿಸಲು ಪ್ರಯತ್ನಿಸಿ ವಿಫಲರಾದ ಕೋಮುವಾದಿ ಶಕ್ತಿಗಳು ಈಗ ಬಾಬಾಸಾಹೇಬರನ್ನು ಆಪೋಶನ ತೆಗೆದುಕೊಂಡು ತಮ್ಮವರನ್ನಾಗಿ ಮಾಡಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಈ ಹುನ್ನಾರದ ಬಗ್ಗೆ ನಾವು ಎಚ್ಚರವಾಗಿರಬೇಕು.ಮತ್ತೆ ಮತ್ತೆ ಹೇಳುತ್ತೇನೆ, ಬಾಬಾ ಸಾಹೇಬ್ ಅಂಬೇಡ್ಕರ್ ಚಿಂತನೆಯ ಸಂವಿಧಾನ ಜಾರಿಗೆ ಬರದೆ ಇದ್ದಿದ್ದರೆ ನಾನು ಮುಖ್ಯಮಂತ್ರಿಯಾಗುತ್ತಿರಲಿಲ್ಲ, ಊರಲ್ಲಿ ಕುರಿ ಮೇಯಿಸುತ್ತಿದ್ದೆ. ನನ್ನ ರಾಜಕೀಯ ಬದುಕು ಬಾಬಾ ಸಾಹೇಬರ ಋಣ.ಈ ಋಣ ಸಂದಾಯಕ್ಕೆ ನನ್ನ ರಾಜಕೀಯ ಮುಡಿಪು.ಮಹಾಗುರುವಿಗೆ ನಮನಗಳು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

 

 

Trending News