"ರಾಜ್ಯದಲ್ಲಿ ಯಾವುದೇ ಭ್ರಷ್ಟಾಚಾರದ ಪ್ರಕರಣಗಳಿದ್ದರೆ ಅದನ್ನು ಸುಮ್ಮನೆ ನೋಡುತ್ತಾ ಕುಳಿತುಕೊಳ್ಳುವುದಿಲ್ಲ"

ರಾಜ್ಯದಲ್ಲಿ ಯಾವುದೇ ಭ್ರಷ್ಟಾಚಾರದ ಪ್ರಕರಣಗಳಿದ್ದರೆ ಅದನ್ನು ಸುಮ್ಮನೆ ನೋಡುತ್ತಾ ಕುಳಿತುಕೊಳ್ಳುವುದಿಲ್ಲ. ತನಿಖೆ ಮಾಡಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Written by - Manjunath N | Last Updated : Dec 17, 2023, 05:43 PM IST
  • ನವೆಂಬರ್ ಅಂತ್ಯದವರೆಗೆ ಹಿಂದಿನ ಸರ್ಕಾರ 70,814 ಕೋಟಿ ರೂ.ಗಳನ್ನು ಅಭಿವೃದ್ಧಿಗೆ ಖರ್ಚು ಮಾಡಿತ್ತು
  • ನಮ್ಮ ಸರ್ಕಾರ 73,928 ಕೋಟಿ ರೂ.ಗಳನ್ನು ವೆಚ್ಚ ಮಾಡಿದೆ. ಹಣವನ್ನು ಖರ್ಚು ಮಾಡಿಲ್ಲ ಎನ್ನುವುದು ಸುಳ್ಳು
  • 3,000 ಕೋಟಿ ರೂ.ಗಳಷ್ಟು ಮೊತ್ತವನ್ನು ಹೆಚ್ಚು ವೆಚ್ಚ ಮಾಡಿದ್ದೇವೆ
"ರಾಜ್ಯದಲ್ಲಿ ಯಾವುದೇ ಭ್ರಷ್ಟಾಚಾರದ ಪ್ರಕರಣಗಳಿದ್ದರೆ ಅದನ್ನು ಸುಮ್ಮನೆ ನೋಡುತ್ತಾ ಕುಳಿತುಕೊಳ್ಳುವುದಿಲ್ಲ" title=

ಗದಗ: ರಾಜ್ಯದಲ್ಲಿ ಯಾವುದೇ ಭ್ರಷ್ಟಾಚಾರದ ಪ್ರಕರಣಗಳಿದ್ದರೆ ಅದನ್ನು ಸುಮ್ಮನೆ ನೋಡುತ್ತಾ ಕುಳಿತುಕೊಳ್ಳುವುದಿಲ್ಲ. ತನಿಖೆ ಮಾಡಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಅವರು ಗದಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದರು.

ಇದನ್ನೂ ಓದಿ: ಅಪ್ರಾಪ್ತ ಬಾಲಕನಿಗೆ ಬೈಕ್ ಕೊಟ್ಟ ತಂದೆಗೆ ಭಾರೀ ದಂಡ!

ಕ.ರಾ.ರ.ಸಾ ನಿಗಮದಲ್ಲಿ ಸಾಕಷ್ಟು ಬಸ್ ಕೆಟ್ಟು ನಿಂತಿದ್ದು ಚಾಲಕರಿಗೆ ಡ್ಯೂಟಿ ಸಿಗುತ್ತಿಲ್ಲ. ಡ್ಯೂಟಿ ಹಾಕಲು ಅಧಿಕಾರಿಗಳು ಹಣ ಕೇಳುತ್ತಾರೆ ಎಂದು ಕೆಲ ಚಾಲಕರಿಂದ ದೂರು ಕೇಳಿಬರುತ್ತಿದ್ದು, ಡ್ಯೂಟಿ ಹಾಕಲು ಲಂಚ ಕೇಳಿದ ಪ್ರಕರಣವನ್ನೂ ತನಿಖೆ ಮಾಡಿಸಲಾಗುವುದು. ಈಗಾಗಲೇ ನಾವು ಹಿಂದಿನ ಸರ್ಕಾರದ 40% ಭ್ರಷ್ಟಾಚಾರ ಪ್ರಕರಣವನ್ನು ತನಿಖೆ ಮಾಡಿಸುತ್ತಿದ್ದೇವೆ. ಆರೋಪಗಳು ಸಾಬೀತಾದ ಮೇಲೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಕಾಂತರಾಜು ವರದಿ ಇನ್ನೂ ಸಲ್ಲಿಸಿಲ್ಲವಾದ್ದರಿಂದ ಸ್ವೀಕಾರ ಮಾಡುವುದು ಹೇಗೆ? ವರದಿ ಕೊಟ್ಟ ಮೇಲೆ ಸ್ವೀಕಾರ ಮಾಡುವ ಪ್ರಶ್ನೆ ಉದ್ಭವವಾಗುತ್ತದೆ. ಶಾಶ್ವತ ಹಿಂದುಳಿದ ವರ್ಗಗಳ ಆಯೋಗವು ವರದಿ ಕೊಟ್ಟಿಲ್ಲ. ಕೊಡಲು ಬಂದಾಗ ವಿಚಾರ ಮಾಡುತ್ತೇವೆ. ವರದಿ ವೈಜ್ಞಾನಿಕವಲ್ಲ ಎಂದು ಕೆಲವರು ವಿಚಾರ ಮಾಡುತ್ತಿದ್ದು, ವರದಿ ಬರದೆ, ಏನಿದೆ ಎಂದು ತಿಳಿಯದೇ ಊಹಾಪೋಹದ ಮೇಲೆ ನಿರ್ಧಾರ ಮಾಡುತ್ತಿದ್ದಾರೆ. ಮೊದಲು ವರದಿ ಬರಲಿ ನೋಡೋಣ ಎಂದರು.

ಇದನ್ನೂ ಓದಿ: ಐಶ್ವರ್ಯಾ ರೈ ಅಭಿಷೇಕ್​ ಬಚ್ಚನ್ ಗಿಂತ ಎಷ್ಟು ವರ್ಷ ದೊಡ್ಡವರು ಗೊತ್ತೇ!

ಶಕ್ತಿ ಯೋಜನೆಗೆ ಯೋಜನೆಗೆ ಎಷ್ಟು ಹಣ ಖರ್ಚಾಗುತ್ತದೆಯೋ ಅಷ್ಟು ಹಣ ಒದಗಿಸಲಾಗುವುದು. ಈ ಯೋಜನೆಗೆ ಪ್ರತಿ ವರ್ಷ ವೆಚ್ಚವಾಗುವ ಹಣವನ್ನು ಕೆ.ಎಸ್.ಆರ್.ಟಿ. ಸಿ ಗೆ ಸರ್ಕಾರದಿಂದ ತುಂಬಿ ಕೊಡಲಾಗುವುದು. ಬಸ್ಸುಗಳ ದುರಸ್ತಿ ಹಾಗೂ ಹೊಸ ಬಸ್ಸುಗಳ ಖರೀದಿಯೂ ಆಗಲಿದೆ. ರಿಪೇರಿಗೆ ಅನುದಾನವನ್ನು ಒದಗಿಸಲಾಗಿದೆ. ಅನುದಾನವಿಲ್ಲ ಎಂದಿರುವ ಅಧಿಕಾರಿಗಳ ಹೆಸರು ನೀಡಿದರೆ ಪರಿಶೀಲನೆ ನಡೆಸಲಾಗುವುದು. ನಮ್ಮ ಸರ್ಕಾರದಲ್ಲಿ ಘೋಷಿಸಿರುವ ಯೋಜನೆಗಳಿಗೆ ಅನುದಾನದ ಕೊರತೆ ಇಲ್ಲ.ಅಭಿವೃದ್ಧಿ ಕೆಲಸಗಳು ನಿಂತಿಲ್ಲ ಎಂದು ಸ್ಪಷ್ಟಪಡಿಸಿದ್ದರು.

ನವೆಂಬರ್ ಅಂತ್ಯದವರೆಗೆ ಹಿಂದಿನ ಸರ್ಕಾರ  70,814 ಕೋಟಿ ರೂ.ಗಳನ್ನು ಅಭಿವೃದ್ಧಿಗೆ ಖರ್ಚು ಮಾಡಿತ್ತು. ನಮ್ಮ ಸರ್ಕಾರ 73,928 ಕೋಟಿ ರೂ.ಗಳನ್ನು ವೆಚ್ಚ ಮಾಡಿದೆ. ಹಣವನ್ನು ಖರ್ಚು ಮಾಡಿಲ್ಲ ಎನ್ನುವುದು ಸುಳ್ಳು. 3,000 ಕೋಟಿ ರೂ.ಗಳಷ್ಟು ಮೊತ್ತವನ್ನು ಹೆಚ್ಚು ವೆಚ್ಚ ಮಾಡಿದ್ದೇವೆ. ನಾವು ಸರ್ಕಾರ ರೂಪಿಸಿದ್ದು ಮೇ 20 ಕ್ಕೆ, ಬಜೆಟ್ ಮಂಡಿಸಿದ್ದು ಜುಲೈನಲ್ಲಿ, ಅದು ಜಾರಿಯಾಗಿದ್ದು ಆಗಸ್ಟ್ 1 ರಿಂದ. 4 ಗ್ಯಾರಂಟಿ ಗಳನ್ನು ಜಾರಿ ಮಾಡಿದ್ದು, 5 ನೇ ಗ್ಯಾರಂಟಿ ಜನವರಿಯಲ್ಲಿ ಪ್ರಾರಂಭವಾಗಲಿದೆ. ಕೊಟ್ಟ ಮಾತಿನಂತೆ ನಡೆದಿದ್ದೇವೆ ಎಂದು ಹೇಳಿದರು.

ಇದನ್ನೂ ಓದಿ: ನಾಡಪ್ರಭು ಕೆಂಪೇಗೌಡರಿಗೆ ಅವಮಾನ: ನಟ ಚೇತನ್‌ ಅಹಿಂಸಾ ವಿರುದ್ದ FIR ದಾಖಲು!

ಇಡೀ ದೇಶದಲ್ಲಿ ಕೊರೊನಾ ಹೊಸ ತಳಿ ಶುರುವಾಗಿದ್ದು, ಈ ಬಗ್ಗೆ ಆರೋಗ್ಯ ಸಚಿವರಿಗೆ ಕೂಡಲೇ ಸಭೆ ನಡೆಸಿ ಮುನ್ನೆಚ್ಚರಿಕಾ ಕ್ರಮ ವಹಿಸಲು ಸೂಚಿಸಲಾಗಿದೆ.ಬೆಳಗಾವಿಯಲ್ಲಿ ಮಹಿಳೆ ಮೇಲಾದ ದೌರ್ಜನ್ಯ ಪ್ರಕರಣವನ್ನು ಯಾವ ತನಿಖೆಗೆ ಬೇಕಾದರೂ ವಹಿಸಲು ಸಿದ್ಧ. ತನಿಖೆಯಾಗಿ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು. ನಮ್ಮ ಪೊಲೀಸರು ತನಿಖೆ ಮಾಡಲು ಸಮರ್ಥರಿದ್ದಾರೆ. ಹಾಗಾಗಿ ಬೇರೆ ಪ್ರಶ್ನೆ ಉದ್ಭವಿಸದು.ಕ್ಯಾಶ್ ಕಾರ್ಡ್  ಬ್ಯಾಂಕ್ ಸೊಸೈಟಿಗಳಲ್ಲಿ ರೈತರಿಗೆ ನೀಡಿರುವ ಸಾಲದ ಅಸಲು ಕಟ್ಟಿದರೆ ಬಡ್ಡಿ ಮನ್ನಾ ಮಾಡಲಾಗುವುದು.ಉನ್ನತ ಶಿಕ್ಷಣ ಮತ್ತು ಪ್ರಾಥಮಿಕ ಶಿಕ್ಷಣ ಇಲಾಖೆಗಳು ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಒಂದು ಸೂತ್ರ ರೂಪಿಸುತ್ತಿವೆ. ಈ ಸಂಬಂಧ ಸಭೆ ನಡೆಸಿದ ನಂತರ ಪರಿಹಾರ ಸೂತ್ರವನ್ನು ಸರ್ಕಾರಕ್ಕೆ ನೀಡುತ್ತಾರೆ. ತದನಂತರ ಸರ್ಕಾರ ಪರಿಶೀಲನೆ ನಡೆಸಲಿದೆ. ಈ ಕೆಲಸವನ್ನು ತ್ವರಿತವಾಗಿ ನಡೆಸಲು ಸೂಚಿಸಲಾಗಿದೆ ಎಂದು ಹೇಳಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News