"ಮೋದಿ ಅವರ ಮುಖ ನೋಡಿ ಮತ ಹಾಕಿದರೆ ನಿಮ್ಮ‌ ಮತಕ್ಕೆ ಗೌರವ ಬರುತ್ತದಾ?"

 ಕೇಂದ್ರ ಸರ್ಕಾರ ಬೆಂಗಳೂರಿಗೆ ಕುಡಿಯುವ ನೀರು ಒದಗಿಸುವ ಮೇಕೆದಾಟು ಯೋಜನೆಗೆ ಅನುಮತಿ ಕೊಡಲಿಲ್ಲ. ಮೋದಿಯವರೂ ಬೆಂಗಳೂರಿನ‌ ಜನತೆಗೆ ಕುಡಿಯುವ ನೀರು ಕೊಡುವ ಯೋಜನೆಗೆ ಬೆಂಬಲ ಘೋಷಿಸುತ್ತಿಲ್ಲ. ಕಪ್ಪುಹಣ ತಂದು ಎಲ್ಲರ ಖಾತೆಗೆ ₹15 ಲಕ್ಷ ಹಾಕ್ತೀವಿ ಅಂದ ಮೋದಿಯವರು 15 ರೂಪಾಯಿಯನ್ನೂ ಹಾಕಿಲ್ಲ. ಮೋದಿಯವರು ಹೇಳಿದ ಯಾವುದನ್ನೂ ಜಾರಿ ಮಾಡಿಲ್ಲ. ಹೀಗಾಗಿ ಅವರ ಮುಖ ನೋಡಿ ಮತ ಹಾಕಿದರೆ ನಿಮ್ಮ‌ ಮತಕ್ಕೆ ಗೌರವ ಬರುತ್ತದಾ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

Written by - Manjunath N | Last Updated : Apr 7, 2024, 07:39 PM IST
  • ಶೋಭಾ ಕರಂದ್ಲಾಜೆ ಅವರನ್ನು ಉಡುಪಿ-ಚಿಕ್ಕಮಗಳೂರಿನ ಬಿಜೆಪಿ ಕಾರ್ಯಕರ್ತರೇ ಗೋ-ಬ್ಯಾಕ್ ಎಂದು ಓಡಿಸಿದ್ದಾರೆ
  • ಗೆಲ್ಲಿಸಿದ ಕ್ಷೇತ್ರದ ಕಾರ್ಯಕರ್ತರೇ ಅವರನ್ನು ಗೋ ಬ್ಯಾಕ್ ಎಂದು ಕಳುಹಿಸಿದ್ದಾರೆ
  • ಆದ್ದರಿಂದ ಅವರಿಗೆ ಇಲ್ಲಿ ಮತಹಾಕಲು ಕಾರಣಗಳೇ ಇಲ್ಲ
"ಮೋದಿ ಅವರ ಮುಖ ನೋಡಿ ಮತ ಹಾಕಿದರೆ ನಿಮ್ಮ‌ ಮತಕ್ಕೆ ಗೌರವ ಬರುತ್ತದಾ?" title=

ಬೆಂಗಳೂರು: ಕೇಂದ್ರ ಸರ್ಕಾರ ಬೆಂಗಳೂರಿಗೆ ಕುಡಿಯುವ ನೀರು ಒದಗಿಸುವ ಮೇಕೆದಾಟು ಯೋಜನೆಗೆ ಅನುಮತಿ ಕೊಡಲಿಲ್ಲ. ಮೋದಿಯವರೂ ಬೆಂಗಳೂರಿನ‌ ಜನತೆಗೆ ಕುಡಿಯುವ ನೀರು ಕೊಡುವ ಯೋಜನೆಗೆ ಬೆಂಬಲ ಘೋಷಿಸುತ್ತಿಲ್ಲ. ಕಪ್ಪುಹಣ ತಂದು ಎಲ್ಲರ ಖಾತೆಗೆ ₹15 ಲಕ್ಷ ಹಾಕ್ತೀವಿ ಅಂದ ಮೋದಿಯವರು 15 ರೂಪಾಯಿಯನ್ನೂ ಹಾಕಿಲ್ಲ. ಮೋದಿಯವರು ಹೇಳಿದ ಯಾವುದನ್ನೂ ಜಾರಿ ಮಾಡಿಲ್ಲ. ಹೀಗಾಗಿ ಅವರ ಮುಖ ನೋಡಿ ಮತ ಹಾಕಿದರೆ ನಿಮ್ಮ‌ ಮತಕ್ಕೆ ಗೌರವ ಬರುತ್ತದಾ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಅವರು ಬೆಂಗಳೂರಿನ ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜೀವ್ ಗೌಡರ ಪರವಾಗಿ ನಡೆದ ಬೂತ್ ಮುಖಂಡರು ಮತ್ತು ಬ್ಲಾಕ್ ಮುಖಂಡರುಗಳ ಬೃಹತ್ ಸಭೆಯನ್ನು ಹಾಗೂ ಚುನಾವಣಾ ಪ್ರಚಾರ ಸಭೆಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಇದನ್ನೂ ಓದಿ: ಪ್ರಧಾನಿ ನರೇಂದ್ರ ಮೋದಿ ಭ್ರಷ್ಟಾಚಾರ ರಹಿತ ಆಡಳಿತ ನೀಡುತ್ತಿದ್ದಾರೆ

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ|| ರಾಜೀವ್ ಗೌಡ ಅವರು ಪಾರ್ಲಿಮೆಂಟಿನಲ್ಲಿ ಸಮರ್ಥವಾಗಿ ನಾಡಿನ ಪರವಾಗಿ, ಕ್ಷೇತ್ರದ ಜನರ ಪರವಾಗಿ ಧ್ವನಿ ಎತ್ತುತ್ತಾರೆ.ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರಿಗೆ ನೀವು ಮತ ಹಾಕಲು ಕಾರಣಗಳೇ ಇಲ್ಲ. ಅವರು ಸಂಸದರಾಗಿ ನಾಡಿನ ಜನತೆಗೆ ಆದ ಅನ್ಯಾಯಗಳು ಬಗ್ಗೆ ಪಾರ್ಲಿಮೆಂಟಿನಲ್ಲಿ ಧ್ವನಿ ಎತ್ತಲಿಲ್ಲ.

ಶೋಭಾ ಕರಂದ್ಲಾಜೆ ಅವರನ್ನು ಉಡುಪಿ-ಚಿಕ್ಕಮಗಳೂರಿನ ಬಿಜೆಪಿ ಕಾರ್ಯಕರ್ತರೇ ಗೋ-ಬ್ಯಾಕ್ ಎಂದು ಓಡಿಸಿದ್ದಾರೆ. ಗೆಲ್ಲಿಸಿದ ಕ್ಷೇತ್ರದ ಕಾರ್ಯಕರ್ತರೇ ಅವರನ್ನು ಗೋ ಬ್ಯಾಕ್ ಎಂದು ಕಳುಹಿಸಿದ್ದಾರೆ. ಆದ್ದರಿಂದ ಅವರಿಗೆ ಇಲ್ಲಿ ಮತಹಾಕಲು ಕಾರಣಗಳೇ ಇಲ್ಲ.ಶೋಭಾ ಕರಂದ್ಲಾಜೆ ಅವರು ಸಂಸದರಾಗಿ ಜನರ ಕೆಲಸ ಮಾಡಲಿಲ್ಲ. ಈ ಕಾರಣಕ್ಕೇ ಮೋದಿಯವರ ಮುಖನೋಡಿ ಮತ ಕೊಡಿ ಎಂದು ಕೇಳುತ್ತಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಅವರೂ ಸರ್ಕಾರ ನಡೆಸಿ ಜನರ ಕೆಲಸ ಮಾಡದೆ ತಿರಸ್ಕೃತಗೊಂಡರು. ಹೀಗಾಗಿ ಇವರೂ ನರೇಂದ್ರ ಮೋದಿ ಮುಖ ನೋಡಿ ಮತ ಹಾಕಲು ಕೇಳುತ್ತಿದ್ದಾರೆಯೇ ಹೊರತು ತಮ್ಮ ಸಾಧನೆಗಳ ಮೇಲೆ ಕೇಳುತ್ತಿಲ್ಲ ಎಂದು ಕಿಡಿ ಕಾರಿದರು.

ಇದನ್ನೂ ಓದಿ: ಖ್ಯಾತ ನಿರ್ಮಾಪಕ ರಮೇಶ್ ರೆಡ್ಡಿ ಪುತ್ರಿ ವಿವಾಹ ಆರತಕ್ಷತೆಯಲ್ಲಿ ಚಿತ್ರರಂಗ, ರಾಜಕೀಯ ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರು ಭಾಗಿ

ನುಡಿದಂತೆ ನಡೆದು ನಿಮ್ಮ ಮತಗಳಿಗೆ ಘನತೆ ತರುವ ಕೆಲಸವನ್ನು ನಾವು ಮಾಡಿದ್ದೇವೆ. ನಮಗೆ ಶಕ್ತಿ ತುಂಬಿ ಎಂದು ಮನವಿ ಮಾಡುತ್ತೇನೆ ಎಂದು ಅವರು ಆಗ್ರಹಿಸಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News