ಬೆಂಗಳೂರು ಸೇರಿದಂತೆ ರಾಜ್ಯದ ಈ ಭಾಗಗಳಲ್ಲಿ ಮುಂದಿನ 24 ಗಂಟೆ ಭಾರೀ ಮಳೆ ಎಚ್ಚರಿಕೆ

Rain Alert: ಮುಂದಿನ 24 ಗಂಟೆಗಳ ಕಾಲ ರಾಜ್ಯದ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ರಾಜ್ಯದ ಯಾವ ಯಾವ ಜಿಲ್ಲೆಗಳಲ್ಲಿ ಇಂದು ಮಳೆ ಸಾಧ್ಯತೆ ಇದೆ ಎಂದು ತಿಳಿಯೋಣ.. 

Written by - Yashaswini V | Last Updated : Jun 6, 2024, 08:54 AM IST
  • ರಾಜ್ಯದಲ್ಲಿ ಮುಂದಿನ 24 ಗಂಟೆ ಭಾರೀ ಮಳೆ
  • ಮಲೆನಾಡು, ದಕ್ಷಿಣ ಕರ್ನಾಟಕ, ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭರ್ಜರಿ ಮಳೆ ಎಚ್ಚರಿಕೆ ನೀಡಿದ ಐಎಂಡಿ
ಬೆಂಗಳೂರು ಸೇರಿದಂತೆ ರಾಜ್ಯದ ಈ ಭಾಗಗಳಲ್ಲಿ ಮುಂದಿನ 24 ಗಂಟೆ ಭಾರೀ ಮಳೆ ಎಚ್ಚರಿಕೆ  title=

Karnataka Rain Alert: ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮುಂದಿನ 24 ಗಂಟೆ ಭಾರಿ ಭರ್ಜರಿ ಮಳೆ ಸಾಧ್ಯತೆಯ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹವಾಮಾನ ಇಲಾಖೆ ಮಾಹಿತಿಯ ಪ್ರಕಾರ, ಕರ್ನಾಟಕದ ರಾಜಧಾನಿ ಬೆಂಗಳೂರು ಸೇರಿದಂತೆ ಮಲೆನಾಡು, ದಕ್ಷಿಣ ಕರ್ನಾಟಕ, ಉತ್ತರ ಕರ್ನಾಟಕ ಭಾಗಗಳಲ್ಲಿ ಭಾರೀ ಮಳೆ (Heavy Rain) ಸಾಧ್ಯತೆ ಬಗ್ಗೆ ಹವಾಮಾನ ಇಲಾಖೆ ಭವಿಷ್ಯ ನುಡಿದಿದೆ. 

ವಾಸ್ತವವಾಗಿ, ಕರ್ನಾಟಕದಲ್ಲಿ ಮುಂಗಾರು (Monsoon In Karnataka) ಚುರುಕಾಗಿದ್ದು ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗುತ್ತಿದೆ. ಇದರಿಂದಾಗಿ ಕರುನಾಡಿನ ಜಲಾಶಯಗಳಿಗೆ ಕೂಡ ಭರ್ಜರಿ ನೀರು ಹರಿದು ಬರುತ್ತಿದ್ದು, ರೈತಾಪಿ ವರ್ಗ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಇದೇ ಸಮಯದಲ್ಲಿ ಮುಂದಿನ 24 ಗಂಟೆ ಅವಧಿಯಲ್ಲಿ ಸಿಕ್ಕಾಪಟ್ಟೆ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ (Meteorological Department) ಎಚ್ಚರಿಕೆ ನೀಡಿದೆ. 

ಇದನ್ನೂ ಓದಿ- ಚಾರಣಿಗರ ರಕ್ಷಣೆ ಮತ್ತು ಮೃತದೇಹಗಳನ್ನು ರಾಜ್ಯಕ್ಕೆ ತುರ್ತಾಗಿ ತರಲು ಅಗತ್ಯ ಕ್ರಮಕ್ಕೆ ಸಿಎಂ ಸೂಚನೆ

ಈ ಜಿಲ್ಲೆಗಳಲ್ಲಿ ಭಾರೀ ಮಳೆ ಎಚ್ಚರಿಕೆ: 
ಹವಾಮಾನ ಇಲಾಖೆ ಪ್ರಕಾರ, ರಾಜ್ಯ ರಾಜಧಾನಿ ಸಿಲಿಕಾನ್ ಸಿಟಿ ಬೆಂಗಳೂರು (Bengaluru Rain) ಸೇರಿದಂತೆ ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಚಾಮರಾಜನಗರ, ಮಂಡ್ಯ, ಮೈಸೂರು, ಉಡುಪಿ, ಮಂಗಳೂರು, ಉತ್ತರ ಕನ್ನಡ, ತುಮಕೂರು, ಹಾಸನ, ಚಿತ್ರದುರ್ಗ, ಬೆಳಗಾವಿ, ದಾವಣಗೆರೆ, ಬಳ್ಳಾರಿ, ಬೆಂಗಳೂರು ನಗರ, ವಿಜಯಪುರ, ಬೆಂಗಳೂರು ಗ್ರಾಮಾಂತರ ಮತ್ತು ಚಿಕ್ಕಬಳ್ಳಾಪುರ, ಕೋಲಾರದಲ್ಲಿ ಭಾರಿ ಮಳೆ ಸುರಿಯಲಿದೆ ಎಂದು ಮುನ್ನೆಚ್ಚರಿಕೆ ನೀಡಿದೆ.

ಇದನ್ನೂ ಓದಿ- ಲೋಕಸಭಾ ಚುನಾವಣೆ ಸೋಲಿನಿಂದ ಕಂಗೆಟ್ಟ ಬ್ಲೂ ಬಾಯ್ : ರಾತ್ರಿಯೆಲ್ಲ ಚಿಂತೆಯಲ್ಲೇ ಕಳೆದ ಪ್ರಜ್ವಲ್ 

ಇದಲ್ಲದೆ, ಮುಂದಿನ ಐದು ದಿನ ರಾಜ್ಯದ ಕೆಲವು ಭಾಗಗಳಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿಯ ಗಾಳಿಯೊಂದಿಗೆ  ಭರ್ಜರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News