ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಹೊರೆಯಾಗುವುದಿಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ

ಬಜೆಟ್'ನಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಲಾಗಿದೆ. ಇದರಿಂದ ರಾಜ್ಯದ ಜನರಿಗೆ ಹೊರೆಯಾಗುವುದಿಲ್ಲ ಎಂದು ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.

Last Updated : Jul 5, 2018, 05:12 PM IST
ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಹೊರೆಯಾಗುವುದಿಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ title=

ಬೆಂಗಳೂರು: ರಾಜ್ಯದ ಸಮ್ಮಿಶ್ರ ಸರ್ಕಾರದ ಬಜೆಟ್'ನಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಲಾಗಿದೆ. ಇದರಿಂದ ರಾಜ್ಯದ ಜನರಿಗೆ ಹೊರೆಯಾಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.

ಇಂದು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಬಜೆಟ್ ಮಂಡಿಸಿದ ನಂತರ ಸುದ್ದಿಗಾರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು, ಈ ಬಜೆಟ್​ನಲ್ಲಿ ರೈತರ ಸಾಲಮನ್ನಾ ಮಾಡಲಾಗಿದೆ. ಅದಕ್ಕೆ ಸಂಪನ್ಮೂಲ ಕ್ರೋಡಿಕರಿಸುವುದಕ್ಕಾಗಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು ಸ್ವಲ್ಪ ಹೆಚ್ಚಿಸಲಾಗಿದೆ ಮತ್ತು ಕೆಲವು ಹೊಸ ತೆರಿಗೆಗಳನ್ನ ಸಹ ಪರಿಚಯಿಸಲಾಗಿದೆ. ಇದು ಜನರಿಗೆ ಹೆಚ್ಚು ಹೊರೆಯಾಗುವುದಿಲ್ಲ ಎಂದು ಹೇಳಿದರು.

ಇದು ಮೈತ್ರಿ‌ ಸರ್ಕಾರದ ಬಜೆಟ್. ಹಿಂದಿನ ನಮ್ಮ‌ ಸರ್ಕಾರದ ಕಾರ್ಯಕ್ರಮಗಳನ್ನು‌ ಮುಂದುವರಿಸಿ ಮುಖ್ಯಮಂತ್ರಿಗಳು ಪರಿಷ್ಕೃತ ಬಜೆಟ್ ಮಂಡಿಸಿದ್ದಾರೆ. ಹಾಗಾಗಿ ಇದು ಎರಡೂ ಪಕ್ಷಗಳ ಪ್ರಣಾಳಿಕೆಯಲ್ಲಿನ ಪ್ರಮುಖ ಅಂಶಗಳನ್ನೊಳಗೊಂಡ ಬಜೆಟ್. ಇದರಲ್ಲಿ‌ ವಿಶೇಷವಾಗಿ‌ ರೈತರ ಸಾಲಮನ್ನಾ ಮಾಡಿರುವುದು‌ ಸ್ವಾಗತಾರ್ಹ. ಇದಕ್ಕೆ ಸಮನ್ವಯ ಸಮಿತಿ ಒಪ್ಪಿಗೆ ನೀಡಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

Trending News