ದೇಶಪ್ರೇಮ ಎಂಬುದು ನಮಗೆ ಮಾತೃಪ್ರೇಮ ಇದ್ದಂತೆ: ಸಚಿವ ಕೆ.ವೆಂಕಟೇಶ್

Independence Day: ರಾಷ್ಟ್ರೀಯ ಏಕತೆ ಮತ್ತು ಭಾವೈಕ್ಯತೆಯನ್ನು ಸಾಧಿಸುವುದರ ಜೊತೆಜೊತೆಗೆ ಎಲ್ಲಾ ಕ್ಷೇತ್ರದಲ್ಲೂ ಇರುವ ವಿಫುಲ ಅವಕಾಶ ಬಳಸಿಕೊಂಡು ದೇಶದ ಸರ್ವಾಂಗೀಣ ಅಭಿವೃದ್ಧಿಯತ್ತ ವಿಶೇಷ ಗಮನ ಹರಿಸಬೇಕಾಗಿದೆ ಎಂದರು‌.

Written by - Yashaswini V | Last Updated : Aug 15, 2024, 10:33 AM IST
  • ಚಾಮರಾಜನಗರ ಜಿಲ್ಲೆಯಲ್ಲಿ 8,10,807 ಮಂದಿ ಫಲಾನುಭವಿಗಳು ಅನ್ನಭಾಗ್ಯ ಯೋಜನೆಯ ಡಿಬಿಟಿ ಸದುಪಯೋಗ ಪಡೆಯುತ್ತಿದ್ದಾರೆ.
  • ಗೃಹ ಲಕ್ಷ್ಮೀ ಯೋಜನೆಯಲ್ಲಿ ಚಾಮರಾಜನಗರ ರಾಜ್ಯದಲ್ಲಿ 2 ನೇ ಸ್ಥಾನ ಪಡೆದಿದೆ.
  • ಗೃಹಜ್ಯೋತಿ ಯೋಜನೆಯಲ್ಲಿ ಶೇ.99.53 ರಷ್ಟು ಪ್ರಗತಿ ಸಾಧಿಸಿದ್ದೇವೆ ಎಂದು ತಿಳಿಸಿದರು.
ದೇಶಪ್ರೇಮ ಎಂಬುದು ನಮಗೆ ಮಾತೃಪ್ರೇಮ ಇದ್ದಂತೆ: ಸಚಿವ ಕೆ.ವೆಂಕಟೇಶ್  title=

Independence Day: ಚಾಮರಾಜನಗರ ಜಿಲ್ಲಾಡಳಿತ ವತಿಯಿಂದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಸಂಭ್ರಮ- ಸಡಗರದಿಂದ 78 ನೇ ಸ್ವಾತಂತ್ರ್ಯ ದಿನ (78th Independence Day) ಆಚರಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಧ್ವಜಾರೋಹಣ ನೆರವೇರಿಸಿ ವಿವಿಧ ತುಕಡಿಗಳಿಂದ ಗೌರವ ವಂದನೆ ಸ್ವೀಕರಿಸಿದರು.  ಪೊಲೀಸರ ವಿವಿಧ ತುಕಡಿ ಸೇರಿದಂತೆ ವಿವಿಧ ಶಾಲಾ ಮಕ್ಕಳಿಂದ ಆಕರ್ಷಕ ಪಥಸಂಚಲನ ನಡೆಯಿತು‌.

ದೇಶಪ್ರೇಮ ಎಂಬುದು ನಮಗೆ ಮಾತೃಪ್ರೇಮ ಇದ್ದಂತೆ: 
ಧ್ವಜಾರೋಹಣ ಬಳಿಕ ಕೆ.ವೆಂಕಟೇಶ್ ಸ್ವಾತಂತ್ರ್ಯೋತ್ಸವ ಭಾಷಣ ಮಾಡಿ,, ಲಕ್ಷಂತಾರ ಮಂದಿ ದೇಶಭಕ್ತರ ತ್ಯಾಗ, ಬಲಿದಾನ ಸಮರ್ಪಣೆ ಮೂಲಕ ದೊರೆತ ಸ್ವಾತಂತ್ರ್ಯಕ್ಕೆ 78 ರ ಸಂಭ್ರಮ, ನಮಗೆ ಭಾರತ ಒಂದು ಮಾತೃಭೂಮಿ, ಭಾವನಾತ್ಮಕ ಬೆಸುಗೆಯಿಂದ ಬೆಳೆದ ನಮಗೆ ದೇಶಭಕ್ತಿ ಎನ್ನುವುದು ಮಾತೃಪ್ರೇಮದಂತೆ ಹುಟ್ಟಿನಿಂದಲೂ ಬೆಳೆದು ಬಂದ ಸಹಜ ಸ್ವಭಾವ ಎಂದರು.

ರಾಷ್ಟ್ರೀಯ ಏಕತೆ ಮತ್ತು ಭಾವೈಕ್ಯತೆಯನ್ನು ಸಾಧಿಸುವುದರ ಜೊತೆಜೊತೆಗೆ ಎಲ್ಲಾ ಕ್ಷೇತ್ರದಲ್ಲೂ ಇರುವ ವಿಫುಲ ಅವಕಾಶ ಬಳಸಿಕೊಂಡು ದೇಶದ ಸರ್ವಾಂಗೀಣ ಅಭಿವೃದ್ಧಿಯತ್ತ ವಿಶೇಷ ಗಮನ ಹರಿಸಬೇಕಾಗಿದೆ ಎಂದರು‌.

ಇದನ್ನೂ ಓದಿ- ಸ್ವಾತಂತ್ರ್ಯ ದಿನದಂದು ನಿಮ್ಮ ಪ್ರೀತಿ ಪಾತ್ರರಿಗೆ ಕಳಿಸಲು ಇಲ್ಲಿವೆ ಶುಭ ಸಂದೇಶಗಳು... ದೇಶದ ಹಬ್ಬವನ್ನು ಸಂಭ್ರಮಿಸೋಣ!

ಚಾಮರಾಜನಗರ ಜಿಲ್ಲೆಯಲ್ಲಿ 8,10,807  ಮಂದಿ ಫಲಾನುಭವಿಗಳು ಅನ್ನಭಾಗ್ಯ ಯೋಜನೆಯ ಡಿಬಿಟಿ ಸದುಪಯೋಗ ಪಡೆಯುತ್ತಿದ್ದಾರೆ. ಗೃಹ ಲಕ್ಷ್ಮೀ ಯೋಜನೆಯಲ್ಲಿ ಚಾಮರಾಜನಗರ ರಾಜ್ಯದಲ್ಲಿ  2 ನೇ ಸ್ಥಾನ ಪಡೆದಿದೆ, ಗೃಹಜ್ಯೋತಿ ಯೋಜನೆಯಲ್ಲಿ ಶೇ.99.53 ರಷ್ಟು ಪ್ರಗತಿ ಸಾಧಿಸಿದ್ದೇವೆ ಎಂದು ತಿಳಿಸಿದರು.

ಇದನ್ನೂ ಓದಿ- ಭಾರತದಲ್ಲಿ ಮೊಟ್ಟ ಮೊದಲು ಸ್ವಾತಂತ್ರ‍ ಘೋಷಿಸಿಕೊಂಡ ಈ ಹಳ್ಳಿಯ ಬಗ್ಗೆ ನಿಮಗೆಷ್ಟು ಗೊತ್ತು?

ದೇಶದ ಇತಿಹಾಸ, ಪರಂಪರೆ, ಸಂಸ್ಕೃತಿ, ದಿವ್ಯತೆ, ಭವ್ಯತೆಗಳ ಅರಿವಿನಿಂದ ನಮ್ಮ ಯುವ ಪೀಳಿಗೆ ಜಾಗೃತಗೊಳ್ಳಲಿ, ವಂದೇ ಭಾರತ- ಒಂದೇ ಭಾರತ ಎಂಬ ಕೂಗು ಒಮ್ಮೆಗೆ ಮೊಳಗಲಿ ಎಂದರು‌.

ಕಾರ್ಯಕ್ರಮದಲ್ಲಿ ಚಾಮರಾಜನಗರ ಸಂಸದ ಸುನಿಲ್ ಬೋಸ್, ಶಾಸಕ ಸಿ.ಪುಟ್ಟರಂಗಶೆಟ್ಟಿ ಸೇರಿದಂತೆ ಇತರೆ ಗಣ್ಯರು ಇದ್ದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News