ಸಚಿವ ಸ್ಥಾನಕ್ಕೆ ಆರ್. ಶಂಕರ್ ರಾಜೀನಾಮೆ!

ರಾಜಭವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿ ಮಾಡಿದ ಅವರು, ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ. 

Last Updated : Jul 8, 2019, 07:15 PM IST
ಸಚಿವ ಸ್ಥಾನಕ್ಕೆ ಆರ್. ಶಂಕರ್ ರಾಜೀನಾಮೆ!  title=
File Photo,Courtesy: ANI

ಬೆಂಗಳೂರು: ರಾಣಿಬೆನ್ನೂರು ಪಕ್ಷೇತರ ಶಾಸಕ ಹಾಗೂ ಪೌರಾಡಳಿತ ಸಚಿವ ಆರ್.ಶಂಕರ್ ಅವರು ಸೋಮವಾರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ರಾಜಭವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿ ಮಾಡಿದ ಅವರು, ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ. 

ಬೆಳಿಗ್ಗೆಯಷ್ಟೇ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದ ಪಕ್ಷೇತರ ಶಾಸಕ ನಾಗೇಶ್ ಕಾಂಗ್ರೆಸ್, ಜೆಡಿಎಸ್ ಮೈತ್ರಿ ಸರ್ಕಾರಕ್ಕೆ ನೀಡಿದ್ದ ಬೆಂಬಲ ಹಿಂಪಡೆದಿರುವುದಾಗಿ ರಾಜ್ಯಪಾಲರಿಗೆ ಪತ್ರ ಸಲ್ಲಿಸಿದ ಬೆನ್ನಲ್ಲೇ  ರಾಣಿಬೆನ್ನೂರು ಪಕ್ಷೇತರ ಶಾಸಕ ಆರ್.ಶಂಕರ್ ರಾಜ್ಯಪಾಲರಿಗೆ ರಾಜೀನಾಮೆ ಸಲ್ಲಿಸಿದ್ದು, ಮುಂಬೈಗೆ ತೆರಳಿ ಅತೃಪ್ತ ಶಾಸಕರನ್ನು ಸೇರಿಕೊಳ್ಳುವ ಸಾಧ್ಯತೆಯಿದೆ. 

ಮೈತ್ರಿ ಸರ್ಕಾರದಲ್ಲಿ ಭುಗಿಲೆದ್ದಿದ್ದ ಅಸಮಾಧಾನವನ್ನು ತಣಿಸಲು ಕೆಲ ದಿನಗಳ ಹಿಂದಷ್ಟೇ ಪಕ್ಷೇತರಿಗೆ ಸಚಿವ ಸ್ಥಾನ ನೀಡುವ ಮೂಲಕ ಸಂಪುಟ ಪುನರ್ರಚಿಸಲಾಗಿತ್ತು. 

 

Trending News