Sharath Bachegowda: ಬಚ್ಚೇಗೌಡ ಪುತ್ರ ಶರತ್ ಬಚ್ಚೇಗೌಡ ಫೆ. 26ಕ್ಕೆ 'ಕಾಂಗ್ರೆಸ್'ಗೆ ಸೇರ್ಪಡೆ..!

ರಾಜ್ಯ ಕಾಂಗ್ರೆಸ್ ನಾಯಕರ ಜೊತೆ ಹಲವು ಸುತ್ತಿನ ಚರ್ಚೆಯ ಬಳಿಕ ಇದೀಗ ಶರತ್ ಬಚ್ಚೇಗೌಡ ಕಾಂಗ್ರೆಸ್ ಸೇರ್ಪಡೆಯಾಗುವ ದಿನಾಂಕ ನಿಗದಿ

Last Updated : Feb 18, 2021, 02:54 PM IST
  • ಹೊಸಕೋಟೆ ಕ್ಷೇತ್ರದ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಫೆಬ್ರವರಿ 26ರಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ
  • ರಾಜ್ಯ ಕಾಂಗ್ರೆಸ್ ನಾಯಕರ ಜೊತೆ ಹಲವು ಸುತ್ತಿನ ಚರ್ಚೆಯ ಬಳಿಕ ಇದೀಗ ಶರತ್ ಬಚ್ಚೇಗೌಡ ಕಾಂಗ್ರೆಸ್ ಸೇರ್ಪಡೆಯಾಗುವ ದಿನಾಂಕ ನಿಗದಿ
  • ಫೆ.26 ಕ್ಕೆ ಕಾಂಗ್ರೆಸ್ ಪಕ್ಷವನ್ನು ಶಾಸಕ ಶರತ್ ಬಚ್ಚೇಗೌಡ ಸೇರ್ಪಡೆ
Sharath Bachegowda: ಬಚ್ಚೇಗೌಡ ಪುತ್ರ ಶರತ್ ಬಚ್ಚೇಗೌಡ ಫೆ. 26ಕ್ಕೆ 'ಕಾಂಗ್ರೆಸ್'ಗೆ ಸೇರ್ಪಡೆ..! title=

ಬೆಂಗಳೂರು: ಚಿಕ್ಕಬಳ್ಳಾಪುರ ಬಿಜೆಪಿ ಸಂಸದ ಬಿ.ಎನ್. ಬಚ್ಚೇಗೌಡ ಪುತ್ರ ಹಾಗೂ ಹೊಸಕೋಟೆ ಕ್ಷೇತ್ರದ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಅವರು ಫೆಬ್ರವರಿ 26ರಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾ ರೆಂದು ವರದಿಗಳಿಂದ ತಿಳಿದುಬಂದಿದೆ.

ಕಳೆದ ಕೆಲ ತಿಂಗಳುಗಳಿಂದ ಇವರು ಕಾಂಗ್ರೆಸ್ ಸೇರ್ಪಡೆ ಆಗಲಿದ್ದಾರೆ ಎಂಬ ವಿಚಾರ ಬಹಳ ಚರ್ಚೆಗೆ ಗ್ರಾಸವಾಗಿತ್ತು. ರಾಜ್ಯ ಕಾಂಗ್ರೆಸ್ ನಾಯಕರ ಜೊತೆ ಹಲವು ಸುತ್ತಿನ ಚರ್ಚೆಯ ಬಳಿಕ ಇದೀಗ ಶರತ್ ಬಚ್ಚೇಗೌಡ(Sharath Bachegowda) ಕಾಂಗ್ರೆಸ್ ಸೇರ್ಪಡೆಯಾಗುವ ದಿನಾಂಕ ನಿಗದಿಯಾಗಿದೆ. ಫೆ.26 ಕ್ಕೆ ಕಾಂಗ್ರೆಸ್ ಪಕ್ಷವನ್ನು ಶಾಸಕ ಶರತ್ ಬಚ್ಚೇಗೌಡ ಸೇರ್ಪಡೆ ಆಗಲಿದ್ದಾರೆಂದು ಹೇಳಲಾಗುತ್ತಿದೆ.

ಯಶ್ ಅಣ್ಣ, ಸಿದ್ದರಾಮಯ್ಯ ಸರ್ ನನ್ನ ಅಂತ್ಯಕ್ರಿಯೆಗೆ ಬರಬೇಕು..! ಡೆತ್ ನೋಟಿನಲ್ಲಿ ಅಭಿಮಾನಿಯ ಕೊನೆಯಾಸೆ.!

ದಿನಾಂಕಗಳು ನಿಗದಿಯಾಗಿಲ್ಲ. ಆದರೆ, ಫೆಬ್ರವರಿ ತಿಂಗಳಿನಲ್ಲಿ ಕಾಂಗ್ರೆಸ್(Congress) ಪಕ್ಷಕ್ಕೆ ಸೇರ್ಪಡೆಗೊಳ್ಳಬೇಕು ಎಂದು ಕೊಂಡಿದ್ದೇನೆಂದು ಶರತ್ ಅವರು ತಿಳಿಸಿದ್ದಾರೆ.

ನಿಮ್ಮ ನಿರ್ಧಾರಕ್ಕೆ ನಿಮ್ಮ ತಂದೆ ಬಚ್ಚೇಗೌಡ(BN Bachegowda) ಅವರು ಒಪ್ಪಿಗೆ ನೀಡಿದ್ದಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಶರತ್ ಅವರು, ಎಲ್ಲಾ ವಿಚಾರಗಳು ಜನರಿಗೆ ತಿಳಿದಿದೆ. ತಂದೆಯವರಿಗೆ ನಾನು ಯಾವುದೇ ಮಾಹಿತಿಯನ್ನೂ ನೀಡಿಲ್ಲ. ಎಲ್ಲವೂ ಅವರಿಗೆ ಗೊತ್ತಿದೆ ಎಂದಿದ್ದಾರೆ.

Dr Ashwath Narayan: ಅತಿಥಿ ಉಪನ್ಯಾಸಕರಿಗೆ ಭರ್ಜರಿ ಸಿಹಿಸುದ್ದಿ ನೀಡಿದ ಡಿಸಿಎಂ ಅಶ್ವತ್ಥ್ ನಾರಾಯಣ!

ಇದೇ ವೇಳೆ ಚುನಾವಣೆಯಲ್ಲಿ ಗೆಲುವು ಸಾಧಿಸಲು ಪರೋಕ್ಷವಾಗಿ ಪುತ್ರನಿಗೆ ಬಚ್ಚೇಗೌಡ ಅವರು ಸಹಾಯ ಮಾಡಿದ್ದರು ಎಂಬ ಆರೋಪಗಳನ್ನು ಶರತ್ ತಳ್ಳಿಹಾಕಿದ್ದಾರೆ.

2018ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ(BJP) ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಶರತ್ ಬಚ್ಚೇಗೌಡ, ಹಿಂದೆ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಎಂ.ಟಿ.ಬಿ ನಾಗರಾಜ್ ವಿರುದ್ಧ ಸೋಲು ಕಂಡಿದ್ದರು. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಸಚಿವರಾಗಿದ್ದ ಎಂ.ಟಿ.ಬಿ ನಾಗರಾಜ್‌, ಬಳಿಕ ನಡೆದ ರಾಜಕೀಯ ಬೆಳವಣಿಗೆಯಲ್ಲಿ, ಶಾಸಕ ಮತ್ತು ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಬಿಜೆಪಿ ಸೇರಿದ್ದರು.

ಉಡುಪಿ ಕೃಷ್ಣಮಠದಲ್ಲಿ ಶೃದ್ದಾ ಭಕ್ತಿಯಿಂದ ನೆರವೇರಿದ ಪರ್ಯಾಯ ಪೂರ್ವಭಾವಿ ಅಕ್ಕಿ ಮುಹೂರ್ತ

ಹೊಸಕೋಟೆ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಎಂ.ಟಿ.ಬಿ ನಾಗರಾಜ್(MTB Nagaraj)‌, ಬಿಜೆಪಿಯಿಂದ ಟಿಕೆಟ್‌ ಸಿಗದ ಕಾರಣಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಶರತ್ ಬಚ್ಚೇಗೌಡ ವಿರುದ್ಧ ಪರಾಭವಗೊಂಡಿದ್ದರು. ಆದರೆ, ವಿಧಾನಪರಿಷತ್ ಸದಸ್ಯರಾಗಿ ಬಿಜೆಪಿಯಿಂದ ಆಯ್ಕೆಯಾದ ಎಂ.ಟಿ.ಬಿ ನಾಗರಾಜ್, ಇದೀಗ ಮತ್ತೆ ಸಚಿವರಾಗಿದ್ದಾರೆ.

ಶರತ್ ಅವರು ಕಾಂಗ್ರೆಸ್ ಸೇರಿದ ಬಳಿಕ, ಮಾಚ್೯ ಮೊದಲ ವಾರದಲ್ಲಿ ಹೊಸಕೋಟೆಯಲ್ಲಿ ಕಾಂಗ್ರೆಸ್‌ ಪಕ್ಷ, ಬೃಹತ್ ಸಮಾವೇಶ ನಡೆಸಲಿದ್ದು, ಈ ವೇಳೆ ತಮ್ಮ ಶಕ್ತಿ ಪ್ರದರ್ಶಿಸಲು ಶರತ್ ನಿರ್ಧರಿಸಿದ್ದಾರೆಂದು ತಿಳಿದುಬಂದಿದೆ.

ಬಿಜೆಪಿಯವರು ಮಾಡುತ್ತಿರುವ ರಾಮಜಪ ಅಧಿಕ್ಕಾರಕ್ಕಾಗಿ ಮಾತ್ರ: HD Kumaraswamy

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News