ಸಮ್ಮಿಶ್ರ ಸರ್ಕಾರಕ್ಕೆ ನೀಡಿದ್ದ ಬೆಂಬಲ ವಾಪಸ್ ಪಡೆದ ಪಕ್ಷೇತರ ಶಾಸಕರು

ಮುಳಬಾಗಿಲು ಕ್ಷೇತ್ರದ ಪಕ್ಷೇತರ ಶಾಸಕ ಎಚ್.ನಾಗೇಶ್ ಮತ್ತು ರಾಣೆಬೆನ್ನೂರು ಕ್ಷೇತ್ರದ ಕೆಪಿಜೆಪಿ ಶಾಸಕ ಆರ್.ಶಂಕರ್ ಸರ್ಕಾರಕ್ಕೆ ನೀಡಿರುವ ಬೆಂಬಲ ವಾಪಸ್ ಪಡೆದಿದ್ದಾರೆ.

Last Updated : Jan 15, 2019, 03:46 PM IST
ಸಮ್ಮಿಶ್ರ ಸರ್ಕಾರಕ್ಕೆ ನೀಡಿದ್ದ ಬೆಂಬಲ ವಾಪಸ್ ಪಡೆದ ಪಕ್ಷೇತರ ಶಾಸಕರು title=
File Image

ಬೆಂಗಳೂರು: ಇಂದು ನಡೆದ ಮಹತ್ವದ ಬೆಳವಣಿಗೆಯೊಂದರಲ್ಲಿ ರಾಜ್ಯ ಸಮ್ಮಿಶ್ರ ಸರ್ಕಾರಕ್ಕೆ ಬೆಂಬಲ ನೀಡಿದ್ದ ಇಬ್ಬರು ಪಕ್ಷೇತರ ಶಾಸಕರು ತಮ್ಮ ಬೆಂಬಲವನ್ನು ವಾಪಸ್ ಪಡೆದಿದ್ದಾರೆ.

ಮಾಜಿ ಸಚಿವ ಆರ್. ಶಂಕರ್ ಮತ್ತು ಶಾಸಕ ಎಚ್. ನಾಗೇಶ್ ಮೈತ್ರಿ ಸರಕಾರದೊಂದಿಗೆ ನಾವಿನ್ನು ಮುಂದುವರಿಯುವುದಿಲ್ಲ ಎಂದಿದ್ದಾರೆ. ಮುಳಬಾಗಿಲು ಕ್ಷೇತ್ರದ ಪಕ್ಷೇತರ ಶಾಸಕ ಎಚ್.ನಾಗೇಶ್ ಮತ್ತು ರಾಣೆಬೆನ್ನೂರು ಕ್ಷೇತ್ರದ ಕೆಪಿಜೆಪಿ ಶಾಸಕ ಆರ್.ಶಂಕರ್ ಸರ್ಕಾರಕ್ಕೆ ನೀಡಿರುವ ಬೆಂಬಲ ವಾಪಸ್ ಪಡೆದಿದ್ದಾರೆ.

ರಾಜ್ಯ ಸರಕಾರದಲ್ಲಿ ಶಾಸಕರಿಗೆ ಗೌರವವಿಲ್ಲ, ಮೈತ್ರಿ ಸರಕಾರದಿಂದ ಜನರ ಬೇಡಿಕೆಗಳನ್ನು ಈಡೇರಿಸಲು ಸಾಧ್ಯವಾಗುತ್ತಿಲ್ಲ. ಜನರಿಗೆ ಸುಭದ್ರ ಸರ್ಕಾರ ಬೇಕಿದ್ದು, ನಾನು ಬಿಜೆಪಿಗೆ ಬೆಂಬಲ ನೀಡುತ್ತಿದ್ದೇನೆ ಎಂದು ಶಾಸಕ ಎಚ್. ನಾಗೇಶ್ ಹೇಳಿದ್ದಾರೆ.

ಇನ್ನು ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಸಚಿವ ಆರ್. ಶಂಕರ್ ಮೈತ್ರಿ ಸರಕಾರ ವಿಫಲವಾಗಿದ್ದು, ಜನರ ಆಶೋತ್ತರಗಳನ್ನು ಈಡೇರಿಸಲು ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ. ಇದರಿಂದ ಬೇಸತ್ತು ಬೆಂಬಲ ವಾಪಸ್ ಪಡೆಯುತ್ತಿದ್ದೇವೆ ಎಂದು ಹೇಳಿದರು.

Trending News