ಕೇಂದ್ರದಿಂದ ಬರುವ ಅಕ್ಕಿ ಕಡಿತ ಮಾಡಿರುವ ರಾಜ್ಯ ಸರ್ಕಾರದಿಂದ ಬಡವರಿಗೆ ಅನ್ಯಾಯ : ಬಸವರಾಜ ಬೊಮ್ಮಾಯಿ

Basavaraj Bommai : ಕೇಂದ್ರ ಸರ್ಕಾರ ಆಹಾರ ಭದ್ರತಾ ಕಾಯ್ದೆ ಅಡಿ ಪಡಿತರ ಮೂಲಕ ಉಚಿತವಾಗಿ ನೀಡುತ್ತಿರುವ 5 ಕೆಜಿ ಅಕ್ಕಿಯಲ್ಲಿ ರಾಜ್ಯ ಸರ್ಕಾರ ಎರಡು ಕೆಜಿ ಕಡಿತ ಮಾಡಿ ಅನ್ಯಾಯ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.  

Written by - Prashobh Devanahalli | Edited by - Savita M B | Last Updated : Jul 13, 2023, 02:00 PM IST
  • ಉಚಿತ ಅಕ್ಕಿಯನ್ನೂ ಈ ತಿಂಗಳು ರಾಜ್ಯ ಸರ್ಕಾರ ಎರಡು ಕೆಜಿ ಕಡಿಮೆ ಮಾಡಿದೆ.
  • ಚುನಾವಣೆ ಸಂದರ್ಭದಲ್ಲಿ 10 ಕೆಜಿ ಅಕ್ಕಿ ಕೊಡುವುದಾಗಿ ಹೇಳಿದ್ದಾರೆ.
ಕೇಂದ್ರದಿಂದ ಬರುವ ಅಕ್ಕಿ ಕಡಿತ ಮಾಡಿರುವ ರಾಜ್ಯ ಸರ್ಕಾರದಿಂದ ಬಡವರಿಗೆ ಅನ್ಯಾಯ : ಬಸವರಾಜ ಬೊಮ್ಮಾಯಿ title=

ಬೆಂಗಳೂರು: ವಿಧಾನಸೌಧದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ  ಅವರು ಕೇಂದ್ರ ಸರ್ಕಾರ ಕೊಡುವ ಉಚಿತ ಅಕ್ಕಿಯನ್ನೂ ಈ ತಿಂಗಳು ರಾಜ್ಯ ಸರ್ಕಾರ ಎರಡು ಕೆಜಿ ಕಡಿಮೆ ಮಾಡಿದೆ. ಚುನಾವಣೆ  ಸಂದರ್ಭದಲ್ಲಿ 10 ಕೆಜಿ ಅಕ್ಕಿ ಕೊಡುವುದಾಗಿ ಹೇಳಿದ್ದಾರೆ. ಈಗ ಮೂರು ಕೆಜಿ ಅಕ್ಕಿ ಕೊಡುತ್ತಿದ್ದಾರೆ. ಈಗ ಸಿಎಂ ಸಿದ್ದರಾಮಯ್ಯ ಉತ್ತರ ಕೊಡಬೇಕು ಎಂದು ಆಗ್ರಹಿಸಿದರು. 

ಇದನ್ನೂ ಓದಿ-ಕಾಳಿಂಗ ಸರ್ಪವನ್ನು ನಿಯಂತ್ರಿಸುತ್ತಿರುವ ಪುಟ್ಟ ಬಾಲಕನ ವಿಡಿಯೋ

ರಾಜ್ಯದಲ್ಲಿ ಭ್ರಷ್ಟಾಚಾರದ ಬಗ್ಗೆ ನಾನು ಈಗಾಗಲೇ  ಮಾತನಾಡಿದ್ದೆ, ಕುಮಾರಸ್ವಾಮಿಯವರು ವರ್ಗಾವಣೆಗೆ  ಒಂದು ಇಲಾಖೆಯ ದರ ಪಟ್ಡಿ ಬಿಡಿಗಡೆ ಮಾಡಿದ್ದಾರೆ. ಅವರು ಬಿಡುಗಡೆ ಮಾಡಿರುವುದು ಸರಿ ಇದಿಯಾ ಅಥವಾ ಇನ್ನೂ ಜಾಸ್ತಿ ಇದಿಯಾ ? ಸರ್ಕಾರ ಈ ಬಗ್ಗೆ ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿ-ರಾಜ್ಯದಲ್ಲಿ 2000 ಕೋಟಿ ಹೂಡಿಕೆಗೆ ಟಾಟಾ ಟೆಕ್ನಾಲಜೀಸ್ ಪ್ರಸ್ತಾವ: ಎಂ.ಬಿ ಪಾಟೀಲ

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News