ಶಿಕ್ಷಣದಲ್ಲಿ ಮಾತೃಭಾಷೆಯಲ್ಲದ ಭಾಷೆ ಐಚ್ಛಿಕವಾಗಿರಬೇಕೆಯೇ ಹೊರತು ಕಡ್ಡಾಯವಾಗಬಾರದು: ಸಿದ್ದರಾಮಯ್ಯ

ಕನ್ನಡ ನಮ್ಮ‌ ಅಸ್ಮಿತೆ. ನೆಲ, ಜಲ ಹಾಗೂ ಭಾಷೆಯ ವಿಚಾರದಲ್ಲಿ ರಾಜಿಯಾಗುವ ಪ್ರಶ್ನೆಯೇ ಇಲ್ಲ. ರಾಜ್ಯದ ಜನಪ್ರತಿನಿಧಿಗಳೆಲ್ಲರೂ ಪಕ್ಷಾತೀತವಾಗಿ ಚಿಂತನೆ ಮಾಡಬೇಕೆಂದು  ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

Last Updated : Jun 3, 2019, 10:33 AM IST
ಶಿಕ್ಷಣದಲ್ಲಿ ಮಾತೃಭಾಷೆಯಲ್ಲದ ಭಾಷೆ ಐಚ್ಛಿಕವಾಗಿರಬೇಕೆಯೇ ಹೊರತು ಕಡ್ಡಾಯವಾಗಬಾರದು: ಸಿದ್ದರಾಮಯ್ಯ title=
File Image

ಬೆಂಗಳೂರು: ಶಿಕ್ಷಣದಲ್ಲಿ ಮಾತೃಭಾಷೆಯಲ್ಲದ ಭಾಷೆ ಐಚ್ಛಿಕವಾಗಿರಬೇಕೆಯೇ ಹೊರತು ಕಡ್ಡಾಯವಾಗಬಾರದು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಮಾಜಿ ತ್ರಿಭಾಷಾ ಸೂತ್ರದಡಿಯಲ್ಲಿ ಎಲ್ಲಾ ರಾಜ್ಯಗಳಲ್ಲಿ ಮಾತೃಭಾಷೆ, ಆಂಗ್ಲ ಭಾಷೆ ಜೊತೆಗೆ ಮೂರನೇ ಭಾಷೆಯಾಗಿ ಹಿಂದಿ ಅಳವಡಿಸಲು ಕೇಂದ್ರ ಸರ್ಕಾರ ಮುಂದಾಗಿದೆ. 

ಶಿಕ್ಷಣ ಕ್ಷೇತ್ರದಲ್ಲಿ ಅಮೂಲಾಗ್ರ ಬದಲಾವಣೆಗೆ ತ್ರಿಭಾಷಾ ಸೂತ್ರ ಅಳವಡಿಸಲು ಕೇಂದ್ರ ಸರ್ಕಾರ ಮುಂದಾಗಿರುವುದಕ್ಕೆ ದೇಶದ ಬಹುತೇಕ ಭಾಗಗಳಲ್ಲಿ ವಿರೋಧ ವ್ಯಕ್ತವಾಗುತ್ತಿದೆ. ಅದರಲ್ಲೂ ಮುಖ್ಯವಾಗಿ ದಕ್ಷಿಣ ಭಾರತದ ರಾಜ್ಯಗಳಲ್ಲಿ ಭಾರೀ ವಿರೋಧ ವ್ಯಕ್ತವಾಗಿದೆ. 

ತ್ರಿಭಾಷಾ ಸೂತ್ರ ಅಳವಡಿಕೆಗೆ ತಮಿಳುನಾಡಿನ ರಾಜಕಾರಣಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದ ಆಡಳಿತಾರೂಢ ಎಐಎಡಿಎಂಕೆ ಕೂಡ ಕೇಂದ್ರದ ಪ್ರಸ್ತಾವನೆಯನ್ನು ವಿರೋಧಿಸಿದೆ. ಇತರ ಪಕ್ಷಗಳು ದ್ವಿಭಾಷಾ ಸೂತ್ರ ಮುಂದುವರೆಸಲು ಒತ್ತಾಯಿಸಿವೆ.

ಕರ್ನಾಟಕದಲ್ಲೂ ಕೂಡಾ ಹಿಂದಿ ಹೇರಿಕೆಗೆ ವಿರೋಧ ವ್ಯಕ್ತವಾಗುತ್ತಿದ್ದು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಗ್ಗೆ ಟ್ವೀಟ್ ಮಾಡಿದ್ದಾರೆ. ಶಿಕ್ಷಣದಲ್ಲಿ ಮಾತೃಭಾಷೆಯಲ್ಲದ ಭಾಷೆ ಐಚ್ಛಿಕವಾಗಿರಬೇಕೆಯೇ ಹೊರತು ಕಡ್ಡಾಯವಾಗಬಾರದು. ಇದು ಇನ್ನೊಂದು ಭಾಷೆಯ ಒತ್ತಾಯಪೂರ್ವಕ ಹೇರಿಕೆಯಂತಾಗಿ ಮಗುವಿನ ಕಲಿಕೆಯ ಶಕ್ತಿಯನ್ನು ಕುಂಠಿತಗೊಳಿಸುತ್ತದೆ.
ಹಿಂದಿ ಭಾಷಿಗರಲ್ಲದವರ ಮೇಲೆ ಹಿಂದಿ ಹೇರಿಕೆ ಮಾಡಲು ಹೊರಟಿರುವುದು ಭಾರತದ ಒಕ್ಕೂಟ ವ್ಯವಸ್ಥೆಗೆ ಮಾರಕವಾಗಿದೆ ಎಂಬುದು ನನ್ನ ಭಾವನೆ ಎಂದಿದ್ದಾರೆ. 

ಇದರ ಬೆನ್ನಲ್ಲೇ ಇನ್ನೊಂದು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಭಾಷೆ. ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಮೂಲಕ ಕನ್ನಡಿಗರ ಮೇಲೆ ಹಿಂದೆ ಹೇರಿಕೆಯನ್ನು  ಸಹಿಸಲಾಗದು. ಕನ್ನಡ ನಮ್ಮ‌ ಅಸ್ಮಿತೆ. ನೆಲ, ಜಲ ಹಾಗೂ ಭಾಷೆಯ ವಿಚಾರದಲ್ಲಿ ರಾಜಿಯಾಗುವ ಪ್ರಶ್ನೆಯೇ ಇಲ್ಲ. ರಾಜ್ಯದ ಅವರು ಮನವಿ ಮಾಡಿದ್ದಾರೆ.

Trending News