Govt Employees: ರಾಜ್ಯ ಸರ್ಕಾರಿ ನೌಕರರಿಗೊಂದು 'ಖಡಕ್ ಸೂಚನೆ'..!

ಸಂಸ್ಥೆಯ ಅಧಿಕಾರಿ/ನೌಕರರು ಹಾಗೂ ಅವರ ಅವಲಂಬಿತ ಕುಟುಂಬ ವರ್ಗದವರು ಬಿಪಿಎಲ್ ಪಡಿತರ ಚೀಟಿಯನ್ನು ಪಡೆದಿದ್ದಲ್ಲಿ ಅದು ಅಕ್ಷಮ್ಯ ಅಪರಾಧ

Last Updated : Feb 9, 2021, 08:55 PM IST
  • ಸರ್ಕಾರಿ ನೌಕರರು ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ರಾಜ್ಯ ಸರ್ಕಾರ ಖಡಕ್ ಸೂಚನೆ
  • ಸಂಸ್ಥೆಯ ಅಧಿಕಾರಿ/ನೌಕರರು ಹಾಗೂ ಅವರ ಅವಲಂಬಿತ ಕುಟುಂಬ ವರ್ಗದವರು ಬಿಪಿಎಲ್ ಪಡಿತರ ಚೀಟಿಯನ್ನು ಪಡೆದಿದ್ದಲ್ಲಿ ಅದು ಅಕ್ಷಮ್ಯ ಅಪರಾಧ
  • ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ವಿತರಿಸಲಾಗುವ ಬಿಪಿಎಲ್ ಪಡಿತರ ಚೀಟಿಯನ್ನು ಪಡೆದಿದ್ದಲ್ಲಿ ಕೂಡಲೇ ತಮ್ಮ ಪಡಿತರ ಚೀಟಿಯನ್ನು ಆಹಾರ ಇಲಾಖೆಗೆ ಸಲ್ಲಿಸಿ
Govt Employees: ರಾಜ್ಯ ಸರ್ಕಾರಿ ನೌಕರರಿಗೊಂದು 'ಖಡಕ್ ಸೂಚನೆ'..! title=

ಬೆಂಗಳೂರು: ಸರ್ಕಾರಿ ನೌಕರರು ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ರಾಜ್ಯ ಸರ್ಕಾರ ಖಡಕ್ ಸೂಚನೆಯೊಂದು ಕೊಟ್ಟಿದೆ.

ಸರ್ಕಾರಿ, ಸರ್ಕಾರದ ನಿಗಮ, ಮಂಡಳಿ, ಪ್ರಾಧಿಕಾರ, ವಿಶ್ವವಿದ್ಯಾಲಯ, ಸಂಸ್ಥೆಯ ಅಧಿಕಾರಿ/ನೌಕರರು ಹಾಗೂ ಅವರ ಅವಲಂಬಿತ ಕುಟುಂಬ ವರ್ಗದವರು ಬಿಪಿಎಲ್(BPL Card) ಪಡಿತರ ಚೀಟಿಯನ್ನು ಪಡೆದಿದ್ದಲ್ಲಿ ಅದು ಅಕ್ಷಮ್ಯ ಅಪರಾಧವಾಗುತ್ತದೆ.

Siddaramaiah: 'ಕುರುಬ ಸಮುದಾಯಕ್ಕೆ ಏಕಾಏಕಿ ಎಸ್‌ಟಿ ಮೀಸಲಾತಿ ಸಿಗಲ್ಲ'

ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ವಿತರಿಸಲಾಗುವ ಬಿಪಿಎಲ್ ಪಡಿತರ ಚೀಟಿಯನ್ನು ಪಡೆದಿದ್ದಲ್ಲಿ ಕೂಡಲೇ ತಮ್ಮ ಪಡಿತರ ಚೀಟಿಯನ್ನು ಆಹಾರ ಇಲಾಖೆ(Food Dept)ಗೆ ಸಲ್ಲಿಸಿ ರದ್ದುಪಡಿಸಿಕೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ.

BS Yediyurappa: ಸಿಎಂ ಬಿಎಸ್‌ವೈ ಭೇಟಿಯಾದ 40 ಜನ ಸ್ವಾಮೀಜಿಗಳ ದಂಡು..!

ಆರ್ಥಿಕವಾಗಿ ಸದೃಢವಾಗಿರುವವರು ಬಿಪಿಎಲ್ ಕಾರ್ಡ್ ಪಡೆದು ಸರ್ಕಾರಿ ಸೇವೆ(Government)ಗಳನ್ನು ಪಡೆಯುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಒಂದು ವೇಳೆ ಆರ್ಥಿಕವಾಗಿ ಸದೃಢರು ಹಾಗೂ ಅಧಿಕಾರಿ/ ನೌಕರರು ಮತ್ತು ಅವರ ಅವಲಂಬಿತ ಕುಟುಂಬ ಸದಸ್ಯರು ಕಾರ್ಡ್‌ ಹೊಂದಿರುವ ಬಗ್ಗೆ ದೂರುಗಳು ಸ್ವೀಕೃತವಾಗಿದ್ದಲ್ಲಿ ಅಂತಹ ಅಧಿಕಾರಿ/ನೌಕರರ ವಿರುದ್ದ ಶಿಸ್ತು ಕ್ರಮ ಮತ್ತು ಕ್ರಿಮಿನಲ್ ಮೊಕದ್ದಮೆ ಹೂಡಿ ಸರ್ಕಾರಕ್ಕೆ ಉಂಟಾಗಿರುವ ನಷ್ಟವನ್ನು ವಸೂಲು ಮಾಡಲು ಕ್ರಮ ಕೈಗೊಳ್ಳಲಾಗುತ್ತದೆ.

H Vishwanath: 'ನಾನು-ಹೊರಟ್ಟಿ ಮಂತ್ರಿಯಾಗಿದ್ದರೆ ಮೈತ್ರಿ ಸರ್ಕಾರ ಪತನವಾಗುತ್ತಿರಲಿಲ್ಲ'

ಬಿಪಿಎಲ್ ಕಾರ್ಡ್ ಬಡತನ ರೇಖೆಗಿಂತ ಕೆಳಗಿರುವ ಬಡವರಿಗೆ ನೀಡುವ ಸೌಲಭ್ಯವಾಗಿದ್ದು, ಇದನ್ನು ಸರ್ಕಾರಿ ನೌಕರರು ಮತ್ತು ಆರ್ಥಿಕ ಸದೃಢರು ಉಪಯೋಗಿಸಿಕೊಳ್ಳುವುದು ಕಾನೂನು ಬಾಹಿರವಾಗಿದೆ ಎಂದು ತಿಳಿಸಲಾಗಿದೆ.

Valmiki Seer: ಸತ್ತರೇ ಇಲ್ಲೇ ಸಾಯ್ತೇನೆ ಎಂದು ಸಿಎಂ ಮುಂದೆಯೇ ಹೇಳಿದ ವಾಲ್ಮೀಕಿ ಶ್ರೀ..!

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News