ರಾಮೇಶ್ವರಂ ಕೆಫೆ ಸ್ಫೋಟದ ಬಗ್ಗೆ ತನಿಖೆ ಪ್ರಗತಿಯಲ್ಲಿದೆ, ಆತಂಕ ಬೇಡ: ಡಿಸಿಎಂ ಡಿ.ಕೆ.ಶಿವಕುಮಾರ್

Rameshwaram Cafe Blast: ಬೆಂಗಳೂರಿನ ವೈಟ್‌ಫೀಲ್ಡ್ ಬಳಿಯ ಬ್ರೂಕ್‌ಫೀಲ್ಡ್‌ನ ರಾಮೇಶ್ವರಂ ಕೆಫೆಯಲ್ಲಿ ಶನಿವಾರ ಭಾರೀ ಸ್ಫೋಟ ಸಂಭವಿಸಿದ್ದು, ಮೂವರು ಸಿಬ್ಬಂದಿ ಸೇರಿದಂತೆ 9 ಮಂದಿ ಗಾಯಗೊಂಡಿದ್ದಾರೆ.

Written by - Prashobh Devanahalli | Edited by - Puttaraj K Alur | Last Updated : Mar 1, 2024, 05:51 PM IST
  • ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿನ ಸ್ಫೋಟದ ಬಗ್ಗೆ ಅಧಿಕಾರಿಗಳು ತನಿಖೆ ಮಾಡುತ್ತಿದ್ದಾರೆ
  • ಈ ಬಗ್ಗೆ ಬೆಂಗಳೂರಿನ ಯಾರೂ ಆತಂಕ ಪಡುವ ಅಗತ್ಯವಿಲ್ಲವೆಂದ ಡಿಸಿಎಂ ಡಿ.ಕೆ.ಶಿವಕುಮಾರ್‌
  • ಇದು ವ್ಯಾಪಾರದ ವೈರಿಗಳೇ ಮಾಡಿದ್ದೇ ಅಥವಾ ಬೇರೆ ಉದ್ದೇಶದಿಂದ ಮಾಡಿದ್ದಾರೆಯೇ ಎಂಬುದರ ತನಿಖೆ
ರಾಮೇಶ್ವರಂ ಕೆಫೆ ಸ್ಫೋಟದ ಬಗ್ಗೆ ತನಿಖೆ ಪ್ರಗತಿಯಲ್ಲಿದೆ, ಆತಂಕ ಬೇಡ: ಡಿಸಿಎಂ ಡಿ.ಕೆ.ಶಿವಕುಮಾರ್ title=
ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ!

ತುಮಕೂರು (ಕುಣಿಗಲ್): ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿನ ಸ್ಫೋಟದ ಬಗ್ಗೆ ಅಧಿಕಾರಿಗಳು ತನಿಖೆ ಮಾಡುತ್ತಿದ್ದಾರೆ. ಈ ಬಗ್ಗೆ ಬೆಂಗಳೂರಿನ ಯಾರೂ ಸಹ ಆತಂಕ ಪಡುವ ಅಗತ್ಯವಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. 

ತುಮಕೂರು ಜಿಲ್ಲೆಯ ಕುಣಿಗಲ್‌ನಲ್ಲಿ ಶುಕ್ರವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ʼಈ ಸ್ಫೋಟವನ್ನು ಯಾರು, ಯಾವ ಕಾರಣಕ್ಕೆ ಮಾಡಿದ್ದಾರೆ. ಇದು ವ್ಯಾಪಾರದ ವೈರಿಗಳೇ ಮಾಡಿದ್ದೇ ಅಥವಾ ಬೇರೆ ಉದ್ದೇಶದಿಂದ ಮಾಡಿದ್ದಾರೆಯೇ ಎಂಬುದರ ಬಗ್ಗೆ ಅಧಿಕಾರಿಗಳು ತನಿಖೆ ಮಾಡುತ್ತಿದ್ದಾರೆ. 

ಇದನ್ನೂ ಓದಿ: ಲೋಕಸಭೆಯಲ್ಲಿ ಗೆಲ್ಲಲು ಬಿಜೆಪಿ ಭರ್ಜರಿ ತಯಾರಿ

ರಾಮೇಶ್ವರಂ ಕೆಫೆ ಸುತ್ತಮುತ್ತಲ ಪ್ರದೇಶದಲ್ಲಿರುವ ಸಿಸಿಟಿವಿ ಕ್ಯಾಮೆರಾಗಳ ವಿಡಿಯೋ ಇದೆ. ಸುಮಾರು 2 ಕಿಮೀ ವ್ಯಾಪ್ತಿಯಲ್ಲಿ ಯಾರು ಬಂದು ಹೋಗಿದ್ದಾರೆ ಎಂಬ ಬಗ್ಗೆ ಪರಿಶೀಲನೆ ನಡೆದಿದೆ. ಸದ್ಯಕ್ಕೆ ಯಾರಿಗೂ ತೊಂದರೆ ಆಗಿಲ್ಲ. ಈ ಬಗ್ಗೆ ಬೆಂಗಳೂರಿನಲ್ಲಿ ಯಾರೂ ಆತಂಕ ಪಡುವ ಅಗತ್ಯವಿಲ್ಲ. ಕೆಲವರು ಶಾಂತಿ ಕದಡಲು ಪ್ರಯತ್ನ ಮಾಡುತ್ತಿದ್ದಾರೆ. ನಾವು ರಕ್ಷಣೆ ನೀಡುತ್ತೇವೆ ಎಂದು ಅವರು ಹೇಳಿದ್ದಾರೆ. .

ಈ ಸ್ಫೋಟದಲ್ಲಿ ಐಇಡಿ ಬಳಸಲಾಗಿದೆಯೇ? ಎಂಬುದರ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಶಿವಕುಮಾರ್, "ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆದು ನಂತರ ಪ್ರತಿಕ್ರಿಯೆ ನೀಡುತ್ತೇನೆ" ಎಂದು ತಿಳಿಸಿದರು.

ಇದನ್ನೂ ಓದಿ: ಜಾತಿ ಸಮೀಕ್ಷೆ ವರದಿ ಸ್ವೀಕಾರ ಸಮಾಜದಲ್ಲಿ ಅಶಾಂತಿಗೆ ಕಾರಣವಾಗಿದೆ : ಬಸವರಾಜ ಬೊಮ್ಮಾಯಿ

ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ!

ವೈಟ್‌ಫೀಲ್ಡ್ ಬಳಿಯ ಬ್ರೂಕ್‌ಫೀಲ್ಡ್‌ನ ರಾಮೇಶ್ವರಂ ಕೆಫೆಯಲ್ಲಿ ಶನಿವಾರ ಭಾರೀ ಸ್ಫೋಟ ಸಂಭವಿಸಿದ್ದು, ಮೂವರು ಸಿಬ್ಬಂದಿ ಸೇರಿದಂತೆ 9 ಮಂದಿ ಗಾಯಗೊಂಡಿದ್ದಾರೆ. ಕೈತೊಳೆಯುವ ಜಾಗದಲ್ಲಿ ಸ್ಫೋಟ ಸಂಭವಿಸಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಈಗಾಗಲೇ ವಿಧಿ ವಿಜ್ಞಾನ ಪ್ರಯೋಗಾಲಯ ಅಧಿಕಾರಿಗಳ ತಂಡ, ಶ್ವಾನದಳ ಸ್ಥಳಕ್ಕೆ ಭೇಟಿ ನೀಡಿದೆ. ಡಿಜಿಪಿ ಅಲೋಕ್ ಮೋಹನ್ ಸಹ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News