ವಿವಿಧ ಯೋಜನೆಗಳಡಿ ನಿರುದ್ಯೋಗಿ ಯುವಕ/ಯುವತಿಯರಿಗೆ ತರಬೇತಿಗೆ ಅರ್ಜಿ ಆಹ್ವಾನ

 ಕೊಪ್ಪಳ ತಾಲ್ಲೂಕಿನ ದದೇಗಲ್ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದಿಂದ ಉದ್ಯಮ ಶೀಲತೆ, ಕೌಶಲ್ಯ ಅಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಮುಖ್ಯಮಂತ್ರಿ ಕೌಶಲ್ಯ ಕರ್ನಾಟಕ ಯೋಜನೆ, ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆ ಅಡಿಯಲ್ಲಿ ವಿವಿಧ ಕೊರ್ಸ್ಗಳ ತರಬೇತಿಗಾಗಿ ನಿರುದ್ಯೋಗಿ ಯುವಕ/ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.

Written by - Zee Kannada News Desk | Last Updated : Feb 9, 2022, 10:40 PM IST
  • ಹೆಚ್ಚಿನ ಮಾಹಿತಿಗಾಗಿ ದೂ.ಸಂ.9902556110/9945846240 ಗೆ ಸಂಪರ್ಕಿಸಬಹುದು ಎಂದು ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿವಿಧ ಯೋಜನೆಗಳಡಿ ನಿರುದ್ಯೋಗಿ ಯುವಕ/ಯುವತಿಯರಿಗೆ ತರಬೇತಿಗೆ ಅರ್ಜಿ ಆಹ್ವಾನ title=

ಬೆಂಗಳೂರು: ಕೊಪ್ಪಳ ತಾಲ್ಲೂಕಿನ ದದೇಗಲ್ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದಿಂದ ಉದ್ಯಮ ಶೀಲತೆ, ಕೌಶಲ್ಯ ಅಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಮುಖ್ಯಮಂತ್ರಿ ಕೌಶಲ್ಯ ಕರ್ನಾಟಕ ಯೋಜನೆ, ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆ ಅಡಿಯಲ್ಲಿ ವಿವಿಧ ಕೊರ್ಸ್ಗಳ ತರಬೇತಿಗಾಗಿ ನಿರುದ್ಯೋಗಿ ಯುವಕ/ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.

ಇದನ್ನೂ ಓದಿ: ನಿರುದ್ಯೋಗ, ಸಾಲದ ಸಮಸ್ಯೆ: 2018-20ರಲ್ಲಿ ಎಷ್ಟು ಭಾರತೀಯರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಗೊತ್ತಾ..?

ಎಸ್‌ಎಸ್‌ಎಲ್‌ಸಿ, ಐಟಿಐ, ಡಿಪ್ಲೋಮಾ, ಬಿಇ, ಮುಗಿಸಿರುವ ವಿದ್ಯಾರ್ಥಿಗಳಿಗೆ ಟರ್ನರ್, ಮಿಲ್ಲರ್, ಗ್ರೆಂಡರ್, ಸಿಎನ್‌ಸಿ, ಟೂಲ್ ರೂಮ್ ಮೆಕ್ಯಾನಿಷ್ಟ್, ಡಿಸೈನ್ ಸಾಫ್ಟ್ವೇರ್(ಮೆಕ್ಯಾನಿಕಲ್) ಮತ್ತು ಡಾಟಾ ಎಂಟ್ರಿ ಆಪರೇಟರ್ ಕೋರ್ಸ್ಗಳು ಲಭ್ಯವಿದ್ದು, ಆಸಕ್ತ ನಿರುದ್ಯೋಗಿ ಯುವಕ ಯುವತಿಯರು ತರಬೇತಿಗೆ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: ವಂಶದ ರಾಜಕಾರಣ ಪ್ರಜಾಪ್ರಭುತ್ವದ ದೊಡ್ಡ ಶತ್ರು-ಪ್ರಧಾನಿ ಮೋದಿ

ಅರ್ಜಿಯನ್ನು ಪ್ರತಿ ತಿಂಗಳ ಕೊನೆಯ ವಾರದ ಮುಕ್ತಾಯದ ಒಳಗಾಗಿ ಕಛೇರಿಗೆ ಸಲ್ಲಿಸಬಹುದಾಗಿದೆ.ತಿಂಗಳ ಮೊದಲ ವಾರದಲ್ಲಿ ತರಬೇತಿಗಳು ಆರಂಭಗೊಳ್ಳುತ್ತವೆ.ತರಬೇತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಯೋಜನೆ ಅನುಸಾರ ಪ್ರಮಾಣ ಪತ್ರ ನೀಡಲಾಗುವುದು ಮತ್ತು ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆ ಅಡಿಯಲ್ಲಿ ತರಬೇತಿ ಹೊಂದುವ ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳಿಗೆ ಶಿಷ್ಯ ವೇತನ ನೀಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ದೂ.ಸಂ.9902556110/9945846240 ಗೆ ಸಂಪರ್ಕಿಸಬಹುದು ಎಂದು ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News