ಉಚಿತ ಕುರಿ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಿಂದ ಗ್ರಾಮೀಣ ಭಾಗದ ಆಸಕ್ತರಿಗೆ 10 ದಿನಗಳ ಉಚಿತ ಕುರಿ ಸಾಕಾಣಿಕೆ ತರಬೇತಿ (Sheep Farming) ಯನ್ನು ನೀಡಲಾಗುತ್ತಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.

Written by - Zee Kannada News Desk | Last Updated : Mar 3, 2022, 12:17 AM IST
  • -ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 18 ರಿಂದ 45 ವರ್ಷ ಒಳಗಿನವರಾಗಿರಬೇಕು.
  • -ಕನಿಷ್ಠ 8 ನೇ ತರಗತಿ ಪಾಸಾಗಿರಬೇಕು.
  • -ಕೊಪ್ಪಳ ಜಿಲ್ಲೆಯ ಗ್ರಾಮೀಣ ಭಾಗದವರಾಗಿರಬೇಕು.
ಉಚಿತ ಕುರಿ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ title=

ಕೊಪ್ಪಳ : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಿಂದ ಗ್ರಾಮೀಣ ಭಾಗದ ಆಸಕ್ತರಿಗೆ 10 ದಿನಗಳ ಉಚಿತ ಕುರಿ ಸಾಕಾಣಿಕೆ ತರಬೇತಿ (Sheep Farming) ಯನ್ನು ನೀಡಲಾಗುತ್ತಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಇದನ್ನೂ ಓದಿ: ಭಾರತದ ಮಾರುಕಟ್ಟೆಗೆ ಲಗ್ಗೆ ಇಟ್ಟ OnePlus Nord 2 5G...!

ಯಾರೆಲ್ಲಾ ಅರ್ಜಿ ಸಲ್ಲಿಸಬಹುದು?

-ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 18 ರಿಂದ 45 ವರ್ಷ ಒಳಗಿನವರಾಗಿರಬೇಕು. 

-ಕನಿಷ್ಠ 8 ನೇ ತರಗತಿ ಪಾಸಾಗಿರಬೇಕು. 

-ಕೊಪ್ಪಳ ಜಿಲ್ಲೆಯ ಗ್ರಾಮೀಣ ಭಾಗದವರಾಗಿರಬೇಕು.

-ಸ್ವಯಂ ಉದ್ಯೋಗದಲ್ಲಿ ಆಸಕ್ತಿ ಹೊಂದಿರಬೇಕು ಮತ್ತು ಅನುಭವ ಇದ್ದವರಿಗೆ ಆದ್ಯತೆ ನೀಡಲಾಗುವುದು.

ಇದನ್ನೂ ಓದಿ: ಕನ್ನಡಿಗ ಕೆ.ಎಲ್.ರಾಹುಲ್ ಪಾಕ್ ಗೆ ಅಪಾಯಕಾರಿಯಾಗಲಿದ್ದಾರೆ ಎಂದ ಮ್ಯಾಥ್ಯೂ ಹೇಡನ್

ಅರ್ಜಿಯನ್ನು ನಿರ್ದೇಶಕರು, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ, ಜಿಲ್ಲಾ ಕೈಗಾರಿಕಾ ಕೇಂದ್ರ ಆವರಣ, ಅಶೋಕ ಸರ್ಕಲ್ ಹತ್ತಿರ, ಕೊಪ್ಪಳ ಈ ವಿಳಾಸಕ್ಕೆ ಮಾ.13 ರ ಒಳಗಾಗಿ ಸಲ್ಲಿಸಬೇಕು.ಮಾ.14 ರಂದು ಬೆಳಿಗ್ಗೆ 10.30 ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು ಹಾಗೂ ಮಾ.15 ರಿಂದ ತರಬೇತಿಗಳು ಪ್ರಾರಂಭವಾಗುತ್ತವೆ. ತರಬೇತಿಯಲ್ಲಿ ಊಟ ಮತ್ತು ವಸತಿಯನ್ನು ಉಚಿತವಾಗಿ ನೀಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ದೂ.ಸಂ.08539-230138 ಸಂಪರ್ಕಿಸಬಹುದು ಎಂದು ಕೊಪ್ಪಳ ಎಸ್‌ಬಿಐ ಆರ್‌ಸೆಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Trending News