Corona Vaccine ವಿಷಯದಲ್ಲೂ ಗುಜರಾತ್-ಕರ್ನಾಟಕ ನಡುವೆ ತಾರತಮ್ಯವೇ? ಎಚ್ ಡಿಕೆ ಪ್ರಶ್ನೆ

ಕರ್ನಾಟಕ ಮತ್ತು ಕನ್ನಡಿಗರಿಗೆ ತಾರತಮ್ಯವಾಗುತ್ತಿರುವುದು, ಗುಜರಾತ್‌ ಮೇಲೆ ಅತಿಯಾದ ಪ್ರೀತಿ ತೋರುತ್ತಿರುವುದು ಕೇಂದ್ರದ ಆರೋಗ್ಯ ಇಲಾಖೆ ನೀಡಿರುವ ಅಂಕಿ ಅಂಶಗಳಿಂದಲೇ ಬಹಿರಂಗವಾಗಿದೆ. ಈ ಸಂಕಷ್ಟದ ಪರಿಸ್ಥಿತಿಯಲ್ಲೂ ಕೇಂದ್ರದಿಂದ ಆಗುತ್ತಿರುವ ಈ ತಾರತಮ್ಯ ಮನುಷ್ಯತ್ವ ವಿರೋಧಿ.

Written by - Yashaswini V | Last Updated : May 6, 2021, 10:23 AM IST
  • ಕೊರೋನಾ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರದ ವೈಫಲ್ಯವನ್ನು ಬಿಡಿಸಿಟ್ಟಿರುವ ಮಾಜಿ‌ ಸಿಎಂ ಕುಮಾರಸ್ವಾಮಿ
  • ಕೇಂದ್ರ ಸರ್ಕಾರದ ತಾರತಮ್ಯದ ವಿರುದ್ಧ ಸೊಲ್ಲೆತ್ತದ ರಾಜ್ಯದ ಸಂಸದರ ವಿರುದ್ಧ ಆಕ್ರೋಶ
  • ಕೇಂದ್ರದ ತಾರತಮ್ಯದ ಜೊತೆಗೆ ವೈಫಲ್ಯವನ್ನೂ ರಾಜ್ಯದ ಜನರೂ ಪ್ರಶ್ನೆ ಮಾಡಬೇಕಾಗಿದೆ
Corona Vaccine ವಿಷಯದಲ್ಲೂ ಗುಜರಾತ್-ಕರ್ನಾಟಕ ನಡುವೆ ತಾರತಮ್ಯವೇ? ಎಚ್ ಡಿಕೆ ಪ್ರಶ್ನೆ title=
HDK Tweet over Corona Vaccine

ಬೆಂಗಳೂರು: ಮೇ 1ರಿಂದ 3ನೇ ಹಂತದಲ್ಲಿ 18ರಿಂದ 44 ವಯೋಮಾನದವರಿಗೆ ಕೊರೋನಾ ಲಸಿಕೆ (Corona Vaccine) ಹಾಕುವ ಅಭಿಯಾನವನ್ನು ಯಶಸ್ವಿಯಾಗಿ ನಡೆಸಲು ವಿಫಲವಾಗಿರುವ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಚಾಟಿ ಬೀಸಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ (Former Chief Minister HD Kumaraswamy) ಕೊರೋನಾ ಲಸಿಕೆ ವಿಷಯದಲ್ಲೂ ಗುಜರಾತ್-ಕರ್ನಾಟಕ ನಡುವೆ ತಾರತಮ್ಯವೇ? ಎಂದು ಪ್ರಶ್ನಿಸಿದ್ದಾರೆ.

ಈ ಬಗ್ಗೆ ನಾಲ್ಕು ಟ್ವೀಟ್ (Tweet) ಮಾಡಿರುವ ಎಚ್.ಡಿ. ಕುಮಾರಸ್ವಾಮಿ (HD Kumaraswamy), ತಮ್ಮ ಮೊದಲ ಟ್ವೀಟ್ ನಲ್ಲಿ '18-44 ವಯೋಮಾನದವರಿಗೆ ಲಸಿಕೆ ಹಾಕುವ ಅಭಿಯಾನ ಮೇ 1ರಿಂದ ಆರಂಭವಾಗಿದೆ. ದೇಶದಲ್ಲಿ ಮಂಗಳವಾರದ ಹೊತ್ತಿಗೆ 6 ಲಕ್ಷಕ್ಕೂ ಅಧಿಕ ಮಂದಿಗೆ ಲಸಿಕೆ ನೀಡಲಾಗಿದೆ. ಈ ಪೈಕಿ ಗುಜರಾತ್‌ನಲ್ಲಿ 1,61,000 ಜನರಿಗೆ ಲಸಿಕೆ ಹಾಕಲಾಗಿದ್ದರೆ, ಕರ್ನಾಟಕದಲ್ಲಿ ಕೇವಲ 3475 ಜನರಿಗೆ ಮಾತ್ರ ಲಸಿಕೆ ನೀಡಲಾಗಿದೆ. ಇದು ಕೇಂದ್ರದ ತಾರತಮ್ಯವೋ, ರಾಜ್ಯದ ವೈಫಲ್ಯವೋ?' ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ- ಒಂದೇ ದಿನದಲ್ಲಿ ಕರ್ನಾಟಕದಲ್ಲಿ 50,112 ಕೊರೊನಾ ಪ್ರಕರಣ, 346 ಜನರ ಸಾವು

ಇನ್ನೊಂದು ಟ್ವೀಟ್ ನಲ್ಲಿ 'ಕರ್ನಾಟಕ ಮತ್ತು ಕನ್ನಡಿಗರಿಗೆ ತಾರತಮ್ಯವಾಗುತ್ತಿರುವುದು, ಗುಜರಾತ್‌ ಮೇಲೆ ಅತಿಯಾದ ಪ್ರೀತಿ ತೋರುತ್ತಿರುವುದು ಕೇಂದ್ರದ ಆರೋಗ್ಯ ಇಲಾಖೆ ನೀಡಿರುವ ಅಂಕಿ ಅಂಶಗಳಿಂದಲೇ ಬಹಿರಂಗವಾಗಿದೆ. ಈ ಸಂಕಷ್ಟದ ಪರಿಸ್ಥಿತಿಯಲ್ಲೂ ಕೇಂದ್ರದಿಂದ ಆಗುತ್ತಿರುವ ಈ ತಾರತಮ್ಯ ಮನುಷ್ಯತ್ವ ವಿರೋಧಿ. ಕನ್ನಡಿಗರಿಗಾಗಿ ಸೊಲ್ಲೆತ್ತದ ರಾಜ್ಯ ಸರ್ಕಾರದ ಪರಮ ವೈಫಲ್ಯ' ಎಂದು ಕಿಡಿಕಾರಿದ್ದಾರೆ. 

ಮತ್ತೊಂದು ಟ್ವೀಟ್ ನಲ್ಲಿ‌ 'ರಾಜ್ಯಕ್ಕೆ ಕೇಂದ್ರ ಸರ್ಕಾರ (Central Government) ಲಸಿಕೆ ನೀಡುತ್ತಿಲ್ಲವೇ? ರಾಜ್ಯಕ್ಕೆ ಏನು ಬೇಕೋ ಅದನ್ನು ಕೇಳಿ ಪಡೆಯಲು ರಾಜ್ಯ ಸರ್ಕಾರಕ್ಕೆ ಶಕ್ತಿ ಇಲ್ಲವೇ? ಇತರ ರಾಜ್ಯಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಿರುವುದನ್ನು ಪ್ರಶ್ನಿಸಲು ನಮ್ಮವರಿಗೆ ಬಾಯಿಲ್ಲವೇ? ಇದೆಲ್ಲ ಗಮನಿಸುತ್ತಿದ್ದರೆ, ಕನ್ನಡರಿಗರನ್ನು ಈ ಸರ್ಕಾರಗಳು ಹಣೆಬರಹಕ್ಕೆ ಬಿಟ್ಟಂತೆ ಕಾಣುತ್ತಿದೆ' ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

ಇದನ್ನೂ ಓದಿ- Covid precautions: ಕರೋನಾ ತಪ್ಪಿಸಲು ಆಯುಷ್ ಸಚಿವಾಲಯದ ಈ ಮುನ್ನೆಚ್ಚರಿಕಾ ಕ್ರಮ ಅನುಸರಿಸಿ

ಮಗದೊಂದು ಟ್ವೀಟ್ ನಲ್ಲಿ 'ರಾಜ್ಯದ ಬಿಜೆಪಿ ಸರ್ಕಾರ, ಸಂಸದರು ಮೊದಲು ಈ ತಾರತಮ್ಯದ ವಿರುದ್ಧ ಹೋರಾಡಬೇಕು. ಜನರ ಜೀವ ಉಳಿಸಲು ಬೇಕಾಗಿರುವುದನ್ನು ಕೇಂದ್ರದಿಂದ ಕೇಳಿ ಪಡೆದುಕೊಳ್ಳಬೇಕಾದದ್ದು ಈ ಹೊತ್ತಿನ ಅಗತ್ಯ. ಲಸಿಕೆ ಅಭಿಯಾನದಲ್ಲಿ ಆಗುತ್ತಿರುವ ಈ ತಾರತಮ್ಯ, ವೈಫಲ್ಯಗಳನ್ನು ರಾಜ್ಯದ ಜನರೂ ಪ್ರಶ್ನೆ ಮಾಡಬೇಕಾಗಿದೆ. ಇಲ್ಲವಾದಲ್ಲಿ ಅಪಾಯದ ದಿನಗಳು ಮುಂದಿವೆ' ಎಂದು ಎಚ್.ಡಿ. ಕುಮಾರಸ್ವಾಮಿ ಎಚ್ಚರಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News