ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಇದೆಯೇನೋ ಎಂಬಂತೆ ಭಾಸವಾಗುತ್ತಿದೆ; ಸಿದ್ದರಾಮಯ್ಯ

ಪ್ರಜಾಪ್ರಭುತ್ವ, ಸಂವಿಧಾನದಲ್ಲಿ ನಂಬಿಕೆಯಿಲ್ಲದವರು ಆಡಳಿತದ ಚುಕ್ಕಾಣಿ ಹಿಡಿದಾಗ ಮಾತ್ರ ಇಂತಹ ಪ್ರಕ್ಷುಬ್ಧ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಈ ಸಂದಿಗ್ಧ ಪರಿಸ್ಥಿತಿಯಿಂದ ದೇಶವನ್ನು ಹೊರತರುವ ಹೊಣೆ ನಮ್ಮೆಲ್ಲರ ಮೇಲಿದೆ.

Last Updated : Aug 15, 2019, 12:53 PM IST
ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಇದೆಯೇನೋ ಎಂಬಂತೆ ಭಾಸವಾಗುತ್ತಿದೆ; ಸಿದ್ದರಾಮಯ್ಯ title=

ಬೆಂಗಳೂರು: ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಇದೆ ಎಂಬಂತೆ ಭಾಸವಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆತಂಕ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಸಿದ್ದರಾಮಯ್ಯ, ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಇದೆ ಎಂಬಂತೆ ಭಾಸವಾಗುತ್ತಿದೆ. ಪ್ರಜಾಪ್ರಭುತ್ವ, ಸಂವಿಧಾನದಲ್ಲಿ ನಂಬಿಕೆಯಿಲ್ಲದವರು ಆಡಳಿತದ ಚುಕ್ಕಾಣಿ ಹಿಡಿದಾಗ ಮಾತ್ರ ಇಂತಹ ಪ್ರಕ್ಷುಬ್ಧ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಈ ಸಂದಿಗ್ಧ ಪರಿಸ್ಥಿತಿಯಿಂದ ದೇಶವನ್ನು ಹೊರತರುವ ಹೊಣೆ ನಮ್ಮೆಲ್ಲರ ಮೇಲಿದೆ ಎಂದು ಜನತೆಗೆ ಕರೆ ನೀಡಿದ್ದಾರೆ.

ದೇಶದ ಸ್ವಾತಂತ್ರ್ಯಕ್ಕಾಗಿ ಲಕ್ಷಾಂತರ ಮಂದಿ ಪ್ರಾಣಾರ್ಪಣೆ ಮಾಡಿದ್ದಾರೆ, ವರ್ಷಾನುಗಟ್ಟಲೆ ಸೆರೆವಾಸ ಅನುಭವಿಸಿದ್ದಾರೆ. ಮಹಾತ್ಮ ಗಾಂಧಿ, ಲಾಲ್ ಬಹದ್ದೂರ್ ಶಾಸ್ತ್ರಿ, ಸರ್ದಾರ್ ವಲ್ಲಭಭಾಯಿ ಪಟೇಲ್, ಜವಾಹರಲಾಲ್ ನೆಹರು, ಸುಭಾಷ್ ಚಂದ್ರ ಬೋಸ್ ಇವರಾರು  ಕೂಡ ಸ್ವಾರ್ಥಕ್ಕಾಗಿ ಹೋರಾಡಿದವರಲ್ಲ. 

ಸ್ವಾತಂತ್ರ್ಯಕ್ಕಾಗಿ ಬಲಿದಾನಗೈದ ಎಲ್ಲ ಹುತಾತ್ಮರನ್ನು ಸ್ಮರಿಸುತ್ತಾ ದೇಶದ ಐಕ್ಯತೆ, ಸಾರ್ವಭೌಮತೆಯನ್ನು ಎತ್ತಿಹಿಡಿಯುವ ಜೊತೆಗೆ ಜಾತ್ಯಾತೀತ ಹಾಗೂ ಪರಧರ್ಮ ಸಹಿಷ್ಣು ಮನೋಭಾವನೆಯನ್ನು ಬೆಳೆಸಿಕೊಳ್ಳುವ ಸಂಕಲ್ಪ ಮಾಡಬೇಕಾಗಿದೆ. ಆಗ ಮಾತ್ರ ನಮಗೆ ದೊರೆತ ಸ್ವತಂತ್ರ ಸಾರ್ಥಕವಾಗುತ್ತದೆ ಎಂಬುದು ನನ್ನ ಭಾವನೆ ಎಂದಿದ್ದಾರೆ.

Trending News