ವೈದ್ಯರು ಸಂದರ್ಭ ಬಳಸಿಕೊಂಡು ಮುಷ್ಕರ ಹೂಡುವುದು ಮಾನವೀಯತೆಯಲ್ಲ: ಸಚಿವ ಸುಧಾಕರ್

ವೇತನ ಪರಿಷ್ಕರಣೆ ವೈದ್ಯರ ಪ್ರಮುಖ ಬೇಡಿಕೆ. ಈ ಸಂಬಂಧ ಈಗಾಗಲೇ ನಾಲ್ಕೈದು ಬಾರಿ ಅವರೊಂದಿಗೆ ಸಭೆ ನಡೆಸಿದ್ದೇವೆ. ಸಭೆಯ ನಿರ್ಣಯಕ್ಕೆ ಬಹುಪಾಲು ಒಪ್ಪಿದ್ದಾರೆ. 

Last Updated : Sep 18, 2020, 04:25 PM IST
  • ವೇತನ ಪರಿಷ್ಕರಣೆ ವೈದ್ಯರ ಪ್ರಮುಖ ಬೇಡಿಕೆ.
  • ಈ ಸಂಬಂಧ ಈಗಾಗಲೇ ನಾಲ್ಕೈದು ಬಾರಿ ಅವರೊಂದಿಗೆ ಸಭೆ ನಡೆದಿದೆ.
  • ಮುಷ್ಕರ ನಡೆಸುತ್ತೇವೆ ಎನ್ನುವ ಹಠ ಸರಿಯಲ್ಲ.
ವೈದ್ಯರು ಸಂದರ್ಭ ಬಳಸಿಕೊಂಡು ಮುಷ್ಕರ ಹೂಡುವುದು ಮಾನವೀಯತೆಯಲ್ಲ: ಸಚಿವ ಸುಧಾಕರ್ title=

ಬೆಂಗಳೂರು: ಕೊರೋನದಂಥ ಸಂದರ್ಭವನ್ನು  ಬಳಸಿಕೊಂಡು ವೈದ್ಯರು  ಮುಷ್ಕರ ಹೂಡುವುದು ಮಾನವೀಯತೆಯಲ್ಲ. ಅವರು ಮುಷ್ಕರ ಹಿಪಡೆಯುವ ವಿಶ್ವಾಸವಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್‌ (Dr K Sudhakar) ಹೇಳಿದರು.

ಕಾಡುಗೊಂಡನಹಳ್ಳಿಯಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್‌ ಮೆಡಿಕಲ್ ಕಾಲೇಜಿನಲ್ಲಿ ಕೋವಿಡ್‌ ಪರೀಕ್ಷಾ ಪ್ರಯೋಗಾಲಯ ಹಾಗೂ ಕೌಶಲ್ಯ ತರಬೇತಿ ಕೇಂದ್ರವನ್ನು ಶುಕ್ರವಾರ ಉದ್ಘಾಟಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ದುಬೈ ವಿಮಾನ ನಿಲ್ದಾಣದಲ್ಲಿ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನಗಳ ಹಾರಾಟಕ್ಕೆ ಬ್ರೇಕ್

ವೇತನ ಪರಿಷ್ಕರಣೆ ವೈದ್ಯರ ಪ್ರಮುಖ ಬೇಡಿಕೆ. ಈ ಸಂಬಂಧ ಈಗಾಗಲೇ ನಾಲ್ಕೈದು ಬಾರಿ ಅವರೊಂದಿಗೆ ಸಭೆ ನಡೆಸಿದ್ದೇವೆ. ಸಭೆಯ ನಿರ್ಣಯಕ್ಕೆ ಬಹುಪಾಲು ಒಪ್ಪಿದ್ದಾರೆ. ಆದರೂ ಮುಷ್ಕರ ನಡೆಸುತ್ತೇವೆ ಎನ್ನುವ ಹಠ ಸರಿಯಲ್ಲ.  ಕೊರೋನ ಸಂದರ್ಭದಲ್ಲಿ ವೈದ್ಯರ ಪಾತ್ರ ಮಹತ್ಚದ್ದು, ಇದನ್ನೇ ಬಂಡವಾಳ ಮಾಡಿಕೊಂಡು ಬೇಡಿಕೆ ಮುಂದಿಟ್ಟು ಮುಷ್ಕರ ಹೂಡುವುದು ಮಾನವೀಯತೆ ಅಲ್ಲ. ಇದು ಅವರ ವೃತ್ತಿಗೆ ಗೌರವ ತರುವುದಿಲ್ಲ. ವೈದ್ಯ ಸಂಘದ ಪದಾಧಿಕಾರಿಗಳು ಪ್ರಜ್ಞಾವಂತರು. ಅವರು ಮುಷ್ಕರ ಕೈ ಬಿಡುವ ವಿಶ್ವಾಸವಿದೆ ಎಂದು ಹೇಳಿದರು.

ದೇಶದಲ್ಲಿ ಮುಂದಿನ ವರ್ಷದ ಆರಂಭದ ವೇಳೆಗೆ ಕರೋನಾಗೆ ಲಸಿಕೆ- ಕೇಂದ್ರ ಸಚಿವ ಹರ್ಷವರ್ಧನ್

ಕರ್ನಾಟಕದಲ್ಲಿ ಕೊರೋನ (Corona) ನಿಯಂತ್ರಣದಲ್ಲಿದೆ. ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮಲ್ಲಿ ಕೊರೋನಾ ಪರೀಕ್ಷಾ ಪ್ರಮಾಣ ದಿನಕ್ಕೆ 75 ಸಾವಿರ ಇದೆ. ಇದರಿಂದ ಸೋಂಕು ಪ್ರಕರಣಗಳು ಹೆಚ್ಚೆನಿಸುತ್ತದೆ. ಇಷ್ಟು ದಿನ ಕೇರಳದಲ್ಲಿ ಟೆಸ್ಟ್ ಪ್ರಮಾಣ ಕಡಿಮೆ ಇದ್ದರಿಂದ ಅಲ್ಲಿ ಸೋಂಕು ಪ್ರಮಾಣವೂ ಕಡಿಮೆ ಇತ್ತು, ಈಗ ಟೆಸ್ಟ್ ಪ್ರಮಾಣ ಹೆಚ್ಚಿಸಿದ್ದರಿಂದ ಪ್ರಕರಣಗಳು ಹೆಚ್ಚಾಗುತ್ತಿದೆ. ಆದರೆ ಕರ್ನಾಟಕದಲ್ಲಿ ತಮಿಳುನಾಡು, ಆಂಧ್ರಕ್ಕೆ ಹೋಲಿಸಿದರೆ ಕೋರೋನ ನಿಯಂತ್ರಣದಲ್ಲಿದೆ ಎಂದರು.

ಐಸಿಯು ಬೆಡ್‌ಗಳ ಹೆಚ್ಚಳಕ್ಕೆ ಕ್ರಮ: ನಮ್ಮಲ್ಲಿ ಸಾಮಾನ್ಯ ಬೆಡ್‌ಗಳು ಹೆಚ್ಚಿವೆ. ಆದರೆ ಅಗತ್ಯವಿರುವುದು ವೆಂಟಿಲೇಟರ್ ಹಾಗೂ ಐಸಿಯೂ ಬೆಡ್‌ಗಳು. ಪ್ರಕರಣದ ತೀವ್ರತೆ ನೋಡಿಕೊಂಡು ಅವುಗಳ ಹೆಚ್ಚಳ ಮಾಡಲಿದ್ದೇವೆ ಎಂದರು. ನೆಲಮಂಗಲ ಬಳಿಯ ಅತಿ ದೊಡ್ಡ ಕೋವಿಡ್‌ ಕೇರ್‌ ಸೆಂಟರ್‌ ಮುಚ್ಚಿದ್ದರಿಂದ ಆತಂಕಕ್ಕೆ ಒಳಗಾಗುವ ಅವಶ್ಯಕತೆ ಇಲ್ಲ. ರೋಗ ಲಕ್ಷಣವಿಲ್ಲದೇ ಇರುವವರನ್ನು ಮನೆಯಲ್ಲಿಯೇ ಐಸೋಲೇಷನ್ ಮಾಡಿಸಲಾಗುತ್ತಿದೆ. ಅವಶ್ಯಕತೆ ಬಿದ್ದರೆ ಕೋವಿಡ್ ಕೇರ್‌ ಸೆಂಟರ್‌ ಅನ್ನು ಪುನಾರಾಂಭಿಸುತ್ತೇವೆ  ಎಂದು ಹೇಳಿದರು.
 

Trending News