ರಾಜ್ಯದಲ್ಲಿ ಸಂಪೂರ್ಣವಾಗಿ ಮದ್ಯ ನಿಷೇಧಿಸಲು ಸಾಧ್ಯವಿಲ್ಲ: ಸಿಎಂ ಕುಮಾರಸ್ವಾಮಿ

'ಬೆಂಗಳೂರು ಚಲೋ' ಮೂಲಕ ಮಧ್ಯ ನಿಷೇಧಕ್ಕೆ ಆಗ್ರಹಿಸಿ 2,500ಕ್ಕೂ ಅಧಿಕ ಮಹಿಳೆಯರು ನಗರದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. 

Last Updated : Jan 30, 2019, 01:11 PM IST
ರಾಜ್ಯದಲ್ಲಿ ಸಂಪೂರ್ಣವಾಗಿ ಮದ್ಯ ನಿಷೇಧಿಸಲು ಸಾಧ್ಯವಿಲ್ಲ: ಸಿಎಂ ಕುಮಾರಸ್ವಾಮಿ title=

ಬೆಂಗಳೂರು: ರಾಜ್ಯದಲ್ಲಿ ಸಂಪೂರ್ಣವಾಗಿ ಮದ್ಯ ನಿಷೇಧಿಸಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

'ಬೆಂಗಳೂರು ಚಲೋ' ಮೂಲಕ ಮಧ್ಯ ನಿಷೇಧಕ್ಕೆ ಆಗ್ರಹಿಸಿ 2,500ಕ್ಕೂ ಅಧಿಕ ಮಹಿಳೆಯರು ನಗರದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಬೆನ್ನಲೇ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಪ್ರತಿಕ್ರಿಯಿಸಿದ್ದು, ಮಧ್ಯ ರಾಜ್ಯದ ಪ್ರಮುಖ ಆದಾಯದ ಮೂಲವಾಗಿರುವುದರಿಂದ ಸಂಪೂರ್ಣವಾಗಿ ನಿಷೇಧಿಸಲು ಸಾಧ್ಯವಿಲ್ಲ. ಈ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದಿದ್ದಾರೆ.

ರಾಜ್ಯದಲ್ಲಿ ಮದ್ಯ ನಿಷೇಧಕ್ಕೆ ಆಗ್ರಹಿಸಿ 11 ದಿನಗಳ ಹಿಂದೆಯೇ ಚಿತ್ರದುರ್ಗದಿಂದ ಪಾದಯಾತ್ರೆ ಹಮ್ಮಿಕೊಂಡಿದ್ದು, ರಾಜ್ಯದ ನಾನಾ ಮೂಲೆಗಳಿಂದ ಮಹಿಳೆಯರು ಮತ್ತು ಪ್ರಗತಿಪರ ಸಂಘಟನೆಗಳು ಇಂದು ಬೆಂಗಳೂರಿಗೆ ತಲುಪಿವೆ. ಹೀಗಾಗಿ ರಾಜ್ಯ ರಾಜಧಾನಿಯಲ್ಲಿ ಮದ್ಯ ನಿಷೇಧಕ್ಕೆ ಒತ್ತಾಯಿಸಿ ಮಹಿಳೆಯರು ಹಮ್ಮಿಕೊಂಡಿರುವ ಹೋರಾಟ ತೀವ್ರ ಸ್ವರೂಪ ಪಡೆದಿದೆ. 

Trending News