ಬಡವರು, ಮಧ್ಯಮವರ್ಗದವರ ಭವಿಷ್ಯ ಉಳಿಯಬೇಕಾದರೆ ಇದು ನಿರ್ಣಾಯಕ ಚುನಾವಣೆ, ಯೋಚಿಸಿ ನಿರ್ಧರಿಸಿ: ಸಿಎಂ ಕರೆ

ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ಇಡೀ ದೇಶದ ರೈತರ ಸಾಲ 76 ಸಾವಿರ ಕೋಟಿ ರೂಪಾಯಿಯನ್ನು ಒಂದೇ ಸಾರಿ ಮನ್ನಾ ಮಾಡಿದರು. ಮೋದಿಯವರು 15 ಲಕ್ಷ ಕೋಟಿ ಶ್ರೀಮಂತ ಉದ್ಯಮಿಗಳ ಸಾಲ ಮನ್ನಾ ಮಾಡಿದರು. ಹೀಗಾಗಿ ಮೋದಿಯವರು ರಾಜ್ಯದ, ದೇಶದ ಮಧ್ಯಮ ವರ್ಗ ಮತ್ತು ಬಡವರ ಕೈಗೆ ಖಾಲಿ ಚೊಂಬು ಕೊಟ್ಟರು: ಸಿಎಂ ಸಿದ್ದರಾಮಯ್ಯ 

Written by - Yashaswini V | Last Updated : Apr 22, 2024, 03:03 PM IST
  • ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸ್ತೀವಿ ಎಂದು ದೇಶದ ಯುವಕ/ ಯುವತಿಯರನ್ನು ನಂಬಿಸಿದರು.
  • ವಿದ್ಯಾವಂತರು ಡಬ್ಬಲ್ ಡಿಗ್ರಿ ಪಡೆದು ಉದ್ಯೋಗ ಕೊಡಿ ಎಂದರೆ ಹೋಗಿ ಪಕೋಡ ಮಾರಾಟ ಮಾಡಿ ಎನ್ನುತ್ತಿದ್ದಾರೆ.
  • ಇಂಥಾ ನಂಬಿಕೆ ದ್ರೋಹಗಳು ಪ್ರಧಾನಿ ಕುರ್ಚಿಗೆ ಘನತೆ ತರುತ್ತದೆಯೇ ಎಂದು ಪ್ರಶ್ನಿಸಿದರು.
ಬಡವರು, ಮಧ್ಯಮವರ್ಗದವರ ಭವಿಷ್ಯ ಉಳಿಯಬೇಕಾದರೆ ಇದು ನಿರ್ಣಾಯಕ ಚುನಾವಣೆ, ಯೋಚಿಸಿ ನಿರ್ಧರಿಸಿ: ಸಿಎಂ ಕರೆ  title=

Loksabha Elections:  ವಾಜಪೇಯಿಯವರ ಇಂಡಿಯಾ ಶೈನಿಂಗ್ ಎನ್ನುವ ಸುಳ್ಳು ಪ್ರಚಾರ ಸೋತ ಹಾಗೆಯೇ ಮೋದಿಯವರ ವಿಕಸಿತ ಭಾರತ ಎನ್ನುವ ಸುಳ್ಳಿನ ಪ್ರಚಾರಕ್ಕೂ ಸೋಲಾಗುತ್ತದೆ ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. 

ಚಿಕ್ಕಮಗಳೂರು-ಉಡುಪಿ ಲೋಕಸಭಾ ಕ್ಷೇತ್ರದಲ್ಲಿ (Chikmagalur-Udupi Lok Sabha Constituency) ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಬೃಹತ್ ಪ್ರಜಾಧ್ವನಿ-2 ಯಾತ್ರೆಯನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಹತ್ತತ್ತು ವರ್ಷ ಪ್ರಧಾನಿಯಾಗಿ ಮೋದಿಯವರು ಭಾರತೀಯರಿಗೆ ಸರಣಿ ಸುಳ್ಳುಗಳನ್ನು ನಂಬಿಸಿ ವಂಚಿಸಿದರು. ಪ್ರತಿಯೊಬ್ಬರ ಖಾತೆಗೆ 15 ಲಕ್ಷ ಹಾಕ್ತೀವಿ ಎಂದು ನಂಬಿಸಿದರು. ಈಗ ನಂಬಿಕೆ ದ್ರೋಹ ಆಗಿದೆ. 

ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸ್ತೀವಿ ಎಂದು ದೇಶದ ಯುವಕ/ ಯುವತಿಯರನ್ನು ನಂಬಿಸಿದರು. ವಿದ್ಯಾವಂತರು ಡಬ್ಬಲ್ ಡಿಗ್ರಿ ಪಡೆದು ಉದ್ಯೋಗ ಕೊಡಿ ಎಂದರೆ ಹೋಗಿ ಪಕೋಡ ಮಾರಾಟ ಮಾಡಿ ಎನ್ನುತ್ತಿದ್ದಾರೆ. ಇಂಥಾ ನಂಬಿಕೆ ದ್ರೋಹಗಳು ಪ್ರಧಾನಿ ಕುರ್ಚಿಗೆ ಘನತೆ ತರುತ್ತದೆಯೇ ಎಂದು ಪ್ರಶ್ನಿಸಿದರು. 

ರೈತರ ಆದಾಯ ದುಪ್ಪಟ್ಟು ಮಾಡುವುದಾಗಿ ನಂಬಿಸಿ ರೈತರ ಖರ್ಚು ಮೂರು ಪಟ್ಟು ಮಾಡಿದರು. ಇದು ದೇಶದ ಇಡಿ ದೇಶದ ರೈತ ಕುಲಕ್ಕೆ ಬಗೆದ ನಂಬಿಕೆ ದ್ರೋಹ ಅಲ್ಲವೇ ಎಂದು ಪ್ರಶ್ನಿಸಿದರು. 

ಇದನ್ನೂ ಓದಿ- 'ಮೇಕೆದಾಟು ಯೋಜನೆಗೆ ಅನುಮತಿ ಏಕೆ ಕೊಡುತ್ತಿಲ್ಲ ನರೇಂದ್ರ ಮೋದಿ ಅವರೇ?'- ಸಿಎಂ ಸಿದ್ದರಾಮಯ್ಯ

ಪೆಟ್ರೋಲ್, ಡೀಸೆಲ್, ಗ್ಯಾಸ್, ರಸಗೊಬ್ಬರ ಬೆಲೆ ಏರಿಕೆ ಸಂಪೂರ್ಣ ತಡೆಯುವುದಾಗಿ ನಂಬಿಸಿದರು. ಈಗ ಎಲ್ಲದರ ಬೆಲೆ ಆಕಾಶ ಮುಟ್ಟಿದೆ. ಇಂಥಾ ನಂಬಿಕೆ ದ್ರೋಹಗಳನ್ನು ಭಾರತೀಯರಿಗೆ ಬಗೆದಿದ್ದಾರಲ್ಲಾ ಇಂಥಾ ವ್ಯಕ್ತಿಯ ಮುಖ ನೋಡಿ ಮತ ಹಾಕಿದರೆ ನಿಮ್ಮ ಮತಕ್ಕೆ ಘನತೆ ಬರುತ್ತದಾ ಎಂದು ಸಿ‌ಎಂ ಸಿದ್ದರಾಮಯ್ಯ  (CM Siddaramaiah) ಪ್ರಶ್ನಿಸಿದರು. 

ದೇವೇಗೌಡರ ಸುಳ್ಳು ಕೇಳಿ ನನಗೇ ನಾಚಿಕೆ ಆಯ್ತು: 
ಮೋದಿಯವರ ಜತೆ ಪೈಪೋಟಿಗೆ ಬಿದ್ದವರಂತೆ ದೇವೇಗೌಡರು ಹೇಳಿದ ಸುಳ್ಳುಗಳನ್ನು ಕೇಳಿ ನನಗೇ ನಾಚಿಕೆ ಆಯ್ತು. ದೇವೇಗೌಡರು ಮೋದಿಯವರ ಮಟ್ಟಕ್ಕೆ ಇಳಿದು ಸುಳ್ಳು ಹೇಳಿದ್ರಲ್ಲಾ ಅಂತ ನನಗೇ ನಾಚಿಕೆ ಆಯ್ತು. 

ಮೋದಿಯವರು ರಾಜ್ಯದ ಜನತೆಗೆ ಕೊಟ್ಟ ಖಾಲಿ ಚೊಂಬನ್ನು ದೇವೇಗೌಡರು ಅಕ್ಷಯ ಪಾತ್ರೆ ಎಂದು ಸುಳ್ಳು ಹೇಳಿದ್ದಾರೆ. ಚೊಂಬು ಅಕ್ಷಯ ಪಾತ್ರೆ ಆಗಿದ್ದರೆ ರೈತರ ಬೆಳೆಗೆ ಕನಿಷ್ಠ ಬೆಂಬಲ ಬೆಲೆ ಕೊಡಲು ಏಕೆ ಸಾಧ್ಯವಾಗಲಿಲ್ಲ? ರೈತರ ಸಾಲ ಏಕೆ ಮನ್ನಾ ಮಾಡಲಿಲ್ಲ ಎಂದು ಪ್ರಶ್ನಿಸಿದರು. 

ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ಇಡೀ ದೇಶದ ರೈತರ ಸಾಲ 76 ಸಾವಿರ ಕೋಟಿ ರೂಪಾಯಿಯನ್ನು ಒಂದೇ ಸಾರಿ ಮನ್ನಾ ಮಾಡಿದರು. ಮೋದಿಯವರು 15 ಲಕ್ಷ ಕೋಟಿ ಶ್ರೀಮಂತ ಉದ್ಯಮಿಗಳ ಸಾಲ ಮನ್ನಾ ಮಾಡಿದರು. ಹೀಗಾಗಿ ಮೋದಿಯವರು ರಾಜ್ಯದ, ದೇಶದ ಮಧ್ಯಮ ವರ್ಗ ಮತ್ತು ಬಡವರ ಕೈಗೆ ಖಾಲಿ ಚೊಂಬು ಕೊಟ್ಟರು. ಶ್ರೀಮಂತ ಉದ್ಯಮಿಗಳ ಪಾಲಿಗೆ ಅಕ್ಷಯ ಪಾತ್ರೆ ಆದರು. ಈ ಸತ್ಯ ದೇವೇಗೌಡರಿಗೆ ಗೊತ್ತಿದ್ದೂ ಏಕೆ ರಾಜ್ಯದ ಜನರಿಗೆ ಸುಳ್ಳು ಹೇಳಿದರು ಎಂದು ಪ್ರಶ್ನಿಸಿದರು. 

ಪ್ರತೀ ಕುಟುಂಬದ ಹಣ ಉಳಿತಾಯ ಆಗುತ್ತಿದೆ: 
ನಾವು ನುಡಿದಂತೆ ನಡೆದು ಪ್ರತೀ ಕುಟುಂಬಗಳ ಖಾತೆಗೆ, ಜನರ ಜೇಬಿಗೆ ಹಣ ಹಾಕುತ್ತಿರುವ ನಮ್ಮ ಗ್ಯಾರಂಟಿಗಳಿಗೆ ಮತ ಹಾಕುತ್ತೀರೋ, ಸುಳ್ಳುಗಳ ಸರದಾರನ ಖಾಲಿ ಚೊಂಬಿಗೆ ಮತ ಹಾಕುತ್ತೀರೋ ಯೋಚಿಸಿ ಎಂದು ಕರೆ ನೀಡಿದರು. 

ಇದನ್ನೂ ಓದಿ- ನಿರುದ್ಯೋಗಿ ಯುವಕರಿಗೆ ಪಕೋಡ ಮಾರಿ ಅನ್ನೋಕೆ ಮೋದಿ ಪ್ರಧಾನಿಯೇ ಆಗಬೇಕಿತ್ತಾ? ಸಿಎಂ ಸಿದ್ದರಾಮಯ್ಯ ಕಿಡಿ

ಒಂದೂಕಾಲು ಲಕ್ಷ ಬೇಕೋ- ಖಾಲಿ ಚೊಂಬು ಬೇಕಾ: ಯೋಚಿಸಿ 
ರಾಜ್ಯ ಸರ್ಕಾರ ಮಹಿಳೆಯರಿಗೆ ಕೊಡುತ್ತಿರುವ ವಾರ್ಷಿಕ 24 ಸಾವಿರ ರೂಪಾಯಿ ಜತೆಗೆ ರಾಷ್ಟ್ರೀಯ ಕಾಂಗ್ರೆಸ್ ನಿಂದ ಮಹಿಳೆಯರಿಗೆ ವರ್ಷಕ್ಕೆ ಒಂದು ಲಕ್ಷ ರೂಪಾಯಿ ಕೊಡುವ ಘೋಷಣೆ ಮಾಡಿ ರಾಹುಲ್ ಗಾಂಧಿ,ಮಲ್ಲಿಕಾರ್ಜುನ ಖರ್ಗೆ ಸಹಿ ಹಾಕಿದ್ದಾರೆ. 

ಜತೆಗೆ ಇಡೀ ದೇಶದ ರೈತರ ಸಾಲ ಸಂಪೂರ್ಣ ಮನ್ನಾ, ನಿರುದ್ಯೋಗಿ ಯುವಕರ ಖಾತೆಗೆ ಲಕ್ಷ ರೂಪಾಯಿ ಹಾಕುವ ಗ್ಯಾರಂಟಿಯನ್ನೂ ನಾವು ನೀಡಿದ್ದೇವೆ. ಹೀಗಾಗಿ ಖಾಲಿ ಚೊಂಬಿಗೆ ಮತ ಹಾಕಿ ಹಾಳು ಮಾಡಿಕೊಳ್ತೀರೋ, ನಿಮ್ಮ ಬದುಕಿಗೆ ಸ್ಪಂದಿಸಿ ನಿಮ್ಮ ಜೇಬಿಗೆ ಶಕ್ತಿ ತುಂಬುವ ಗ್ಯಾರಂಟಿ ಕಾಂಗ್ರೆಸ್ಸಿಗೆ ಮತ ಹಾಕ್ತೀರೋ ನಿರ್ಧರಿಸಿ ಎಂದು ಕರೆ ನೀಡಿದರು. 

ಕುಮಾರಸ್ವಾಮಿ ಮಾತಿಗೆ ಸಿಎಂ ಆಕ್ರೋಶ!
ಸರ್ಕಾರದ ಗ್ಯಾರಂಟಿಗಳನ್ನು ಪಡೆದು ರಾಜ್ಯದ ಮಹಿಳೆಯರು ಹಾದಿ ತಪ್ಪಿದ್ದಾರೆ ಎನ್ನುವ ಕುಮಾರಸ್ವಾಮಿ ಅವರ ಹೇಳಿಕೆಗೆ ಸಿಟ್ಟಾದ ಸಿಎಂ, ಅವರ ಮನೆಯಲ್ಲೂ ಹೆಣ್ಣುಮಕ್ಕಳಿದ್ದಾರೆ. ಇಂಥಾ ಮಾತು ಹೇಳೋಕೆ ಅವರಿಗೆ ನಾಚಿಕೆಯಾದ್ರೂ ಆಗಲಿಲ್ವಾ ಎಂದು ಖಾರವಾಗಿ ಪ್ರಶ್ನಿಸಿದರು. 

ಅಡಿಕೆ ಆಮದು ದೊಡ್ಡ ದ್ರೋಹ
ಮೋದಿ ಸರ್ಕಾರ ಅಡಿಕೆಯನ್ನು ವಿದೇಶದಿಂದ ಆಮದು ಮಾಡಿಕೊಂಡು ರಾಜ್ಯದ ಅಡಿಕೆ ಬೆಳೆಗಾರರ ಕುಟುಂಬಕ್ಕೆ ದ್ರೋಹ ಬಗೆದಿದೆ. ಇದಕ್ಕೆ ತಕ್ಕ ಪಾಠ ಕಲಿಸಿ ಎಂದು ಕರೆ ನೀಡಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News