ಬೆಂಗಳೂರು: ಜೈ ಶ್ರೀರಾಮ್ ಎನ್ನುವುದು ಯಾರದ್ದೋ ಖಾಸಗಿ ಸ್ವತ್ತಲ್ಲ. ಅದು ಪ್ರತಿಯೊಬ್ಬ ಭಕ್ತರ ಸ್ವತ್ತು ಎಂದು ಸಿಎಂ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.
ಅವರು ಬಿದರಹಳ್ಳಿ ಹೋಬಳಿಯ, ಹಿರಂಡಹಳ್ಳಿ ಶ್ರೀರಾಮ ಟೆಂಪಲ್ ಟ್ರಸ್ಟ್ ನಿರ್ಮಿಸಿರುವ ಸಕುಟುಂಬ ಸಮೇತನಾಗಿರುವ ರಾಮ ಸೀತ ಲಕ್ಷ್ಮಣ ದೇವಾಲಯ ಹಾಗೂ 33 ಅಡಿ ಎತ್ತರದ ಏಕಶಿಲಾ ಆಂಜನೇಯ ಸ್ವಾಮಿ ವಿಗ್ರಹದ ಶಿಲಾ ಪ್ರತಿಷ್ಠಾಪನಾ ಕಾರ್ಯಕ್ರಮವನ್ನು ಉದ್ಘಾಟಿಸಿ, ಬಳಿಕ ಮಹಾ ಕುಂಭಾಭಿಷೇಕದಲ್ಲಿ ಪಾಲ್ಗೊಂಡು ಮಾತನಾಡುತ್ತಿದ್ದರು.
ಇದನ್ನೂ ಓದಿ: Ram Mandir: ರಾಮಮಂದಿರದಿಂದ ತಂದ ಅಕ್ಷತೆಯನ್ನು ಈ 5 ರೀತಿಗಳಲ್ಲಿ ಬಳಸಿ
ಅಧರ್ಮದ-ಅಮಾನವೀಯ ಕೆಲಸ ಮಾಡಿ ನಾಟಕೀಯವಾಗಿ ಪೂಜೆ ಮಾಡಿದರೆ ಆ ಪೂಜೆಯನ್ನು ದೇವರು ಒಪ್ಪಿಕೊಳ್ಳಲ್ಲ. ಸಕಲ ಜೀವಗಳೂ ಸಮಾನತೆ, ಪ್ರೀತಿಯಿಂದ ಬಾಳಬೇಕು ಎನ್ನುವುದು ಆದರ್ಶ ಪುರುಷ ಶ್ರೀರಾಮನ ಆಶಯ.ನಾನು ನಾಸ್ತಿಕನಲ್ಲ - ಆಸ್ತಿಕ. ನಮ್ಮೂರಲ್ಲೂ ರಾಮನ ಗುಡಿ ಕಟ್ಟಿಸಿದ್ದೇನೆ. ರಾಜ್ಯದ ಹಳ್ಳಿ ಹಳ್ಳಿಗಳಲ್ಲೂ ರಾಮನ ಗುಡಿಗಳು ಇವೆ. ಪ್ರತಿಯೊಬ್ಬರೂ ಅವರವರ ನಂಬಿಕೆಯಂತೆ ರಾಮನನ್ನು ಪೂಜಿಸುತ್ತಾತ್ತೇವೆ, ಗುಡಿ ಕಟ್ಟುತ್ತೇವೆ, ಪೂಜಿಸುತ್ತೇವೆ.
ಯಾವುದೇ ಧರ್ಮ ಜಾತಿ-ಧರ್ಮ ಆಧಾರದ ಮನುಷ್ಯ ದ್ವೇಷವನ್ನು ಹೇಳುವುದಿಲ್ಲ. ಶ್ರೀರಾಮ ಸಮಾಜಮುಖಿ ಆಗಿದ್ದರು. ಒಬ್ಬ ಮಡಿವಾಳನ ಮಾತಿಗೂ ಬೆಲೆ ಕೊಟ್ಟರು. ಪಿತೃವಾಕ್ಯ ಪರಿಪಾಲನೆಗೆ ವನವಾಸಕ್ಕೆ ಹೋದರು. ಶ್ರೀರಾಮ, ಲಕ್ಷ್ಮಣ, ಸೀತೆ, ಆಂಜನೇಯರನ್ನು ಬೇರ್ಪಡಿಸಲು ಸಾಧ್ಯವಿಲ್ಲ. ಇವರೆಲ್ಲಾ ಸಕುಟುಂಬಸ್ಥರು ಎಂದು ತಿಳಿಸಿದರು.
ಇದನ್ನೂ ಓದಿ: ಹಳಸಿದ ಬಾಯಲ್ಲಿ ದಾಲ್ಚಿನ್ನಿ ನೀರು ಕುಡಿಯಿರಿ: ಈ ಕಾಯಿಲೆಗಳಿಗೆ ಪರ್ಮನೆಂಟ್ ರಿಲೀಫ್ ಸಿಗುತ್ತೆ!
ಕುವೆಂಪು ಅವರ ಸರ್ವ ಜನಾಂಗದ ಶಾಂತಿಯ ತೋಟ ಎನ್ನುವ ಆಶಯ ಶ್ರೀರಾಮನ ಆದರ್ಶ ಮತ್ತು ವ್ಯಕ್ತಿತ್ವದಲ್ಲಿದೆ. ಮನುಷ್ಯ ಮನುಷ್ಯನನ್ನು ದ್ವೇಷಿಸಬಾರದು ಎನ್ನುವುದೇ ರಾಮಾಯಣ, ಮಹಾಭಾರತದ ಸಂದೇಶ. ಪರಿಶಿಷ್ಠ ಪಂಗಡ ಸಮುದಾಯದ ವಾಲ್ಮೀಕಿ ಅವರು ರಾಮಾಯಣವನ್ನು ಬರೆದು ವಿಶ್ವಕ್ಕೆ ಕೊಟ್ಟರು. ದೇವರು ನಮ್ಮ ಆತ್ಮ ಮತ್ತು ಶರೀರದಲ್ಲೇ ಇದ್ದಾನೆ ಎಂದು ಬಸವಣ್ಣನವರು ನುಡಿದರು. ದೇಹವೇ ದೇಗುಲ ಎನ್ನುವ ಸಂದೇಶವನ್ನು ಮನುಷ್ಯ ಪ್ರಪಂಚಕ್ಕೆ ನೀಡಿದ್ದಾರೆ. ಜೈ ಶ್ರೀರಾಮ್ ಎನ್ನುವುದು ಯಾರದ್ದೋ ಖಾಸಗಿ ಸ್ವತ್ತಲ್ಲ. ಅದು ಪ್ರತಿಯೊಬ್ಬ ಭಕ್ತರ ಸ್ವತ್ತು. ಜೈ ಶ್ರೀರಾಮ್ ಎಂದು ಘೋಷಣೆ ಮೂಲಕ ನನ್ನ ಮಾತು ಮುಗಿಸುತ್ತೇನೆ ಎಂದು ಹೇಳಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://t.co/lCSPNypK2U
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ