ಆ್ಯಂಬಿಡೆಂಟ್​ ವಂಚನೆ ಪ್ರಕರಣ: ಜನಾರ್ಧನ ರೆಡ್ಡಿ ಆಪ್ತ ಅಲಿಖಾನ್ ಬಂಧನ!

 ಬೆಂಗಳೂರಿನ 61ನೇ ಸಿಟಿ ಸಿವಿಲ್ ನ್ಯಾಯಾಲಯ ಮೆಹಫೂಜ್ ಅಲಿಖಾನ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ವಜಾಗೊಳಿಸಿ, 7 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. 

Last Updated : Nov 20, 2018, 06:48 PM IST
ಆ್ಯಂಬಿಡೆಂಟ್​ ವಂಚನೆ ಪ್ರಕರಣ: ಜನಾರ್ಧನ ರೆಡ್ಡಿ ಆಪ್ತ ಅಲಿಖಾನ್ ಬಂಧನ! title=

ಬೆಂಗಳೂರು: ಆ್ಯಂಬಿಡೆಂಟ್​ ವಂಚನೆ ಪ್ರಕರಣದಲ್ಲಿ ಬಂಧನದ ಭೀತಿ ಎದುರಿಸುತ್ತಿದ್ದ ಜನಾರ್ದನ ರೆಡ್ಡಿ ಆಪ್ತ ಅಲಿಖಾನ್ ಅನ್ನು ಇಂದು ಸಿಸಿಬಿ ಪೊಲೀಸರು ಬಂಧಿಸಿದ್ದು, 7 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. 

ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಬೆಂಗಳೂರಿನ 61ನೇ ಸಿಟಿ ಸಿವಿಲ್ ನ್ಯಾಯಾಲಯ ಮೆಹಫೂಜ್ ಅಲಿಖಾನ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ವಜಾಗೊಳಿಸಿ, 7 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಇದರಿಂದಾಗಿ ನವೆಂಬರ್ 27ರ ವರೆಗೆ ಅಲಿಖಾನ್ ಪರಪ್ಪನ ಅಗ್ರಹಾರ ಜೈಲಿನಲ್ಲಿಯೇ ಇರುವಂತಾಗಿದೆ. 

ಆ್ಯಂಬಿಡೆಂಟ್​ ವಂಚನೆ ಪ್ರಕರಣದಲ್ಲಿ 4ನೇ ಆರೋಪಿಯಾಗಿರುವ ಅಲಿಖಾನ್ ಮನೆ ಮೇಲೆ ದಾಳಿ ನಡೆಸಿರುವ ಸಿಸಿಬಿ ಪೊಲೀಸರು ಈಗಾಗಲೇ ಹಲವು ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಹಿಂದೆ ನಡೆದ ವಿಚಾರಣೆ ಸಂದರ್ಭದಲ್ಲಿ ನ್ಯಾಯಾಲಯಕ್ಕೆ ಹಣವನ್ನು ವಾಪಸ್ ನೀಡುವುದಾಗಿ ಅಲಿಖಾನ್ ಪ್ರಮಾಣ ಪತ್ರ ಸಲ್ಲಿಸಿದ್ದರು. ಆದರೆ, ಸಿಸಿಬಿ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿತ್ತು. ಇದರಿಂದಾಗಿ 10 ದಿನದಲ್ಲಿ 18 ಕೋಟಿ ಹಣವನ್ನು ವಾಪಸ್ ನೀಡುವುದಾಗಿ ಅಲಿಖಾನ್ ನ್ಯಾಯಾಲಯಕ್ಕೆ ಮತ್ತೆ ಪ್ರಮಾಣ ಪತ್ರ ಸಲ್ಲಿಸಿದ್ದರು.

Trending News