ಕೋಟೆನಾಡಿಗೆ ಅದ್ಧೂರಿ ಎಂಟ್ರಿ ಕೊಟ್ಟ ಜನಾರ್ದನ್ ರೆಡ್ಡಿ..!

ಒಂದು ಕಾಲದಲ್ಲಿ ಬಿಜೆಪಿ ಸರ್ಕಾರ ರಚನೆಯಲ್ಲಿ ರೆಡ್ಡಿ ಬ್ರದರ್ಸ್ ಬಹಳ ಪ್ರಮುಖ ಪಾತ್ರ ವಹಿಸಿದ್ದರು. ಅದ್ಯಾಕೋ ಏನೋ ರೆಡ್ಡಿ ಬಿಜೆಪಿ ಪಕ್ಷದಿಂದ ದೂರ ಸರಿದು, ನೂತನವಾಗಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸ್ಥಾಪಿಸಿದ್ದಾರೆ. ಇದರಿಂದ ಚುನಾವಣೆಯಲ್ಲಿ ಗೆಲ್ಲುವ ಕ್ಷೇತ್ರಗಳಲ್ಲಿ ಬಹುತೇಕ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ರೆಡ್ಡಿ ಚಿಂತನೆಯಲ್ಲಿದ್ದಾರೆ.

Written by - Zee Kannada News Desk | Last Updated : Feb 4, 2023, 11:09 PM IST
  • ಒಂದು ಕಾಲದಲ್ಲಿ ಬಿಜೆಪಿ ಸರ್ಕಾರ ರಚನೆಯಲ್ಲಿ ರೆಡ್ಡಿ ಬ್ರದರ್ಸ್ ಬಹಳ ಪ್ರಮುಖ ಪಾತ್ರ ವಹಿಸಿದ್ದರು.
  • ಅದ್ಯಾಕೋ ಏನೋ ರೆಡ್ಡಿ ಬಿಜೆಪಿ ಪಕ್ಷದಿಂದ ದೂರ ಸರಿದು, ನೂತನವಾಗಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸ್ಥಾಪಿಸಿದ್ದಾರೆ
  • ಇದರಿಂದ ಚುನಾವಣೆಯಲ್ಲಿ ಗೆಲ್ಲುವ ಕ್ಷೇತ್ರಗಳಲ್ಲಿ ಬಹುತೇಕ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ರೆಡ್ಡಿ ಚಿಂತನೆಯಲ್ಲಿದ್ದಾರೆ
ಕೋಟೆನಾಡಿಗೆ ಅದ್ಧೂರಿ ಎಂಟ್ರಿ ಕೊಟ್ಟ ಜನಾರ್ದನ್ ರೆಡ್ಡಿ..! title=

ಚಿತ್ರದುರ್ಗ: ರಾಜ್ಯ ವಿಧಾನಸಭಾ ಚುನಾವಣೆ ದಿನ ಕಳೆದಂತೆ ಚುನಾವಣೆಯ ಕಾವು ರಂಗೇರುತ್ತಿದ್ದು ವಿವಿಧ ರಾಜಕೀಯ ಪಕ್ಷಗಳು ಸಭೆ ಸಮಾರಂಭಗಳಲ್ಲಿ ತೊಡಗುತ್ತಿವೆ. ಇತ್ತ ಕೋಟೆ ನಾಡು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರದ ನೆಹರೂ ಮೈದಾನದಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಬೃಹತ್ ಬಹಿರಂಗ ಸಮಾವೇಶ ಹಮ್ಮಿಕೊಂಡಿತ್ತು, ಪಕ್ಷದ ಸಂಸ್ಥಾಪಕ ಹಾಗೂ ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಹಾಗೂ ಅವರ ಪತ್ನಿ ಅರುಣಾ ಲಕ್ಷ್ಮಿ ಆಗಮಿಸಿ ಅಭ್ಯರ್ಥಿ ಪರ ಪ್ರಚಾರ ಮಾಡಿದರು.

ಒಂದು ಕಾಲದಲ್ಲಿ ಬಿಜೆಪಿ ಸರ್ಕಾರ ರಚನೆಯಲ್ಲಿ ರೆಡ್ಡಿ ಬ್ರದರ್ಸ್ ಬಹಳ ಪ್ರಮುಖ ಪಾತ್ರ ವಹಿಸಿದ್ದರು. ಅದ್ಯಾಕೋ ಏನೋ ರೆಡ್ಡಿ ಬಿಜೆಪಿ ಪಕ್ಷದಿಂದ ದೂರ ಸರಿದು, ನೂತನವಾಗಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸ್ಥಾಪಿಸಿದ್ದಾರೆ. ಇದರಿಂದ ಚುನಾವಣೆಯಲ್ಲಿ ಗೆಲ್ಲುವ ಕ್ಷೇತ್ರಗಳಲ್ಲಿ ಬಹುತೇಕ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ರೆಡ್ಡಿ ಚಿಂತನೆಯಲ್ಲಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ತನ್ನ ಶಾಸಕರನ್ನು ಭದ್ರಮಾಡಿಕೊಳ್ಳಲಿ : ಸಿಎಂ ಬೊಮ್ಮಾಯಿ

ಅದರಂತೆಯೇ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ವಿಧಾನಸಭಾ ಕ್ಷೇತ್ರದ ಕೆಆರ್.ಪಿ ಪಕ್ಷದ ಅಭ್ಯರ್ಥಿಯಾಗಿ ಗನ್ನಾಯಕನಹಳ್ಳಿ ಹೆಚ್ ಮಹೇಶ್ ಅವರಿಗೆ ಟಿಕೆಟ್ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಹಿರಿಯೂರು ನಗರದಲ್ಲಿ ಬೃಹತ್ ಬಹಿರಂಗ ಸಮಾವೇಶ ಏರ್ಪಡಿಸಲಾಗಿತ್ತು.ಈ ಬಹಿರಂಗ ಸಮಾವೇಶಕ್ಕೆ ಮಹಿಳೆಯರು ಕುಂಭಮೇಳ, ವಿವಿಧ ಕಲಾ ತಂಡಗಳು ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮೂಲಕ ಪಕ್ಷದ ನಾಯಕರನ್ನು ಸ್ವಾಗತಿಸಿದರು.

ನನ್ನ ಜೊತೆಗೆ ಇದ್ದವರೇ ನನಗೆ ಮೊಸ ಮಾಡಿದ್ರು, ನನ್ನವರು ನನ್ನ ಜೊತೆಗೆ ಇದ್ದುಕೊಂಡೇ ನನಗೆ ತುಂಬಾ ಮೊಸ ಮಾಡಿದ್ರು ಎಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ ಹಾಗೂ ಮಾಜಿ ಸಚಿವ ಜನಾರ್ದನ ರೆಡ್ಡಿ ಹೇಳಿದರು.ಯಾರನ್ನೂ ಕುತಂತ್ರದಿಂದ ರಾಜಕೀಯ ಮಾಡಲಿಲ್ಲ. ನಾನು ಏನು ಹೇಳುತ್ತೇನೆ ಅದನ್ನೇ ಮಾಡುತ್ತೇನೆ ಎಂದರು.

4 ವರ್ಷಗಳ ಕಾಲ ಜೈಲಿನಲ್ಲಿ ಇಟ್ಟಿದ್ದರು. ರೆಡ್ಡಿ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗುತ್ತಾನೆ ಎಂಬ ನಿಟ್ಟಿನಲ್ಲಿ ನನ್ನನ್ನು ಬಂಧಿಸಿದ್ದರು.ನಾನು ಯಾವುದೇ ಸರ್ಕಾರಿ ಜಮೀನು, ಜಾಗ ಕಬಳಿಸಿ ಜೈಲಿಗೆ ಹೋಗಲಿಲ್ಲ. ನಮ್ಮವರೇ ನನ್ನನ್ನು ಬಂಧನದಲ್ಲಿ ಇರುವಂತೆ ಮಾಡಿದರು. ರಾಜಕೀಯವಾಗಿ ನನ್ನನ್ನು ತುಳಿಯಲು . ನನ್ನ ಜೊತೆಯಲ್ಲಿ ಇದ್ದವರು ನನಗೆ ಮೊಸ ಮಾಡಿದರು ಎಂದರು.

ಪಕ್ಷ ಕಟ್ಟಿ ಜನರ ಮುಂದೆ ಹೋಗುತ್ತೇನೆ ಎಂದು ಇಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸ್ಥಾಪಿಸಲಾಯಿತು.ನನ್ನ ಮಗಳ ಹೆರಿಗೆ ಸಂದರ್ಭದಲ್ಲಿ ನನಗೆ ತುಂಬಾ ಕಷ್ಟ ಕೊಟ್ಟಿದ್ದರು. ಬಾಣಂತಿ ಹಾಗೂ ಹಸುಗೂಸು ಪೋಟೋ ತೆಗೆಯಬೇಕು ಎಂದು ಅಧಿಕೃತ ಕೇಳುತ್ತಾರೆ ಎಂತಹ ನಾಚಿಕೆ ಆಗುತ್ತದೆ ಅಲ್ವಾ ಬಂಧುಗಳೇ ಎಂದು ಟೀಕಿಸಿದರು. ಬಳ್ಳಾರಿ ಜಿಲ್ಲೆಯಿಂದ ನಾನು ಹೊರಗಡೆ ಹೋದ ಹಿನ್ನೆಲೆಯಲ್ಲಿ ಗಂಗಾವತಿ ಕ್ಷೇತ್ರವನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಈ ಕ್ಷೇತ್ರದ ಕೆಆರ್.ಪಿ ಪಕ್ಷದ ಅಭ್ಯರ್ಥಿಯಾಗಿ ಗನ್ನಾಯಕನಹಳ್ಳಿ ಹೆಚ್ ಮಹೇಶ್ ಅವರನ್ನು ಘೋಷಿಸಿದರು. ಇಲ್ಲಿನ ಮತದಾರರು ಯಾವುದೇ ಆಸೆ ಆಮಿಷಗಳಿಗೆ ಬಲಿಯಾಗದೆ ತಾಲೂಕಿನ ಸ್ವಾಭಿಮಾನದ ಬದುಕಿಗೆ ಸ್ಥಳೀಯ ಅಭ್ಯರ್ಥಿಗೆ ಅವಕಾಶ ನೀಡಿ ಎಂದು ಕರೆ ನೀಡಿ, ಮುಂದಿನ ದಿನಗಳಲ್ಲಿ ಪ್ರಚಾರಕ್ಕೆ ಹಳ್ಳಿಗಳಿಗೆ ಪ್ರಚಾರಕ್ಕೆ ಬರುತ್ತೇನೆ ಎಂದು ತಿಳಿಸಿದರು.

ಇದನ್ನೂ ಓದಿ: "ಪಶುಸಂಗೋಪನಾ ಸಚಿವರಿಗೆ ಮೇಕೆ, ದನಗಳು ಯಾವುದು ಎಂದು ಗೊತ್ತಿಲ್ಲ"

ಗಾಲಿ ಜನಾರ್ಧನ ರೆಡ್ಡಿಯವರ ಬಗ್ಗೆ ಯಾರೂ ಏನು ಮಾತಾಡಿದರೂ, ಆರೋಪಿಸಿದರೂ ವಜ್ರ ವಜ್ರನೇ ಎಂದು ರೆಡ್ಡಿ ಪತ್ನಿ ಅರುಣಾ ಲಕ್ಷ್ಮಿ ಹೇಳಿದರು. ಕನ್ನಡ ಭುವನೇಶ್ವರಿಯ ದೇವಿಗೆ ನಮಸ್ಕಾರಿಸಿ ಎಂದು ಮಾತು ಆರಂಭಿಸಿದ ಅರುಣಾ ಲಕ್ಷ್ಮಿ ಜನಾರ್ಧನ ರೆಡ್ಡಿಯವರು ರಾಜಕೀಯ ನಾಯಕ ಅನ್ನುವುದಕ್ಕಿಂತ ಉತ್ತಮ ಮನಸ್ಸಿನ ವ್ಯಕ್ತಿಯಾಗಿದ್ದಾರೆ.  ನಮ್ಮ ಪಕ್ಷದ ನಾಯಕರಾದ ಜನಾರ್ಧನ ರೆಡ್ಡಿಯವರು ಹಿಂದೆ ಮಂತ್ರಿಯಾಗಿದ್ದಾಗ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಯಾರು ಏನು ಮಾತಾಡಿದರು, ಆರೋಪಿಸಿದರು ಜನಾರ್ಧನ ರೆಡ್ಡಿಯವರು ವಜ್ರ ವಜ್ರನೇ ಎಂದರು. ನಾವು ಅನೇಕ ಕಷ್ಟಗಳನ್ನು ಎದುರಿಸಿ ಬಂದಿದ್ದೇವೆ. ರಾಜ್ಯದ ಸಮಗ್ರ ಅಭಿವೃದ್ಧಿಗಾಗಿ ರಾಜ್ಯದಲ್ಲಿ ಒಮ್ಮೆ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಮೇಲೆ ಆಶಿರ್ವಾದ ಮಾಡಿ. ಕೆಆರ್.ಪಿ ಪಕ್ಷ ನಮ್ಮದು, ಅಧಿಕಾರ ಜನರದು ಎಂದರು. ಬಸವಣ್ಣನವರ ತತ್ವಗಳ ಆಧಾರದ ಮೇಲೆ ಪಕ್ಷವನ್ನು ಸ್ಥಾಪಿಸಲಾಗಿದೆ. ಇದು ನಿಮ್ಮ ಪಕ್ಷ ನಿಮ್ಮ ಮನೆಯ ಪಕ್ಷವಾಗಿದೆ. ಪಕ್ಷವನ್ನು ಅಧಿಕಾರಕ್ಕೆ ತರಲು ಎಲ್ಲರೂ ಶ್ರಮಿಸಬೇಕು ಎಂದು ಕರೆ ನೀಡಿದರು.

ಒಟ್ಟಾರೆ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಕೋಟೆಗಳ ನಾಡು ಚಿತ್ರದುರ್ಗದಲ್ಲಿ ಎಂಟ್ರಿ ಕೊಟ್ಟಿದೆ.   ಹಿರಿಯೂರು ಕ್ಷೇತ್ರದಲ್ಲಿ ಸ್ಥಳೀಯ ಅಭ್ಯರ್ಥಿ ಯಾದ ಹಿನ್ನೆಲೆಯಲ್ಲಿಇದು ಬಿಜೆಪಿ ಮತ್ತು ಕಾಂಗ್ರೆಸ್ ಜೆಡಿಎಸ್ ಗೆ ಹಿನ್ನಡೆಯಾಗಲಿದೆ ಎಂಬ ಮಾತುಗಳು ಕೇಳಿ ಬಂದಿವೆ.

-ಮಾಲತೇಶ್ ಅರಸ್. ಜೀ ಕನ್ನಡ ನ್ಯೂಸ್ ಚಿತ್ರದುರ್ಗ

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News