ಬೆಂಗಳೂರು: ರಮೇಶ್ ಜಾರಕಿಹೋಳಿ ಸಿಡಿ ಪ್ರಕರಣಕ್ಕೆ ಹೊಸ ಬೆಳವಣಿಗೆಯೋಂದು ನಡೆದಿದ್ದು, ದೂರುದಾರ ದೂರು ವಾಪಸ್ ಪಡೆದ ಬೆನ್ನಲ್ಲೇ ಜಾರಕಿಹೊಳಿ ಸಹೋದರರು ತುರ್ತು ಸುದ್ದಿಗೋಷ್ಠಿ ಕರೆದಿದ್ದಾರೆ.
ದಿನೇಶ್ ಕಲ್ಲಹಳ್ಳಿ ದೂರು ನೀಡಿದ್ದ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ(Ramesh Jarkiholi) ರಾಜೀನಾಮೆ ನೀಡಿದ್ದರು. ಇದೀಗ ತಮ್ಮ ವಕೀಲರ ಮೂಲಕ ಪೊಲೀಸ್ ಠಾಣೆಗೆ ದೂರು ಹಿಂತೆಗೆದುಕೊಳ್ಳಲು ಅರ್ಜಿ ಸಲ್ಲಿಸಿದ್ದಾರೆ. ಕೇವಲ ಆರೇ ದಿನಗಳಲ್ಲಿ ದಿನೇಶ್ ಕಲ್ಲಹಳ್ಳಿ ಯೂಟರ್ನ್ ತೆಗೆದುಕೊಂಡಿರುವುದು ರಾಜ್ಯ ರಾಜಕೀಯದಲ್ಲಿ ಕುತೂಹಲ ಮೂಡಿಸಿದೆ.
B Sriramulu: 'ಸಿದ್ದು- ಡಿಕೆಶಿ ಜೋಡೆತ್ತುಗಳಲ್ಲ, ಅಧಿಕಾರಕ್ಕೆ ಬಡಿದಾಡುವ ಹೋರಿಗಳು'
ದಿನೇಶ್ ಕಲ್ಲಹಳ್ಳಿ ದೂರು ವಾಪಸ್ ಪಡೆದ ನಂತರ, ಬಾಲಚಂದ್ರ ಜಾರಕಿಹೊಳಿ(Balachandra Jarkiholi) ಹಾಗೂ ರಮೇಶ್ ಜಾರಕಿಹೊಳಿ ನಗರದ ಕುಮಾರಕೃಪಾ ಅತಿಥಿಗೃಹದಲ್ಲಿ ತುರ್ತು ಸುದ್ದಿಗೋಷ್ಠಿ ಕರೆದಿದ್ದಾರೆ.
Ramesh Jarkiholi Sex Scandal: ದೂರು ಹಿಂಪಡೆಯಲು ಮುಂದಾದ ದಿನೇಶ್ ಕಲ್ಲಹಳ್ಳಿ!
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.