ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ 53ನೇ ಉಪಮೇಯರ್ ಆಗಿ ಜೆಡಿಎಸ್ನ ಭದ್ರೇಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ರಮೀಳಾ ಉಮಾಶಂಕರ್ ನಿಧನದಿಂದ ತೆರವಾಗಿದ್ದ ಉಪಮೇಯರ್ ಸ್ಥಾನಕ್ಕೆ ಇಂದು ನಡೆದ ಚುನಾವಣೆಯಲ್ಲಿ ನಾಗಪುರ ವಾರ್ಡ್ ಸದಸ್ಯ ಭದ್ರೇಗೌಡ ಆಯ್ಕೆಯಾಗಿದ್ದಾರೆ. ಸಂಖ್ಯಾಬಲದ ಕೊರತೆಯಿಂದಾಗಿ ಬಿಜೆಪಿ ತನ್ನ ಅಭ್ಯಥಿಯನ್ನು ಕಣಕ್ಕೆ ಇಳಿಸದ ಹಿನ್ನೆಲೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ಭದ್ರೆಗೌಡ ಅವರನ್ನು ಪ್ರಾದೇಶಿಕ ಆಯುಕ್ತರು ಉಪಮೇಯರ್ ಎಂದು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಭದ್ರೇಗೌಡ ಅವರು, ಬೆಂಗಳೂರಿನ ಅಭಿವೃದ್ಧಿಗಾಗಿ ಮೇಯರ್ ಗೆ ಸಾಥ್ ನಿಡುವ ಮೂಲಕ ಕಾರ್ಯನಿರ್ವಹಿಸುತ್ತೇನೆ. ಹಸಿರು ಬೆಂಗಳೂರು ನಿರ್ಮಾಣಕ್ಕೆ ಆದ್ಯತೆ ನೀಡುತ್ತೇನೆ. ಹಾಗಯೇ 110 ಹಳ್ಳಿಗಳಿಗೆ ಕುಡಿಯುವ ನೀರು ವ್ಯವಸ್ಥೆ ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯಗನ್ನು ಮಾಡುವ ಗುರಿ ಹೊಂದಿದ್ದೇನೆ ಎಂದು ಹೇಳಿದರು.