ಕಲುಷಿತ ಕಾಂಗ್ರೆಸ್‌ ಎಂದು ಕೈ ಪಕ್ಷದ ಮೇಲೆ ಕಿಡಿಕಾರಿದ ಜೆಡಿಎಸ್

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಲ್ಲಡ್ಕ ಪ್ರಭಾಕರ್ ಭಟ್ ಅವರ ಶಾಲೆಗೆ ಭೇಟಿ ನೀಡಿದ್ದ ಘಟನೆಯನ್ನೇ ವಿರೂಪವಾಗಿ ಚಿತ್ರಿಸಲು ಯತ್ನಿಸಿದ ಕಾಂಗ್ರೆಸ್ ಪಕ್ಷಕ್ಕೆ ಜೆಡಿಎಸ್ ತಿರುಗೇಟು ಕೊಟ್ಟಿದೆ.

Written by - Prashobh Devanahalli | Edited by - Manjunath N | Last Updated : Dec 24, 2023, 05:25 PM IST
  • ಹೆಚ್.ಡಿ.ಕುಮಾರಸ್ವಾಮಿ ನಿಂದನೆಯೇ ಕಾಂಗ್ರೆಸ್ಸಿಗೆ ಅಂಟಿದ ಬೇನೆ
  • ಕಲ್ಲಡ್ಕ ಪ್ರಭಾಕರ ಭಟ್ಟರ ಶ್ರೀರಾಮ ವಿದ್ಯಾಕೇಂದ್ರಕ್ಕೆ ಕುಮಾರಸ್ವಾಮಿ ಅವರು ಮುಕ್ತ ಮನಸ್ಸಿನಿಂದ ಭೇಟಿ ನೀಡಿದ್ದರು
 ಕಲುಷಿತ ಕಾಂಗ್ರೆಸ್‌ ಎಂದು ಕೈ ಪಕ್ಷದ ಮೇಲೆ ಕಿಡಿಕಾರಿದ ಜೆಡಿಎಸ್ title=

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಲ್ಲಡ್ಕ ಪ್ರಭಾಕರ್ ಭಟ್ ಅವರ ಶಾಲೆಗೆ ಭೇಟಿ ನೀಡಿದ್ದ ಘಟನೆಯನ್ನೇ ವಿರೂಪವಾಗಿ ಚಿತ್ರಿಸಲು ಯತ್ನಿಸಿದ ಕಾಂಗ್ರೆಸ್ ಪಕ್ಷಕ್ಕೆ ಜೆಡಿಎಸ್ ತಿರುಗೇಟು ಕೊಟ್ಟಿದೆ.

ಇದನ್ನೂ ಓದಿ: ಡಿವೋರ್ಸ್ ಸುದ್ದಿ ಬೆನ್ನಲೇ ಪಬ್ಲಿಕ್’ನಲ್ಲೇ ಜಗಳವಾಡಿದ ಅಭಿಷೇಕ್-ಐಶ್ವರ್ಯಾ ರೈ!

ಜಾಲತಾಣ ಎಕ್ಸ್ ನಲ್ಲಿ ಕಾಂಗ್ರೆಸ್ ಮಾಡಿದ್ದ ಟೀಕೆ ಪ್ರತ್ಯುತ್ತರ ನೀಡಿರುವ ಪಕ್ಷವು, ಆ ಪಕ್ಷವನ್ನು ಕಲುಷಿತ ಕಾಂಗ್ರೆಸ್ ಎಂದು ಕಿಡಿಕಾರಿದೆ.ಕಲುಷಿತ ಮನಸ್ಸಿನ ಕಾಂಗ್ರೆಸ್ ಕಣ್ಣಿಗೆ ಸದಾ ಕಾಮಾಲೆಯೇ. ಹೆಚ್.ಡಿ.ಕುಮಾರಸ್ವಾಮಿ ಅವರ ನಿಂದನೆಯೇ ಅದಕ್ಕೆ ಅಂಟಿದ ಬೇನೆ. ದೇಶವನ್ನೇ ಒಡೆದ ಪಕ್ಷಕ್ಕೆ ಹಿಂದುತ್ವವೂ ರುಚಿಸುವುದಿಲ್ಲ, ನಮ್ಮ ಆದರ್ಶ ಪರಂಪರೆಯೂ ಆಗುವುದಿಲ್ಲ. ಅಷ್ಟೇ ಏಕೆ, ಭಾರತವೂ ಸಹ್ಯವಲ್ಲ! ಅದರ , ವಿದೇಶಿ ಜೀನ್ಸ್‌ ಎಂದೂ ಭಾರತೀಯತೆಯನ್ನು ಒಪ್ಪುದೇ ಇಲ್ಲ. ಇದೇನು ಹೊಸತಲ್ಲ ಎಂದು ಜೆಡಿಎಸ್ ಆಕ್ರೋಶ ವ್ಯಕ್ತಪಡಿಸಿದೆ.

ಇದನ್ನೂ ಓದಿ: 35 ವರ್ಷವಾದ್ರೂ ಈ ಒಂದು ಬಲವಾದ ಕಾರಣಕ್ಕಾಗಿ ಇನ್ನೂ ಮದುವೆಯಾಗಿಲ್ಲ ಅನುಶ್ರೀ! ಸ್ವತಃ ಅವರೇ ಹೇಳಿದ ಸತ್ಯವಿದು

ಕಲ್ಲಡ್ಕ ಪ್ರಭಾಕರ ಭಟ್ಟರ ಶ್ರೀರಾಮ ವಿದ್ಯಾಕೇಂದ್ರಕ್ಕೆ ಕುಮಾರಸ್ವಾಮಿ ಅವರು ಮುಕ್ತ ಮನಸ್ಸಿನಿಂದ ಭೇಟಿ ನೀಡಿದ್ದರು, ಹೌದು. ಅಲ್ಲಿನ ಶೈಕ್ಷಣಿಕ ವಾತಾವರಣ, ಮಕ್ಕಳ ಶಿಸ್ತು, ದೇಶಪ್ರೇಮವನ್ನು ಕಣ್ಣಾರೆ ಕಂಡ ಅವರ ಮನಸ್ಸಿನಲ್ಲಿ ಪರಿವರ್ತನೆ ಆಗಿದ್ದರೆ, ಅದೇನು ಮಹಾ ಅಪರಾಧವೇ? ಎಂದು ಜೆಡಿಎಸ್ ಪ್ರಶ್ನಿಸಿದೆ.ಪರಿವರ್ತನೆಯೇ ಜಗದ ನಿಯಮ, ಪ್ರತಿಗಾಮಿತನವೇ ಮಾರಣಹೋಮ. ತುಷ್ಠೀಕರಣದ ಅಂಟುವ್ಯಾಧಿಯಿಂದ ಬಳಲುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ  ಮಾರಣಹೋಮದಲ್ಲಿಯೇ ನಂಬಿಕೆ! ಎಂದು ಜೆಡಿಎಸ್ ಆಪಾದಿಸಿದೆ.

ಪ್ರಧಾನಿಗಳಾದ ನರೇಂದ್ರ ಮೋದಿ ಅವರ ಜತೆ ರಾಜ್ಯದ ಅಭಿವೃದ್ಧಿಯ ಬಗ್ಗೆಯೇ ಕುಮಾರಸ್ವಾಮಿ ಅವರು ಚರ್ಚಿಸಿದ್ದಾರೆ. ಸಂಶಯ ಪಿಶಾಚಿ ಕಾಂಗ್ರೆಸ್ಸಿಗೆ ಹುಳುಕು ಹುಡುಕುವುದೇ ಚಟ. ಜಾತಿ, ಧರ್ಮಗಳನ್ನು ಒಡೆದು ದೇಶಕ್ಕೆ ಶಾಪವಾಗಿ, ಬೆದರಿಕೆಯಾಗಿರುವ ಪ್ರತಿಗಾಮಿ ಪಕ್ಷಕ್ಕೆ ಶಾಂತಿ, ಸೌಹಾರ್ದತೆ ಎಂದರೇನೇ ಅಪಥ್ಯ ಎಂದು ಹೇಳಿದೆ ಜೆಡಿಎಸ್.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News