ಮೈಸೂರು : ಐಎಎಸ್ ಅಧಿಕಾರಿ ರೋಹಿಣಿಯವರು ಮೈಸೂರು ಡಿಸಿ ಆಗಿದ್ದಾಗ ಹಲವು ಅಕ್ರಮಗಳನ್ನು ಬಯಲು ಮಾಡಿದ್ದಕ್ಕೆ ನನ್ನ ವಿರುದ್ಧ ಸುಳ್ಳು ಆರೋಪ ಮಾಡಲಾಗಿದೆ. ಈ ಸಂಬಂಧ ರೋಹಿಣಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲು ಮಾಡುವುದಾಗಿ ಜೆಡಿಎಸ್ ಶಾಸಕ ಸಾ.ರಾ.ಮಹೇಶ್ ಹೇಳಿಕೆ ನೀಡಿದರು.
ಈ ಬಗ್ಗೆ ಇಂದು ಶಾಸಕ ಸಾ. ರಾ ಮಹೇಶ್, ಹಿರಿಯ ವಕೀಲ್ ಅರುಣ್ ಕುಮಾರ್ ಜಂಟಿ ಸುದ್ದಿಗೋಷ್ಠಿ ನಡೆಸಿ, ಮಾತನಾಡೈದ ಅವರು, ಐಎಎಸ್ ಅಧಿಕಾರಿಗಳಿಗೆ ಬುದ್ದಿ ಜಾಸ್ತಿ ಇರುತ್ತೆ. ರೋಹಿಣಿ ಸಿಂಧೂರಿ ಅವರು ಆಡಿಯೋದಲ್ಲಿ ಸಾ.ರಾ.ಮಹೇಶ್ ಜೈಲಲ್ಲಿ ಇರುತ್ತಾರೆ ಎಂದು ಆರೋಪ ಮಾಡಿದ್ದಾರೆ. ಈ ಸಂಬಂಧ ಸಾ.ರಾ.ಮಹೇಶ್ ಪರವಾಗಿ 01-07-21ರಂದು ಲೀಗಲ್ ನೋಟಿಸ್ ಜಾರಿ ಮಾಡಿದ್ದೆವು.ಸಾಮಾಜಿಕ ಜಾಲತಾಣದ ಆಡಿಯೋದಲ್ಲಿ ನಿಮ್ಮ ಧ್ವನಿಯೇ, ಉದ್ದೇಶ ಪೂರ್ವಕವಾಗಿ ಮಾತನಾಡಿದ್ದೀರ ಎಂದು ಎರಡು ಪ್ರಶ್ನೆ ಕೇಳಿದ್ದೆವು. ಖಾಸಗಿ ಸಂಭಾಷಣೆ ಅಂತ ಒಪ್ಪಿಕೊಂಡಿದ್ದಾರೆ. ಅದರ ಆಧಾರದ ಮೇಲೆ 2ನೇ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಒಂದು ಕೋಟಿ ರೂ. ಮಾನನಷ್ಟ ಮೊಕದ್ದಮೆ ಹಾಕಿದ್ದೇವೆ. 20-10-2022ರಂದು ರೋಹಿಣಿ ಸಿಂಧೂರಿ ನ್ಯಾಯಾಲಯಕ್ಕೆ ಉತ್ತರ ಕೊಡಬೇಕಾಗುತ್ತೆ. ಈಗಾಗಲೇ ಖಾಸಗಿ ಸಂಭಾಷಣೆ ಅಂತ ಒಪ್ಪಿಕೊಂಡಿರುವುದರಿಂದ ಬೇರೆ ಹೇಳಿಕೆ ನೀಡಲು ಅವಕಾಶ ಇಲ್ಲ. ಆ ಸಂಭಾಷಣೆಯ ಹಿನ್ನೆಲೆ, ಉದ್ದೇಶವನ್ನೂ ಕೇಸ್‌ಗೆ ಸೇರಿಸಿಕೊಳ್ಳಲು ಕಾನೂನಿನಲ್ಲಿ ಅವಕಾಶ ಇದೆ.
ಇದನ್ನೂ ಓದಿ : ಸಿದ್ದರಾಮಯ್ಯ ʼಜನಸ್ಪಂದನೆʼಗೆ ಹೆದರಿ ಬುಡಕ್ಕೆ ಬೆಂಕಿ ಬಿದ್ದವರಂತೆ ಒದ್ದಾಡುತ್ತಿದ್ದಾರೆ : ಬಿಜೆಪಿ
ಇನ್ನೂ ಶಾಸಕ ಸಾ.ರಾ.ಮಹೇಶ್ ಮಾತನಾಡಿ, ಮೈಸೂರು ಜಿಲ್ಲಾಧಿಕಾರಿಯಾಗಿದ್ದಾಗ ನನ್ನ ವಿರುದ್ಧ ಭೂಕಬಳಿಕೆ ಆರೋಪ ಮಾಡಿದ್ದರು. ಪ್ರಾದೇಶಿಕ ಆಯುಕ್ತರು ಆರೋಪ ಸುಳ್ಳು ಎಂದು ಹೇಳಿದ್ದಾರೆ. ಅವರ ವಿರುದ್ಧ ಕಾನೂನು ಹೋರಾಟ ಮಾಡುವುದಾಗಿ ಹೇಳಿದ್ದೆ. ಆ ನಿಟ್ಟಿನಲ್ಲಿ ಮೈಸೂರು ನ್ಯಾಯಾಲಯದಲ್ಲಿ ಸಿವಿಲ್ ಮತ್ತು ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದೇನೆ ಎಂದು ಹೇಳಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.